Bengaluru: ದೇವಸ್ಥಾನದಲ್ಲಿ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಧರ್ಮದರ್ಶಿ ಮುನಿಕೃಷ್ಣ ಅರೆಸ್ಟ್

ಅಮೃತಹಳ್ಳಿಯ ಲಕ್ಷ್ಮಿ ನರಸಿಂಹ ಸ್ವಾಮಿ ದೇವರ ದರ್ಶನಕ್ಕೆ ಬಂದಿದ್ದ ಮಹಿಳೆಯ ಮೇಲೆ ದೇವಸ್ಥಾನದ ಆಡಳಿತ ಮಂಡಳಿಯಿಂದಲೇ ಹಲ್ಲೆ ಮಾಡಿರುವ ಅಮಾನುಷ ಘಟನೆ ನಡೆದಿತ್ತು.

Bengaluru: ದೇವಸ್ಥಾನದಲ್ಲಿ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಧರ್ಮದರ್ಶಿ ಮುನಿಕೃಷ್ಣ ಅರೆಸ್ಟ್
ದೇವಸ್ಥಾನದಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದ ಧರ್ಮದರ್ಶಿ ಮುನಿಕೃಷ್ಣ ಅರೆಸ್ಟ್
Follow us
| Updated By: Rakesh Nayak Manchi

Updated on:Jan 08, 2023 | 6:54 AM

ಬೆಂಗಳೂರು: ದೇವಸ್ಥಾನದಲ್ಲಿ ಮಹಿಳೆ ಮೇಲೆ ಧರ್ಮದರ್ಶಿಯಿಂದ ಹಲ್ಲೆ ನಡೆದ ಪ್ರಕರಣ (Assault case by trustee) ಸಂಬಂಧ ಆರೋಪಿ ಮುನಿಕೃಷ್ಣನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ಅಮೃತಹಳ್ಳಿಯ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನ (Temple)ಕ್ಕೆ ಕಳೆದ ಡಿ.21 ರಂದು ಪೂಜೆಗೆ ಹೋಗಿದ್ದ ಹೇಮಾವತಿ ಎಂಬ ಮಹಿಳೆಯ ಮೇಲೆ ಆಡಳಿತ ಮಂಡಳಿಯವರು ದೇವರೆದುರೇ ಮಹಿಳೆಗೆ ಹಿಗ್ಗಾ ಮುಗ್ಗ ಥಳಿಸಿ, ಜಡೆ ಹಿಡಿದು ಹೊರೆಗೆ ಎಳೆದೊಯ್ದಿದ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿತ್ತು. ನನ್ನನ್ನು ದೇವಸ್ಥಾನದ ಒಳಗೆ ಬಿಡಲು ನಿರಾಕರಿಸಿ ಹಲ್ಲೆ ಮಾಡಿದ್ದು, ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದರು, ಈ ವಿಚಾರ ತಡವಾಗಿ ಪತಿಗೆ ತಿಳಿಸಿದ್ದ ಹೇಮಾವತಿ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು.

ಪ್ರಕರಣ ಬೆಳಕಿಗೆ ಬಂದು ಠಾಣೆ ಮೆಟ್ಟಿಲೇರುತ್ತಿದ್ದಂತೆ ಧರ್ಮದರ್ಶಿ ಮುನಿಕೃಷ್ಣ ಪೊಲೀರ ಮುಂದೆ ಹೇಳಿದ್ದೇ ಬೇರೆ. ನನ್ನ ಮೇಲೆ ದೇವರು ಬರುತ್ತದೆ. ವೆಂಕಟೇಶ್ವರ ನನ್ನ ಪತಿ ಗರ್ಭಗುಡಿಯಲ್ಲಿ ನಾನು ವೆಂಕಟೇಶ್ವರನ ಪಕ್ಕ ಕುಳಿತುಕೊಳ್ಳಬೇಕು ಎಂದು ದೇವಸ್ಥಾನದಲ್ಲಿ ಪಟ್ಟು ಹಿಡಿದಿದ್ದ ಮಹಿಳೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಅರ್ಚಕರ ಮೇಲೆಯೇ ಉಗಿದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾಳೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: 8ನೇ ಕ್ಲಾಸ್ ವಿದ್ಯಾರ್ಥಿನಿಗೆ ಪ್ರೇಮ ಪತ್ರ, ಮಗಳ ವಯಸ್ಸಿನ ಬಾಲಕಿಯನ್ನು ಮದ್ವೆಯಾಗುವ ಆಸೆ ವ್ಯಕ್ತಪಡಿಸಿದ ಶಿಕ್ಷಕ

ಎಷ್ಟೇ ಮನವಿ ಮಾಡಿಕೊಂಡರೂ ಮಹಿಳೆಗೆ ಕೇಳದಿದ್ದಾಗ ಆಡಳಿತ ಮಂಡಳಿಯವರು ಸೇರಿ ಥಳಿಸಿದ್ದೇವೆ, ಜೊತೆಗೆ ಘಟನೆ ನಡೆದ ಕೆಲ ದಿನಗಳ ನಂತರ ದೇವಾಲಯಕ್ಕೆ ಬಂದು ಕ್ಷಮೆ ಕೇಳಿದ್ದಳು ಎಂದಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡು ಮುನಿಕೃಷ್ಣನನ್ನು ಬಂಧಿಸಿದ ಅಮೃತಹಳ್ಳಿ ಠಾಣೆ ಪೊಲೀಸರು, ವಿಚಾರಣೆಯನ್ನು ಮುಂದುವಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:54 am, Sun, 8 January 23

‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?