AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನೀರು ಪೂರೈಕೆ ಮೇಲ್ವಿಚಾರಣೆಗೆ ಬರಲಿದೆ ಎಐ, ರೋಬೋಟ್​ಗಳು!

ಕತ್ರಿಗುಪ್ಪೆ, ಯಲಹಂಕದ ಕೆಲವು ಪ್ರದೇಶ ಸೇರಿದಂತೆ ಬೆಂಗಳೂರಿನ ಕೆಲವು ಕಡೆಗಳಲ್ಲಿ ಕಾವೇರಿ ನೀರು ಕಲುಷಿತಗೊಂಡ ಬಗ್ಗೆ ಇತ್ತೀಚೆಗೆ ವರದಿಯಾಗಿತ್ತು. ಇದೀಗ ಅಂಥ ಸಮಸ್ಯೆಗೆ ಬ್ರೇಕ್ ಹಾಕಲು, ನೀರು ಪೂರೈಕೆ ನಿರ್ವಹಣೆ ಮಾಡಲು ಕೃತಕಬುದ್ಧಿಮತ್ತೆ (ಎಐ) ಹಾಗೂ ರೋಬೋಟ್ ತಂತ್ರಜ್ಞಾನ ಬಳಸಲು ಬೆಂಗಳೂರು ಜಲಮಂಡಳಿ ಮುಂದಾಗಿದೆ.

ಕಾವೇರಿ ನೀರು ಪೂರೈಕೆ ಮೇಲ್ವಿಚಾರಣೆಗೆ ಬರಲಿದೆ ಎಐ, ರೋಬೋಟ್​ಗಳು!
ಇತ್ತೀಚೆಗೆ ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ ಪೂರೈಕೆಯಾಗಿದ್ದ ಕಲುಷಿತ ನೀರುImage Credit source: tv9
ಗಣಪತಿ ಶರ್ಮಾ
|

Updated on: Jul 30, 2026 | 8:24 AM

Share

ಮುಖ್ಯಾಂಶಗಳು

  • AI ಮೂಲಕ ನೀರು ಸೋರಿಕೆ, ಕಲುಷಿತಗೊಳ್ಳುವಿಕೆ ಪತ್ತೆ
  • ರೋಬೋಟ್‌ಗಳಿಂದ ಪೈಪ್‌ಲೈನ್ ಪರಿಶೀಲನೆ
  • ಖಾಸಗಿ ಕಂಪನಿಗಳ ಸಹಯೋಗದಲ್ಲಿ ಯೋಜನೆ

ಬೆಂಗಳೂರು, ಜುಲೈ 30: ಬೆಂಗಳೂರಿನ (Bengaluru) ಕೆಲವು ಪ್ರದೇಶಗಳಲ್ಲಿ ಕಾವೇರಿ ನೀರು ಕಲುಷಿತಗೊಂಡ ಬಗ್ಗೆ ಇತ್ತೀಚೆಗೆ ವರದಿಯಾಗಿತ್ತು. ಕತ್ರಿಗುಪ್ಪೆ ಮತ್ತು ಯಲಹಂಕದ ಕೆಲವು ಪ್ರದೇಶಗಳಲ್ಲಿ ಕಾವೇರಿ ನೀರಿನಲ್ಲಿ ಕೊಳಚೆ ನೀರು ಸೇರಿಕೊಂಡು ಜನರು ತೊಂದರೆ ಅನುಭವಿಸುವಂತಾಗಿತ್ತು. ಇದೀಗ ಇಂತಹ ಸಮಸ್ಯೆಗಳಿಗೆಲ್ಲ ಬ್ರೇಕ್ ಹಾಕಲು ಬೆಂಗಳೂರು ಜಲ ಮಂಡಳಿ (BWSSB) ಹೊಸದೊಂದು ಪ್ರಯೋಗಕ್ಕೆ ಮುಂದಾಗಿದೆ. ನಗರದ ನೀರು ಪೂರೈಕೆ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ಹೊಸ ತಂತ್ರಜ್ಞಾನ ಪ್ರಯೋಗಕ್ಕೆ ಮುಂದಾಗಿದೆ. ನೀರಿನ ಪೈಪ್‌ಲೈನ್‌ಗಳ ಸೋರಿಕೆ, ಹಾನಿ ಹಾಗೂ ನೀರು ಕಲುಷಿತಗೊಳ್ಳುವ ಸಾಧ್ಯತೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಕೃತಕ ಬುದ್ಧಿಮತ್ತೆ (AI) ಮತ್ತು ರೋಬೋಟಿಕ್ಸ್ ತಂತ್ರಜ್ಞಾನವನ್ನು ಬಳಸುವ ಪ್ರಾಯೋಗಿಕ ಯೋಜನೆ ಆರಂಭವಾಗಲಿದೆ.

