AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಚುಮು ಚುಮು ಚಳಿ: ಜನರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಾ?

ಬೆಂಗಳೂರಿನಲ್ಲಿ ಅಕಾಲಿಕ ಚಳಿ ಆರಂಭವಾಗಿದೆ. ಸಂಜೆಯಾಗುತ್ತಿದ್ದಂತೆ ತಾಪಮಾನ ಕುಸಿಯುತ್ತಿದೆ. ಲಾ-ನಿನಾ ಪರಿಣಾಮದಿಂದ ಈ ವರ್ಷ ಚಳಿ ಹೆಚ್ಚಾಗುವ ನಿರೀಕ್ಷೆಯಿದೆ. ಕನಿಷ್ಠ ತಾಪಮಾನ 3-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ಜನರು ಬೆಚ್ಚಗಿನ ಬಟ್ಟೆ ಧರಿಸುವುದು ಮತ್ತು ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವುದು ಅವಶ್ಯಕವಾಗಿದೆ. ಮುಂದಿನ ದಿನಗಳಲ್ಲಿ ಚಳಿ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಚುಮು ಚುಮು ಚಳಿ: ಜನರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಾ?
ಬೆಂಗಳೂರಿನಲ್ಲಿ ಚುಮು ಚುಮು ಚಳಿ: ಜನರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಾ?
Poornima Agali Nagaraj
| Updated By: ಗಂಗಾಧರ​ ಬ. ಸಾಬೋಜಿ|

Updated on: Nov 23, 2024 | 9:17 PM

Share

ಬೆಂಗಳೂರು, ನವೆಂಬರ್​ 23: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಳಿ (Winter) ಆರಂಭವಾಗಿದ್ದು, ಸಂಜೆಯಾಗುತ್ತಿದ್ದಂತೆ ಸಿಲಿಕಾನ್​ ಸಿಟಿ ಕೂಲ್​ ಕೂಲ್​ ಆಗುತ್ತದೆ. ಅದರಲ್ಲೂ ಅವಧಿ ಮೊದಲೇ ರಾಜ್ಯದಲ್ಲಿ ಚಳಿಗಾಲ ಆರಂಭವಾಗಿದೆ. ಹೀಗಾಗಿ ಜನರು ಚಳಿಗೆ ಹೊರಗೆ ಬರಬೇಕೆಂದಾದರೆ ಬೆಚ್ಚಗಿನ ಬಟ್ಟೆಗಳನ್ನು ಧರಿಸಿಕೊಂಡು ಬರುವಂತಾಗಿದೆ.

ರಾಜಧಾನಿಯಲ್ಲಿ ಚುಮು ಚುಮು ಚಳಿ

ಹೌದು.. ರಾಜಧಾನಿಯಲ್ಲಿ ಚುಮು ಚುಮು ಚಳಿ ಆರಂಭವಾಗಿದ್ದು, ರಾತ್ರಿ ಆಗುತ್ತಿದ್ದಂತೆಯೇ ಶುರುವಾಗುವ ಚಳಿ ಸೂರ್ಯೋದಯದವರೆಗೂ ಹಾಗೆಯೇ ಇರುತ್ತದೆ. ಈ ಮುಂದಿನ ವಾರದಿಂದ ಚಳಿ ಇನ್ನಷ್ಟು ಹೆಚ್ಚಾಗುಚ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಸಾಧಾರಣವಾಗಿ ಬೆಂಗಳೂರಿನಲ್ಲಿ ಡಿಸೆಂಬರ್‌ನಿಂದ ಫೆಬ್ರವರಿವರೆಗೆ ಚಳಿಗಾಲ ಇರಲಿದ್ದು, ಈಗಾಗಲೇ ಚಳಿ ಆರಂಭವಾಗಿದೆ. ಸಾಮಾನ್ಯವಾಗಿ ನಗರದಲ್ಲಿ ಡಿಸೆಂಬರ್‌ ಮೂರನೇ ವಾರದ ವೇಳೆಗೆ ತಾಪಮಾನ ಕಡಿಮೆಯಾಗುತ್ತದೆ.

