Bengaluru Wheeling: ಬೆಂಗಳೂರಿನಲ್ಲಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಅಪ್ರಾಪ್ತರೂ ಸೇರಿ 6 ಯುವಕರ ಸೆರೆ; 8 ಬೈಕ್ ವಶಕ್ಕೆ

ಪೊಲೀಸರು ವಶಪಡಿಸಿಕೊಂಡವರ ಪೈಕಿ ಇಬ್ಬರು ಅಪ್ರಾಪ್ತರೂ ಸೇರಿದ್ದಾರೆ. ಅವರ ಬದಲಿಗೆ ಈ ಇಬ್ಬರು ಅಪ್ರಾಪ್ತರ ಪೋಷಕರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ.

Bengaluru Wheeling: ಬೆಂಗಳೂರಿನಲ್ಲಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಅಪ್ರಾಪ್ತರೂ ಸೇರಿ  6 ಯುವಕರ ಸೆರೆ; 8 ಬೈಕ್ ವಶಕ್ಕೆ
ಬಂಧಿತರು
Follow us
TV9 Web
| Updated By: guruganesh bhat

Updated on:Aug 24, 2021 | 7:39 PM

ಬೆಂಗಳೂರು: ಬೈಕ್ ವ್ಹೀಲಿಂಗ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ವಿಶೇಷ ಅಭಿಯಾನ ಹಮ್ಮಿಕೊಂಡಿದ್ದ ಬೆಂಗಳೂರು ನಗರ ಪೊಲೀಸರು ವ್ಹೀಲಿಂಗ್ ಮಾಡುತ್ತಿದ್ದ 6 ಜನರನ್ನು ವಶಪಡಿಸಿಕೊಂಡಿದ್ದಾರೆ. ನಗರದ ಪುಲಕೇಶಿನಗರ, ಬಾಣಸವಾಡಿ, ಕೆ.ಆರ್. ಪುರಂ, ಬ್ಯಾಟರಾಯನಪುರ ಸೇರಿದಂತೆ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಆಗಸ್ಟ್ 16ರಿಂದ 22ರವರೆಗೆ ಈ ವಿಶೇಷ ಅಭಿಯಾನ ನಡೆಸಲಾಗಿತ್ತು. ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 8 ಬೈಕ್​ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳ ವಿರುದ್ಧ ಮೋಟಾರು ವಾಹನ ಕಾಯ್ದೆ ಅಡಿ ಕ್ರಮ‌ ಕೈಗೊಳ್ಳಲಾಗುವುದು. ಮತ್ತು ವ್ಹೀಲಿಂಗ್ ಮಾಡುತ್ತಿದ್ದವರ ಡ್ರೈವಿಂಗ್ ಲೈಸೆನ್ಸ್ ಅಮಾನತು ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ವಶಪಡಿಸಿಕೊಂಡವರ ಪೈಕಿ ಇಬ್ಬರು ಅಪ್ರಾಪ್ತರೂ ಸೇರಿದ್ದಾರೆ. ಅವರ ಬದಲಿಗೆ ಈ ಇಬ್ಬರು ಅಪ್ರಾಪ್ತರ ಪೋಷಕರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ.

ಬೈಕ್ ವ್ಹೀಲಿಂಗ್ ಅಭಿಯಾನದಲ್ಲಿ ವಶಪಡಿಸಿಕೊಳ್ಳಲಾದವರ ಪೈಕಿ ಅಪ್ರಾಪ್ತರೇ ಹೆಚ್ಚಾಗಿ ಇದ್ದಾರೆ. ಹೀಗಾಗಿ ಅಪ್ರಾಪ್ತ ಯುವಕರ ಪೋಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಒಂದು ದಿನ ಪೋಷಕರಿಗೆ ಯಾವ ವಯಸ್ಸಿಗೆ ಮಕ್ಕಳಿಗೆ ವಾಹನ ನೀಡಬೇಕೆಂದು ಕೌನ್ಸೆಲಿಂಗ್ ನೀಡುತ್ತೇವೆ. ಬಳಿಕವೂ ಅಂತಹುದೇ ಘಟನೆ ಮುಂದುವರೆದಲ್ಲಿ 5-10 ಲಕ್ಷದ ಬಾಂಡ್ ಅಥವಾ ಜೈಲಿಗೆ ಕಳಿಸುತ್ತೇವೆ. ಅದೇ ರೀತಿ ಅಪ್ರಾಪ್ತರಲ್ಲದಿದ್ದರೂ ಅವರಿಗೂ ಕೌನ್ಸೆಲಿಂಗ್ ನಡೆಸುತ್ತೇವೆ. ಜತೆಗೆ ಡ್ರೈವಿಂಗ್ ಲೈಸೆನ್ಸ್ ಇಲ್ಲದವರಿಗೂ ಕೌನ್ಸೆಲಿಂಗ್ ನಡೆಸುತ್ತೇವೆ. ವಾಹನಗಳ ಅಪಾಯಕಾರಿ ಚಾಲನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಬೆಂಗಳೂರಿನಲ್ಲಿ ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಪತ್ರಿಕಾಗೋಷ್ಠಿ ನಡೆಸಿ ತಿಳಿಸಿದರು.

ಇದನ್ನೂ ಓದಿ: 

ಬೆಂಗಳೂರು: ರುಚಿಯಾಗಿ ಚಿಕನ್ ಫ್ರೈ ಮಾಡಿಕೊಟ್ಟಿಲ್ಲ ಎಂದು ಹೆಂಡತಿಯನ್ನೇ ಕೊಂದ ಗಂಡ

TV9 Kannada Exclusive: ಅಫ್ಘಾನಿಸ್ತಾನದಲ್ಲಿಯೂ ಕೊವಿಡ್ ಇದೆ, ನಿಮಗೆ ನೆನಪಿದೆಯೇ?

(Bengaluru Wheeling police arrest 6 youth detained 8 bikes)

Published On - 3:42 pm, Tue, 24 August 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