18 ತಿಂಗಳ ಈ ಪ್ರಾಯೋಗಿಕ ಯೋಜನೆಯನ್ನು ಬೆಂಗಳೂರಿನ ದಕ್ಷಿಣ ವಿಭಾಗದಲ್ಲಿ ಜಾರಿಗೊಳಿಸಲಾಗುತ್ತಿದೆ. ಅಂಡರ್​ಗ್ರೌಂಡ್ ನೀರು ಪೂರೈಕೆ ಪೈಪ್‌ಲೈನ್‌ಗಳನ್ನು ಪರಿಶೀಲಿಸಲು ಸುಧಾರಿತ ರೋಬೋಟಿಕ್ ಉಪಕರಣಗಳನ್ನು ಬಳಸಲಾಗುತ್ತದೆ.

ಹೇಗೆ ಕೆಲಸ ಮಾಡಲಿದೆ ರೋಬೋಟಿಕ್ ತಂತ್ರಜ್ಞಾನ?

ಪೈಪ್‌ಲೈನ್‌ನಲ್ಲಿ ಸೋರಿಕೆ, ಹಾನಿ ಅಥವಾ ನೀರು ಕಲುಷಿತಗೊಂಡಿರುವುದನ್ನು ರೋಬೋಟಿಕ್ ತಂತ್ರಜ್ಞಾನ ಪತ್ತೆಹಚ್ಚಲಿದೆ. ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ತಂತ್ರಜ್ಞಾನದ ಮೂಲಕ ಎಚ್ಚರಿಕೆ ರವಾನಿಸಲಿದೆ. ಇದರಿಂದ ಸಮಸ್ಯೆಯನ್ನು ಆರಂಭದಲ್ಲೇ ಗುರುತಿಸಿ ತ್ವರಿತ ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ. ನೀರು ಪೋಲಾಗುವುದು ಹಾಗೂ ಆದಾಯದ ಮೇಲೆ ಉಂಟಾಗುವ ನಕಾರಾತ್ಮಕ ಪರಿಣಾಮವನ್ನು ಕಡಿಮೆ ಮಾಡುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ಹೊಸ ಕ್ರಮದ ಬಗ್ಗೆ ಜಲಮಂಡಳಿ ಹೇಳುವುದೇನು?

ಹೊಸ ತಂತ್ರಜ್ಞಾನದಿಂದ ನೀರು ಸೋರಿಕೆ, ಪೈಪ್‌ಲೈನ್ ದೋಷ, ನೀರಿನ ಕಲುಷಿತಗೊಳ್ಳುವುದು ಸೇರಿದಂತೆ ಹಲವು ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಸಾಧ್ಯವಾಗಲಿದೆ ಎಂದು ಜಲಮಂಡಳಿ ಅಧ್ಯಕ್ಷೆ ಮಂಜುಳಾ ಎನ್. ಹೇಳಿದ್ದಾರೆ.

ಇದನ್ನೂ ಓದಿ: ಕಾವೇರಿ ನದಿಗೆ ಸೇರ್ತಿದೆ ಮೈಸೂರಿನ ಕೊಳಚೆ ನೀರು; ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಜೀವನದಿ ಕಲುಷಿತ

ಈ ಯೋಜನೆಯನ್ನು ಖಾಸಗಿ ಕಂಪನಿಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ. ಟೈಟಾನ್ ಕಂಪನಿ ಲಿಮಿಟೆಡ್​ನ ‘Design Impact Award’ ಅನುದಾನ ಕಾರ್ಯಕ್ರಮದಡಿ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಇದಕ್ಕಾಗಿ ಜಲಮಂಡಳಿ ಮೇಲೆ ಯಾವುದೇ ಹೆಚ್ಚುವರಿ ಆರ್ಥಿಕ ಹೊರೆ ಬೀಳುವುದಿಲ್ಲ ಎಂದು ಮಂಡಳಿ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