Bengaluru Unlock : ಸೋಮವಾರ ಬೆಳಗ್ಗೆ 6 ಗಂಟೆಯಿಂದಲೇ ಬೆಂಗಳೂರು ಅನ್ಲಾಕ್
ಬೆಂಗಳೂರು ಅನ್ಲಾಕ್: ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಿರುವ ಮಂಡ್ಯ, ಮೈಸೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರೆಯಲಿದೆ. ಈ ಜಿಲ್ಲೆಗಳಲ್ಲಿ ಈಗ ಅನುಷ್ಠಾನದಲ್ಲಿರುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ.

ಬೆಂಗಳೂರು: ಮುಂದಿನ ಸೋಮವಾರ, ಅಂದರೆ ಜೂನ್ 14 ರ ಬೆಳಗ್ಗೆ 6 ಗಂಟೆಗೆ ಬೆಂಗಳೂರು ಅನ್ಲಾಕ್ ಆಗಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದರು. ಕೆಎಸ್ಆರ್ಟಿಸಿ, ಬಿಎಂಟಿಸಿ ಸಂಚಾರಕ್ಕೆ ಅವಕಾಶವಿಲ್ಲ. ನಿರ್ಮಾಣ ಚಟುವಟಿಕೆ ಆರಂಭಿಸಲು ಅನುಮತಿ ನೀಡಲಾಗುತ್ತದೆ. ಸಿಮೆಂಟ್, ಸ್ಟೀಲ್ ಅಂಗಡಿ ತೆಗೆಯಲು ಅವಕಾಶವಿದೆ. ಎಲ್ಲ ಕಾರ್ಖಾನೆ ಶೇ 50 ಸಿಬ್ಬಂದಿ ಹಾಜರಿಯೊಂದಿಗೆ ಕಾರ್ಯನಿರ್ವಹಣೆಗೆ ಅವಕಾಶ. ಗಾರ್ಮೆಂಟ್ಸ್ ಶೇ 30 ಹಾಜರಿಯೊಂದಿಗೆ ಕಾರ್ಯನಿರ್ವಹಣೆಗೆ ಅವಕಾಶ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಮದ್ಯ ಪಾರ್ಸೆಲ್ ಪಡೆಯಲು ಮಧ್ಯಾಹ್ನ 2ರವರೆಗೆ ಅವಕಾಶ ನೀಡಲಾಗುವುದು. ಬಾರ್ ಮತ್ತು ರೆಸ್ಟೋರೆಂಟ್, ವೈನ್ ಸ್ಟೋರ್, ಎಂಎಸ್ಐಎಲ್ಗಳಲ್ಲಿ ಮಧ್ಯಾಹ್ನ 2ರವರೆಗೆ ಪಾರ್ಸೆಲ್ ಅವಕಾಶವಿದೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಿರುವ ಮಂಡ್ಯ, ಮೈಸೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರೆಯಲಿದೆ. ಈ ಜಿಲ್ಲೆಗಳಲ್ಲಿ ಈಗ ಅನುಷ್ಠಾನದಲ್ಲಿರುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಉಳಿದ ಎಲ್ಲ ಜಿಲ್ಲೆಗಳಲ್ಲಿ ಜೂನ್ 14ರಿಂದ ನಿರ್ಬಂಧ ಸಡಿಲಿಕೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಪ್ರತಿದಿನ ರಾತ್ರಿ 7ರಿಂದ ಬೆಳಿಗ್ಗೆ 5ರವರೆಗೆ ಕೊವಿಡ್ ಕರ್ಪ್ಯೂ ಜಾರಿಯಲ್ಲಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: Explainer: ದೇಶದಲ್ಲಿ ಕೊವಿಡ್ ಸಾವಿನ ಸಂಖ್ಯೆ ಏಕಾಏಕಿ ಏರಲು ಕಾರಣವೇನು?
ಕೊವಿಡ್ ರೋಗಿಗಳ ಹೆಣ ಎಸೆಯಲು ಮುಂಬೈನಲ್ಲಿ ಯಾವುದೇ ನದಿ ಇಲ್ಲ: ಮೇಯರ್ ಕಿಶೋರಿ ಪೆಡನೆಕರ್
(Bengaluru will be unlock by June 14 Monday morning 6 oclock CM BS Yediyurappa)
Published On - 8:22 pm, Thu, 10 June 21