AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದಿತ ಮಹಿಳೆಗೆ ಬಾಳು ಕೊಡುವುದಾಗಿ ಮಗು ಮಾಡಿ, 36 ಲಕ್ಷ ರೂ. ತೆಗೆದುಕೊಂಡು ವ್ಯಕ್ತಿ ಪರಾರಿ!

ವಿಚ್ಛೇದಿತ ಮಹಿಳೆಯನ್ನು ಮದುವೆಯಾದ ವ್ಯಕ್ತಿಯೊಬ್ಬ ಮಗು ಜನಿಸಿದ ಬಳಿಕ 36 ಲಕ್ಷ ರೂ. ವಂಚಿಸಿ ಪರಾರಿಯಾದ ಘಟನೆ ಬೆಂಗಳೂರಿನ ಬನಶಂಕರಿಯಲ್ಲಿ ನಡೆದಿದೆ. ಘಟನೆ ಸಂಬಂಧ ಮಹಿಳೆ ಪೊಲೀಸರ ವಿರುದ್ಧವೂ ಗಂಭೀರ ಆರೋಪ ಮಾಡಿದ್ದಾರೆ. ಸದ್ಯ ಕೊನೆಗೂ ಮಹಿಳೆಯ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿದೆ.

ವಿಚ್ಛೇದಿತ ಮಹಿಳೆಗೆ ಬಾಳು ಕೊಡುವುದಾಗಿ ಮಗು ಮಾಡಿ, 36 ಲಕ್ಷ ರೂ. ತೆಗೆದುಕೊಂಡು ವ್ಯಕ್ತಿ ಪರಾರಿ!
ಸಂತ್ರಸ್ತೆ ಹಾಗೂ ಆರೋಪಿ ಮೋಹನ್ ರಾಜ್
ರಾಚಪ್ಪಾಜಿ ನಾಯ್ಕ್
| Edited By: |

Updated on: Jan 10, 2026 | 9:03 AM

Share

ಬೆಂಗಳೂರು, ಜನವರಿ 10: ಬೆಂಗಳೂರು (Bangalore) ಬನಶಂಕರಿಯಲ್ಲಿ ವ್ಯಕ್ತಿಯೊಬ್ಬ ವಿಚ್ಛೇದಿತ ಮಹಿಳೆಗೆ ಬಾಳು ಕೊಡುವುದಾಗಿ ಆಕೆ ಜತೆ ಸಂಸಾರ ನಡೆಸಿ ಮಗು ಜನಿಸಿದ ಬಳಿಕ, ಚಿನ್ನಾಭರಣ ಸೇರಿ ಸುಮಾರು 36 ಲಕ್ಷ ರೂಪಾಯಿ ಪಡೆದು ಬಳಿಕ ಪರಾರಿಯಾದ ಆರೋಪ ಕೇಳಿಬಂದಿದೆ. ಬನಶಂಕರಿಯ ಮೋಹನ್ ರಾಜ್ ಎಂಬಾತನ ವಿರುದ್ಧ ಮಹಿಳೆ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸಂತ್ರಸ್ತೆ ಹೇಳುವಂತೆ, ಕಳೆದ 10 ವರ್ಷಗಳಿಂದ ಮೋಹನ್ ರಾಜ್ ಪರಿಚಯವಿದ್ದು, 2022ರಲ್ಲಿ ಇಬ್ಬರ ನಡುವೆ ಮದುವೆ ನಡೆದಿತ್ತು. 2023ರ ಫೆಬ್ರವರಿಯಲ್ಲಿ ದಂಪತಿಗೆ ಹೆಣ್ಣು ಮಗು ಜನಿಸಿತ್ತು. ಆದರೆ 2025ರಲ್ಲಿ ಏಕಾಏಕಿ ಮನೆ ಬಿಟ್ಟು ಹೋದ ಮೋಹನ್ ರಾಜ್ ಇಂದಿಗೂ ಪತ್ತೆಯಾಗಿಲ್ಲ.