ಇದನ್ನೂ ಓದಿ: ಇಂದಿರಾ ಕ್ಯಾಂಟೀನ್​ಗಳಲ್ಲಿ ಮುದ್ದೆ ಊಟಕ್ಕೆ ಕಾದಿದ್ದವರಿಗೆ ನಿರಾಸೆ: ಇನ್ನೂ ಸಿಕ್ಕಿಲ್ಲ ಸರ್ಕಾರದ ಗ್ರೀನ್ ಸಿಗ್ನಲ್

ಈ ವರ್ಷವೂ ಇದೇ ಅವಧಿಯಲ್ಲಿ ತಾಪಮಾನ ಕಡಿಮೆಯಾಗಿದೆ. ಈ ವರ್ಷ ಲಾ-ನಿನಾ ವಾತಾವರಣ ಇರುವುದರಿಂದ, ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕರ್ನಾಟಕದಲ್ಲಿ ಇನ್ನೂ ಎರಡು ತಿಂಗಳ ಕಾಲ ಕನಿಷ್ಠ ಮತ್ತು ಗರಿಷ್ಠ ತಾಪಮಾನದಲ್ಲಿ ಸರಾಸರಿ 3 ರಿಂದ 4 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಕಡಿಮೆಯಾಗುವ ಸಾಧ್ಯತೆ ಇದೆ.

ಕಳೆದ ನಾಲ್ಕು ದಿನಗಳಿಂದ ರಾಜಧಾನಿಯಲ್ಲಿ ಹವಾಮಾನ ಗರಿಷ್ಠ ತಾಪಮಾನ ಸರಾಸರಿ 27 ಡಿ.ಸೆ. ಹಾಗೂ ಕನಿಷ್ಠ ತಾಪಮಾನ 19 ಡಿ.ಸೆ. ದಾಖಲಾಗುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಚಳಿಗಾಲ ತುಸು ಹೆಚ್ಚಾಗಿದೆ. ಇದಕ್ಕೆಲ್ಲಾ ಕಾರಣ ಅಂದ್ರೆ ಈ ವರ್ಷ ಸಾಕಷ್ಟು ಮಳೆಯಾಗಿರುವುದು. ಈ ವರ್ಷ ಹೆಚ್ಚು ಮಳೆಯಾಗಿರುವ ಹಿನ್ನಲೆ ಕೆರೆ, ನದಿ, ಅಣೆಕಟ್ಟೆಗಳು ತುಂಬಿವೆ. ಮರ-ಗಿಡಗಳು ಹಸಿರಿನಿಂದ ಕೂಡಿವೆ. ಅಷ್ಟೇ ಅಲ್ಲದೆ, ಈ ವರ್ಷ ಲಾ ನಿನಾ ವಾತಾವರಣ ಇರುವುದರಿಂದ ಚಳಿಗಾಲಕ್ಕೆ ಪೂರಕ ವಾತಾವರಣವಿದೆ.

ಈ ಎಲ್ಲದರ ಹಿನ್ನೆಲೆಯಲ್ಲಿ ಈ ವರ್ಷ ಚಳಿಯ ಪ್ರಮಾಣ ಹೆಚ್ಚಿರಲಿದೆ ಎನ್ನಲಾಗುತ್ತಿದೆ. ಹೀಗಾಗಿ ರಾಜ್ಯದ ಉತ್ತರ ಒಳನಾಡಿನಲ್ಲಿ ಕನಿಷ್ಟ ಉಣ್ಣಾಂಶ 12 – 14 ಡಿಗ್ರಿ ಸೆಲ್ಸಿಯಸ್, ದಕ್ಷಿಣ ಒಳನಾಡಿನಲ್ಲಿ 17-19 ಡಿಗ್ರಿ, ಕಾರವಳಿಯಲ್ಲಿ 21-22, ಬೆಂಗಳೂರಿಗೆ ಕನಿಷ್ಟ ಉಷ್ಣಾಂಶ 17- 28 ಡಿಗ್ರಿ ಇದ್ದು ಈ ವರ್ಷ ಹೆಚ್ಚು ಚಳಿ ಇರುವ ಸಾಧ್ಯತೆ ಇದೆ.

