Bengaluru Weather Today: ಮ್ಯಾಂಡಸ್ ಚಂಡಮಾರುತದ ಎಫೆಕ್ಟ್; ಬೆಂಗಳೂರಿನಲ್ಲಿ ಇಂದಿನಿಂದ 4 ದಿನ ಮಳೆ ಸಾಧ್ಯತೆ
Bangalore Rain: ಗುರುವಾರ ಬೆಳಿಗ್ಗೆ ತಮಿಳುನಾಡು ಮತ್ತು ಪುದುಚೇರಿ ಕರಾವಳಿಯನ್ನು ಈ ಚಂಡಮಾರುತ ಅಪ್ಪಳಿಸಿದೆ. ಇದರ ಪರಿಣಾಮವಾಗಿ ಬೆಂಗಳೂರಿನಲ್ಲೂ ತುಂತುರು ಮಳೆ ಮತ್ತು ಮೋಡ ಕವಿದ ವಾತಾವರಣ ಇರಲಿದೆ.
Karnataka Rain: ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮದಿಂದ ಆಂಧ್ರ ಪ್ರದೇಶ ಮತ್ತು ತಮಿಳುನಾಡಿನಲ್ಲಿ ಮಳೆಯ (Tamil Nadu Rain) ಅಬ್ಬರ ಹೆಚ್ಚಾಗಿದೆ. ಇದರ ಪರಿಣಾಮವಾಗಿ ಬೆಂಗಳೂರಿನಲ್ಲೂ (Bengaluru Rains) ಇಂದಿನಿಂದ ಡಿ. 12ರವರೆಗೆ ಮಳೆ ಸುರಿಯಲಿದೆ. ಮ್ಯಾಂಡಸ್ ಚಂಡಮಾರುತದ (Cyclone Mandous) ಪರಿಣಾಮದಿಂದ ಬೆಂಗಳೂರಿನ ತಾಪಮಾನ (Bangalore Weather) ಮತ್ತು ಗಾಳಿಯ ಗುಣಮಟ್ಟದ ಮೇಲೂ ಪರಿಣಾಮ ಉಂಟಾಗಲಿದೆ ಎಂದು ಹವಾಮಾನ ಇಲಾಖೆಯ (IMD) ಬೆಂಗಳೂರು ವಿಭಾಗದ ಮುಖ್ಯಸ್ಥರು ಮಾಹಿತಿ ನೀಡಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತವು ಆಳವಾದ ಖಿನ್ನತೆಯಾಗಿ ತೀವ್ರಗೊಂಡಿದೆ. ಇದು ಚಂಡಮಾರುತವಾಗಿ ಮಾರ್ಪಟ್ಟಿದೆ. ಗುರುವಾರ ಬೆಳಿಗ್ಗೆ ತಮಿಳುನಾಡು ಮತ್ತು ಪುದುಚೇರಿ ಕರಾವಳಿಯನ್ನು ಈ ಚಂಡಮಾರುತ ಅಪ್ಪಳಿಸಿದೆ. ಇದರ ಪರಿಣಾಮವಾಗಿ ಬೆಂಗಳೂರಿನಲ್ಲೂ ತುಂತುರು ಮಳೆ ಮತ್ತು ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: Karnataka Weather: ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಭಾರಿ ಮಳೆ ಮುನ್ಸೂಚನೆ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಈ ಕಾರಣದಿಂದಾಗಿ, ಬೆಂಗಳೂರಿನಲ್ಲಿ ಭಾನುವಾರದವರೆಗೆ ಮೋಡ ಕವಿದ ವಾತಾವರಣವನ್ನು ನಿರೀಕ್ಷಿಸಲಾಗಿದೆ. ಈಶಾನ್ಯ ಮಾನ್ಸೂನ್ ಇನ್ನೂ ಮುಗಿಯದ ಕಾರಣ ಮುಂದಿನ 4 ದಿನಗಳ ಕಾಲ ಬೆಂಗಳೂರಿನಲ್ಲೂ ಮಳೆ ಬೀಳಬಹುದು ಎಂದು ಪ್ರಕಟಣೆ ತಿಳಿಸಿದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗುವ ನಿರೀಕ್ಷೆಯಿದೆ.
Deep Depression over Southwest and adjoining Southeast Bay of Bengal intensified into a Cyclonic Storm called “Mandous” pronounced as “Man-Dous”(Cyclone Alert for North TN,Puducherry,South AP coasts and it will effect to #Bengaluru also):Yellow Message Source:IMD@VisitBengaluru_ pic.twitter.com/PSb1OL0Yl8
— BENGALURU (@VisitBengaluru_) December 8, 2022
ಮ್ಯಾಂಡಸ್ ಚಂಡಮಾರುತದ ಹಿನ್ನೆಲೆಯಲ್ಲಿ ಉತ್ತರ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಗೆ ‘ಹಳದಿ’ ಅಲರ್ಟ್ ನೀಡಲಾಗಿದೆ. ಬೆಂಗಳೂರು ಹಾಗೂ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 12ರವರೆಗೆ ವಾರಾಂತ್ಯದಲ್ಲಿ ಗುಡುಗು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಡಿಸೆಂಬರ್ 11 ಮತ್ತು 12ರಂದು ಗುಡುಗು ಮತ್ತು ಮಿಂಚು ಸಹಿತ ಮಳೆ ಸುರಿಯಲಿದೆ.
ಇದನ್ನೂ ಓದಿ: Cyclone Mandous: ಮಾಂಡಸ್ ಚಂಡಮಾರುತದ ಅಬ್ಬರ; ತಮಿಳುನಾಡು, ಆಂಧ್ರದಲ್ಲಿ ಭಾರೀ ಮಳೆಯ ಅಲರ್ಟ್
ಬೆಂಗಳೂರು ಹೊರತುಪಡಿಸಿ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಚಿಕ್ಕಮಗಳೂರು, ಕೋಲಾರ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
#CycloneMandous expected to cross North Tamilnadu coast tomorrow evening
Rains expected over #Bengaluru after landfall as weakened circulation is expected to cross south #Karnataka
Weather models expect total rain accumulation for #Bangalore to be 40-80mm over next few days pic.twitter.com/0nUY3O3Bd9
— Bengaluru Weather (@BngWeather) December 8, 2022
ಬೆಂಗಳೂರಿನಲ್ಲಿ ಗುರುವಾರ ಕನಿಷ್ಠ ತಾಪಮಾನವು 17.3 ಡಿಗ್ರಿ ಸೆಲ್ಸಿಯಸ್ ಇತ್ತು. ಡಿಸೆಂಬರ್ 11ರವರೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನವು 18 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗುವುದಿಲ್ಲ ಎಂದು IMD ಹೇಳಿದೆ. ಮ್ಯಾಂಡಸ್ ಚಂಡಮಾರುತ ಇಂದು ಮಧ್ಯರಾತ್ರಿ ನೆರೆಯ ಆಂಧ್ರಪ್ರದೇಶದ ಪುದುಚೇರಿ ಮತ್ತು ಶ್ರೀಹರಿಕೋಟಾ ನಡುವೆ ಕರಾವಳಿಯನ್ನು ದಾಟುವ ನಿರೀಕ್ಷೆಯಿದೆ. ಇದರ ಪರಿಣಾಮವಾಗಿ ತಮಿಳುನಾಡಿನ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗುತ್ತದೆ.