ಹೊಸ ಮನೆ ಕಟ್ಟೋಣ ಎಂದು ಹಣ, ಚಿನ್ನ ಪಡೆದಿದ್ದ ಆರೋಪಿ

ಮದುವೆಯಾದ ಬಳಿಕ ಹೊಸ ಮನೆ ಕಟ್ಟೋಣ, ಹೊಸ ಜೀವನ ಶುರು ಮಾಡೋಣ ಎಂದು ನಂಬಿಸಿ ಮಹಿಳೆಯಿಂದ ಹಣ ಪಡೆದಿದ್ದಾನೆ ಎಂಬ ಆರೋಪವಿದೆ. ಚಿನ್ನಾಭರಣ ಅಡವಿಟ್ಟು, ಸಾಲ ಪಡೆದು ಒಟ್ಟು 36 ಲಕ್ಷ ರೂಪಾಯಿ ನೀಡಿದ್ದೇನೆ ಎಂದು ಮಹಿಳೆ ದೂರಿದ್ದಾರೆ. ಈಗ ಹಣ ಕೇಳಿದರೆ ‘ನೀನು ಯಾರು ಅಂತಲೇ ಗೊತ್ತಿಲ್ಲ’ ಎಂದು ಹೇಳುತ್ತಾನೆ ಎಂದು ಆರೋಪಿಸಿದ್ದಾರೆ.

ನ್ಯಾಯ ಕೇಳಲು ಮೋಹನ್ ರಾಜ್ ಮನೆ ಬಳಿ ಹೋದಾಗ ಹಲ್ಲೆ ನಡೆಸಲಾಗಿದೆ ಎನ್ನುವ ಆರೋಪವೂ ಕೇಳಿಬಂದಿದೆ. ಈವರೆಗೆ ನಾಲ್ಕು ಬಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ನ್ಯಾಯ ಸಿಗುತ್ತಿಲ್ಲ. ಮತ್ತೊಮ್ಮೆ ದೂರು ನೀಡಿದರೆ ‘ನಿನ್ನನ್ನೇ ಒಳಗೆ ಹಾಕ್ತೀವಿ’ ಎಂದು ಪೊಲೀಸರು ಹೆದರಿಸಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ. ಪೊಲೀಸರೊಂದಿಗೆ ಆರೋಪಿಗೆ ನಂಟಿದೆ ಎಂಬ ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ ಕೊನೆಗೆ ಇದೀಗ ಆರೋಪಿ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಸಂತ್ರಸ್ತೆಯು 2021ರಲ್ಲಿ ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದರು. ಮೊದಲ ಮದುವೆಯ ವಿಚಾರ ಸಂಪೂರ್ಣವಾಗಿ ತಿಳಿದಿದ್ದರೂ ಮೋಹನ್ ರಾಜ್ ಮದುವೆಯಾಗಿದ್ದಾನೆ ಎಂದು ತಿಳಿಸಿದ್ದಾರೆ. ಮೊದಲ ಪತಿಗೆ ಅನಾರೋಗ್ಯ ಸಮಸ್ಯೆ ಇದ್ದುದರಿಂದ ವಿಚ್ಛೇದನ ಪಡೆದಿದ್ದೆ ಎಂದು ಮಹಿಳೆ ಸ್ಪಷ್ಟಪಡಿಸಿದ್ದಾರೆ.

ಯುವತಿಯರೊಂದಿಗೆ ಅಕ್ರಮ ಸಂಬಂಧ, ಅಶ್ಲೀಲ ಮೆಸೇಜ್: ಮಹಿಳೆ ಆರೋಪ

ಮೋಹನ್ ರಾಜ್ ಬೇರೆ ಬೇರೆ ಯುವತಿಯರೊಂದಿಗೆ ಸಂಬಂಧ ಹೊಂದಿದ್ದಾನೆ, ಅಸಭ್ಯ ಸಂದೇಶಗಳನ್ನು ಕಳಿಸುತ್ತಿದ್ದಾನೆ. ಮೊಬೈಲ್‌ನಲ್ಲಿ ಫೋಟೋಗಳನ್ನೂ ನೋಡಿದ್ದೇನೆ ಎಂದು ಮಹಿಳೆ ಆರೋಪಿಸಿದ್ದಾರೆ. ಮದುವೆಗೆ ಮುಂಚೆಯೂ ನಂತರವೂ ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾನೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ. ತನ್ನ ಹೆಣ್ಣು ಮಗು ಹಾಗೂ ಮೊದಲ ಪತಿಯ ಮಗುವಿನ ಮೇಲೂ ಹಲ್ಲೆ ನಡೆಸಿದ್ದಾನೆ ಎಂದು ದೂರಿದ್ದಾರೆ. ಸದ್ಯ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​