ಆರೋಗ್ಯದ ಮೇಲೆ ಪರಿಣಾಮ

ಇನ್ನು, ಬೆಂಗಳೂರಿನಲ್ಲಿ ಚಳಿಯ ವಾತಾವರಣವಿದೆ ಅಷ್ಟೇ, ಚಳಿಗಾಲ ಇನ್ನೂ ಆರಂಭವಾಗಿಲ್ಲ. ಗರಿಷ್ಠ ತಾಪಮಾನ 23-24 ಡಿಗ್ರಿ ಸೆಲ್ಸಿಯಸ್‌ಗೆ ಹಾಗೂ ಹಾಗೂ ಕನಿಷ್ಠ ತಾಪಮಾನ 16 ಡಿ.ಸೆ.ಗಿಂತ ಕಡಿಮೆ ಬಂದರೆ ಚಳಿಗಾಲವೆಂದು ಹೇಳಬಹುದು. ಇನ್ನೂ ಒಂದು ಚಂಡಮಾರುತ ಬರುವ ಸಾಧ್ಯತೆ ಇದ್ದು, ಈ ತಿಂಗಳ ಅಂತ್ಯಕ್ಕೆ ಅದು ಬರಬಹುದು. ಇಲ್ಲವೇ ಬೇರೆ ದಿಕ್ಕಿನ ಕಡೆ ಚಲಿಸಬಹುದು. ಈ ಚಂಡಮಾರುತದ ಸ್ಥಿತಿಗತಿ ನಂತರವಷ್ಟೇ ಚಳಿಗಾಲ ಆರಂಭವಾಗಲಿದೆ.‌ ಆದರೆ ಸದ್ಯ ಚಳಿಯ ಪ್ರಮಾಣ ಜಾಸ್ತಿಯಾಗಿದ್ದು, ಇನ್ನು ಮೂರು ದಿನಗಳ ಕಾಲ ಚಳಿ ಹೆಚ್ಚಾಗಿಯೇ ಇರಲಿದೆ.‌ ಜನರು ಆರೋಗ್ಯದ ಮೇಲೂ ಗಮನ ಹರಿಸಬೇಕು ಅಂತ ಹವಮಾನ ಇಲಾಖೆ ತಜ್ಞ ಸಿ.ಎಸ್‌. ಪಾಟೀಲ್‌ ಹೇಳಿದ್ದಾರೆ.

ಇದನ್ನೂ ಓದಿ: ಕೆಎಸ್​ಆರ್​ಟಿಸಿ, ಬಿಎಂಟಿಸಿ ಮುಷ್ಕರಕ್ಕೆ ಸಿದ್ಧತೆ: ಬೇಡಿಕೆ ಈಡೇರಿಗೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ನೌಕರರು

ಚಳಿಯ ಪ್ರಮಾಣ ಹೆಚ್ಚಾಗಿ ಇರುವುದು ಜ್ವರ, ಚಳಿಯಂತಹ ಲಕ್ಷಣ ಭಾದಿಸುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆಯಿಂದ ಇರಬೇಕಾಗಿದೆ.‌ ಚಳಿಗಾಲದ ಆರಂಭಕ್ಕೂ ಮೊದಲೇ ಕನಿಷ್ಟ ತಾಪಮಾನ ಭಾರೀ ಕುಸಿತವಾಗಿದ್ದು, ಮುಂದಿನ ದಿನಗಳಲ್ಲಿ ಕನಿಷ್ಟ ತಾಪಮಾನ ಎಷ್ಟು ದಾಖಲಾಗಲಿದೆ ಅಂತ ಕಾದುನೋಡ್ಬೇಕಿದೆ.

ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