AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Weather Today: ಬೆಂಗಳೂರಿನಲ್ಲಿ ಇಂದು ಕೂಡ ವರುಣನ ಅಬ್ಬರ; ನಾಳೆಯಿಂದ ಮಳೆ ಕ್ಷೀಣ

Karnataka Rains: ಅಕ್ಟೋಬರ್ ಆರಂಭದಿಂದ ಬೆಂಗಳೂರಿನಲ್ಲಿ 457.2 ಮಿ.ಮೀ ಮಳೆಯಾಗಿದೆ. ಡಿಸೆಂಬರ್‌ನಲ್ಲಿ ನಗರದಲ್ಲಿ 80 ಮಿ.ಮೀ ಗಿಂತ ಹೆಚ್ಚು ಮಳೆ ದಾಖಲಾಗಿದ್ದು, ಡಿಸೆಂಬರ್ 11ರಂದು ಅತಿ ಹೆಚ್ಚು (41 ಮಿ.ಮೀ) ಮಳೆಯಾಗಿದೆ.

Bengaluru Weather Today: ಬೆಂಗಳೂರಿನಲ್ಲಿ ಇಂದು ಕೂಡ ವರುಣನ ಅಬ್ಬರ; ನಾಳೆಯಿಂದ ಮಳೆ ಕ್ಷೀಣ
ಬೆಂಗಳೂರಿನಲ್ಲಿ ಮಳೆImage Credit source: Indian Express
TV9 Web
| Edited By: |

Updated on: Dec 14, 2022 | 6:03 AM

Share

Bangalore Rains: ತಮಿಳುನಾಡಿನಲ್ಲಿ (Tamil Nadu Rains) ಭಾರೀ ಮಳೆಯಾಗುತ್ತಿರುವುದರಿಂದ ಬೆಂಗಳೂರಿನಲ್ಲೂ ಕಳೆದ ನಾಲ್ಕೈದು ದಿನಗಳಿಂದ ಚಳಿ, ಮಳೆ ಹೆಚ್ಚಾಗಿದೆ. ಇಂದು ಕೂಡ ಬೆಂಗಳೂರಿನ (Bengaluru Rain) ಹಲವೆಡೆ ಮಳೆಯಾಗಲಿದ್ದು, ನಾಳೆಯಿಂದ ಮಳೆಯ ಅಬ್ಬರ ಕ್ಷೀಣಿಸಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಶನಿವಾರ ಮುಂಜಾನೆ ತಮಿಳುನಾಡಿನ ಕರಾವಳಿಯನ್ನು ದಾಟಿದ ಮಾಂಡೌಸ್ ಚಂಡಮಾರುತದ (Cyclone Mandous) ಪ್ರಭಾವದಿಂದ ಬೆಂಗಳೂರು ನಗರದಲ್ಲಿ ಶೀತ ವಾತಾವರಣ ಮುಂದುವರೆದಿದೆ.

ಮಂಗಳವಾರ ಬೆಳಗ್ಗೆ ಬೆಂಗಳೂರಿನಲ್ಲಿ 9.2 ಮಿಮೀ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಹವಾಮಾನ ಇಲಾಖೆಯು ಇಂದು ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯ ಮುನ್ಸೂಚನೆ ನೀಡಿದೆ. ಅಕ್ಟೋಬರ್ ಆರಂಭದಿಂದ ಬೆಂಗಳೂರಿನಲ್ಲಿ 457.2 ಮಿ.ಮೀ ಮಳೆಯಾಗಿದೆ. ಡಿಸೆಂಬರ್‌ನಲ್ಲಿ ನಗರದಲ್ಲಿ 80 ಮಿ.ಮೀ ಗಿಂತ ಹೆಚ್ಚು ಮಳೆ ದಾಖಲಾಗಿದ್ದು, ಡಿಸೆಂಬರ್ 11ರಂದು ಅತಿ ಹೆಚ್ಚು (41 ಮಿ.ಮೀ) ಮಳೆಯಾಗಿದೆ.

ಬೆಂಗಳೂರು ಈಗಾಗಲೇ ಅಕ್ಟೋಬರ್ ವೇಳೆಗೆ ಅತಿ ಹೆಚ್ಚು ಮಳೆಯಾದ ವರ್ಷ ಎಂಬ ದಾಖಲೆಯನ್ನು ನಿರ್ಮಿಸಿದೆ. ಕಳೆದ ವಾರ ನವೆಂಬರ್ ವೇಳೆಗೆ ನಗರದಲ್ಲಿ ಸುಮಾರು 1,849 ಮಿಮೀ ಮಳೆಯಾಗಿದೆ. ಈಶಾನ್ಯ ಮಾನ್ಸೂನ್ ಋತುವಿನಲ್ಲಿ ಉತ್ತಮ ಮಳೆಯಾಗುವುದರಿಂದ ಡಿಸೆಂಬರ್ ಅಂತ್ಯದ ವೇಳೆಗೆ ಒಟ್ಟು ಮಳೆಯು 2,000 ಮಿಮೀ ತಲುಪುವ ನಿರೀಕ್ಷೆಯಿದೆ.

ಇದನ್ನೂ ಓದಿ: Karnataka Weather Updates: ಡಿಸೆಂಬರ್ 16ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ: 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನಲ್ಲಿ ಕೂಡ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ ಮತ್ತು ತುಮಕೂರು, ಹಾಸನ ಮತ್ತು ದಾವಣಗೆರೆಯ ಕೆಲವು ಭಾಗಗಳಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಇಂದು ‘ಹಳದಿ’ ಅಲರ್ಟ್​ ನೀಡಲಾಗಿದೆ. ಕರ್ನಾಟಕದ ಬೆಂಗಳೂರು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲವು ಭಾಗ ಹಾಗೂ ಕರಾವಳಿಯಲ್ಲಿ ಡಿ. 16ರವರೆಗೂ ಮಳೆಯಾಗಲಿದೆ. ಮಾಂಡೌಸ್ ಚಂಡಮಾರುತ ದುರ್ಬಲವಾಗಿದ್ದರೂ ಚಾಮರಾಜನಗರ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ IMD ಹಳದಿ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಯಾವುದೇ ಹಾನಿಯಾಗದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.

ಇದನ್ನೂ ಓದಿ: Karnataka Rain: ಕರ್ನಾಟಕದ ಹಲವೆಡೆ ಇನ್ನೂ 4 ದಿನ ಗುಡುಗು ಸಹಿತ ಮಳೆ; ಹಳದಿ ಅಲರ್ಟ್ ಘೋಷಣೆ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಕರ್ನಾಟಕದ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಹಾವೇರಿ, ಗದಗ ಮತ್ತು ಬಳ್ಳಾರಿಯಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಇದರ ಜೊತೆಗೆ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಚಿತ್ರದುರ್ಗ, ದಾವಣಗೆರೆ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?