ನಮ್ಮ ಮೆಟ್ರೋಗೆ ಬಲಿಯಾದ ಯುವಕ ಯಾರು? ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಹೇಳಿದ್ದಿಷ್ಟು

| Updated By: ರಮೇಶ್ ಬಿ. ಜವಳಗೇರಾ

Updated on: Mar 21, 2024 | 5:09 PM

ಇತ್ತೀಚೆಗೆ ನಮ್ಮ ಮೆಟ್ರೋ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿದೆ. ನಿನ್ನೆಯಷ್ಟೇ ನಮ್ಮ ಮೆಟ್ರೋ ಸಿಬ್ಬಂದಿಯೊಬ್ಬ ಅಸಭ್ಯವಾಗಿ ವರ್ತಿಸಿದ್ದು ಬೆಳಕಿಗೆ ಬಂದಿತ್ತು. ಇದೀಗ ಯುವಕನೋರ್ವ ಮೆಟ್ರೋ ರೈಲು ಬರುತ್ತಿದ್ದಂತೆಯೇ ಹಳಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನು ಮೃತ ಯುವಕ ಯಾರು? ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಏನೆಲ್ಲಾ ಹೇಳಿದ್ದಾರೆ ಎನ್ನುವ ವಿವರ ಈ ಕೆಳಗಿನಂತಿದೆ.

ನಮ್ಮ ಮೆಟ್ರೋಗೆ ಬಲಿಯಾದ ಯುವಕ ಯಾರು? ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಹೇಳಿದ್ದಿಷ್ಟು
Follow us on

ಬೆಂಗಳೂರು, (ಮಾರ್ಚ್ 21): ಇತ್ತೀಚೆಗೆ ನಮ್ಮ ಮೆಟ್ರೋ (Namma Metro )ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿದೆ. ಈ ಹಿಂದೆ ಮೆಟ್ರೋ ಹಳಿಗೆ ಹಾರಿದ ಪ್ರಕರಣಗಳು ನಡೆದಿದ್ದವು. ಆದ್ರೆ, ಯಾವುದೇ ಸಾವು-ನೋವು ಸಂಭವಿಸಿರಲಿಲ್ಲ. ಆದ್ರೆ, ಇಂದು (ಮಾರ್ಚ್ .21) ಮಧ್ಯಾಹ್ನ 2:10ರ ಸುಮಾರಿಗೆ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ (Athiguppe Metro) ರೈಲು ಬರುವಾಗ ಯುವಕ ಹಳಿಗೆ ಜಿಗಿದಿದ್ದಾನೆ. ಪರಿಣಾಮ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಿಂದ ಸುಮಾರು ಎಂಟು ಅಡಿ ದೂರದಲ್ಲಿ ಯುವಕನ ದೇಹವನ್ನು ರೈಲು ಎಳೆದೊಯ್ದಿದೆ. ಇದರಿಂದ ಯುವಕನ ದೇಹ ಎರಡು ತುಂಡಾಗಿದೆ. ಸದ್ಯ ಯುವಕನ ಮೃತದೇಹವನ್ನು ಹೊರಗೆ ತೆಗೆದು ವಿಕ್ಟೋರಿಯ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಆತ್ಮಹತ್ಯೆ ಮಾಡಿಕೊಂಡ ಯುವಕನನನ್ನು ಧ್ರುವ್ ಟಕ್ಕರ್ ಎಂದು ಗುರುತಿಸಲಾಗಿದ್ದು, ಆತನ ಕುಟುಂಬಕ್ಕೆ ಮತ್ತು ಕಾಲೇಜಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಮಟ್ರೋ ರೈಲು ಬರುವ ಹಲವು ನಿಮಿಷಗಳ ಕಾಲ ಮೊದಲೇ ಧ್ರುವ್ ಟಕ್ಕರ್ ಅತ್ತಿಗುಪ್ಪೆ ನಿಲ್ದಾಣಕ್ಕೆ ಬಂದಿದ್ದ. ನಂತರ ನಿಲ್ದಾಣದ ಬಲ ಭಾಗದ ತುದಿಗೆ ಹೋಗಿ ನಿಂತಿದ್ದ. ಧ್ರುವ್ ಟಕ್ಕರ್ ಜೊತೆಗೆ ಒರ್ವ ಯುವತಿ ಹಾಗೂ ಮತ್ತೊರ್ವ ಯುವಕ ಇದ್ದ. ಹಾಗೇ ಮೂವರು ಮಾತನಾಡುತ್ತಾ ಮಾತನಾಡುತ್ತಾ ನಿಂತಿದ್ದರು. ನಂತರ ರೈಲು ಬರುವ ಸಮಯದಲ್ಲಿ . ಧ್ರುವ್ ಟ್ರಾಕ್ ಮೇಲೆ ಹಾರಿದ್ದಾನೆ. ಜೊತೆಗಿದ್ದವರು ಎಳೆದುಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಆದ್ರೆ ರೈಲು ಹತ್ತಿರ ಬಂದಾಗ ಸ್ಥಳದಿಂದ ಓಡಿ ಹೋಗಿದ್ದಾರೆ. ಪರಿಣಾಮ ರೈಲು ಸ್ವಲ್ಪ ದೂರ ಎಳೆದೊಯ್ದಿದ್ದು, ರುಂಡ-ಮುಂಡ ಬೇರೆ-ಬೇರೆಯಾಗಿದೆ. ರೈಲಿನ ಕೆಳಗೆ ಸಿಲುಕಿದ್ದ ಮೃತದೇಹವನ್ನು ಹೊರಗೆ ತೆಗೆದು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ಮೃತ ದೇಹ ಹೊರಕ್ಕೆ: ಮಾಗಡಿ ರಸ್ತೆ TO ಚಲ್ಲಘಟ್ಟ ಮೆಟ್ರೋ ಸಂಚಾರ ಪುನಾರಂಭ

ಡಿಸಿಪಿ ಎಸ್‌.ಗಿರೀಶ್‌ ಹೇಳಿದ್ದಿಷ್ಟು

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಎಸ್‌.ಗಿರೀಶ್‌ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, 19 ರಿಂದ 20 ವರ್ಷದ ಹುಡುಗನ ಸಾವಾಗಿದೆ. ಮೃತ ಧ್ರುವ್ ಟಕ್ಕರ್ ಮಹಾರಾಷ್ಟ್ರದ ಮುಂಬೈ ಮೂಲದವನು. ಈತ ನ್ಯಾಷನಲ್ ಲಾ ಕಾಲೇಜ್ ಫಸ್ಟ್ ಇಯರ್ ವಿದ್ಯಾರ್ಥಿ ಎಂದು ಮಾಹಿತಿ ನೀಡಿದರು.

ಸದ್ಯ ವಿದ್ಯಾರ್ಥಿ ಸಾವಿನ ಬಗ್ಗೆ ಕಾಲೇಜು ಮತ್ತು ಆತನ ಕುಟುಂಬಕ್ಕೆ ಪೊಲೀಸರು ಮಾಹಿತಿ ರವಾನಿಸಿದ್ದು, ಧ್ರುವ್ ಟಕ್ಕರ್ ಏಕೆ ಆತ್ಮಹತ್ಯೆ ಮಾಡಿಕೊಂಡ? ಆತ್ಮಹತ್ಯೆಗೆ ಕಾರಣವೇನು? ಎನ್ನುವುದರ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.  ಇನ್ನು ಸ್ಥಗಿತಗೊಂಡಿದ್ದ ಮೆಟ್ರೋ ಸಂಚಾರ ಮತ್ತೆ ಪುನಾರಂಭವಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:04 pm, Thu, 21 March 24