ಜಿಮ್​ನಲ್ಲಿ ಕುಸಿದುಬಿದ್ದು ಯುವತಿ ಸಾವು ಪ್ರಕರಣ; ಪೋಸ್ಟ್ ಮಾರ್ಟಮ್ ವರದಿಯಲ್ಲಿ ಸಾವಿನ ಕಾರಣ ಬಹಿರಂಗ

ಜಿಮ್​ನಲ್ಲಿ ಕುಸಿದುಬಿದ್ದು ಯುವತಿ ಸಾವು ಪ್ರಕರಣ; ಪೋಸ್ಟ್ ಮಾರ್ಟಮ್ ವರದಿಯಲ್ಲಿ ಸಾವಿನ ಕಾರಣ ಬಹಿರಂಗ
ಜಿಮ್‌ನಲ್ಲಿ ವರ್ಕೌಟ್ ವೇಳೆ ಕುಸಿದುಬಿದ್ದು ಮಹಿಳೆ ಸಾವು

ಮಾರ್ಚ್ 26 ರಂದು ಘಟನೆ ನಡೆದಿತ್ತು. ಜಿಮ್ ವರ್ಕ್ ಔಟ್ ಮಾಡುವ ವೇಳೆ ಏಕಾಏಕಿ ಕುಸಿದು ಬಿದ್ದಿದ್ದ ವಿನಯಾ, ಅವರು ಜಿಮ್​​ನಲ್ಲಿ ಕುಸಿದು ಬೀಳುವ ದೃಶ್ಯ ಸಿಸಿ ಕ್ಯಾಮಾರದಲ್ಲಿ ಕೂಡ ರೆಕಾರ್ಡ್ ಆಗಿತ್ತು.

TV9kannada Web Team

| Edited By: ganapathi bhat

Apr 04, 2022 | 2:20 PM


ಬೆಂಗಳೂರು: ನಗರದ ಬೈಯಪ್ಪನಹಳ್ಳಿ ಜಿಮ್‌ನಲ್ಲಿ ಯುವತಿ ಸಾವು ಪ್ರಕರಣಕ್ಕೆ ಸಂಬಂಧಿಸಿ ಸಾವಿನ ಕಾರಣವು ಪೋಸ್ಟ್ ಮಾರ್ಟಮ್ ವರದಿಯಲ್ಲಿ ಬಹಿರಂಗವಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಳಿಕ ಜಿಮ್​ನಲ್ಲಿ ಮೃತಪಟ್ಟಿದ್ದ ಬಗ್ಗೆ ಕಾರಣ ಬಹಿರಂಗವಾಗಿದೆ. ಇದೀಗ ಮರಣೋತ್ತರ ಪರೀಕ್ಷೆಯ ವರದಿ ಟಿವಿ9ಗೆ ಲಭ್ಯವಾಗಿದೆ. ಸಿವಿ ರಾಮನ್ ಆಸ್ಪತ್ರೆ ವೈದ್ಯರಿಂದ ಪೋಸ್ಟ್ ಮಾರ್ಟಂ ವರದಿ ನೀಡಲಾಗಿದೆ. ಅದರಂತೆ, ಕೋಮಾದ ಪರಿಣಾಮವಾಗಿ ಸಾವು ಸಂಭವಿಸಿದೆ. ಮೆದುಳಿನ ರಕ್ತನಾಳದ ಛಿದ್ರಗೊಂಡ ಪರಿಣಾಮವಾಗಿ ಸೆರೆಬ್ರಲ್ ಹೆಮರೇಜ್ ಆಗಿದೆ. ಅದರಿಂದ ಯುವತಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಜಿಮ್‌ನಲ್ಲಿ ವರ್ಕ್ ಔಟ್ ಮಾಡುತ್ತಾ ಇರುವಾಗಲೇ ಕುಸಿದು ಬಿದ್ದಿದ್ದ ಯುವತಿ ಸಾವನ್ನಪ್ಪಿದ್ದರು. ಮಂಗಳೂರು ಮೂಲದ ವಿನಯಾ ಕುಮಾರಿ (35) ಜಿಮ್​ನಲ್ಲಿ ಮೃತಪಟ್ಟಿದ್ದರು. ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ ಯುವತಿ ಸಾವನ್ನಪ್ಪಿದ್ದ ಬಗ್ಗೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಮಾರ್ಚ್ 26 ರಂದು ಘಟನೆ ನಡೆದಿತ್ತು. ಜಿಮ್ ವರ್ಕ್ ಔಟ್ ಮಾಡುವ ವೇಳೆ ಏಕಾಏಕಿ ಕುಸಿದು ಬಿದ್ದಿದ್ದ ವಿನಯಾ, ಅವರು ಜಿಮ್​​ನಲ್ಲಿ ಕುಸಿದು ಬೀಳುವ ದೃಶ್ಯ ಸಿಸಿ ಕ್ಯಾಮಾರದಲ್ಲಿ ಕೂಡ ರೆಕಾರ್ಡ್ ಆಗಿತ್ತು.

ಜಿಮ್​ನಲ್ಲಿ ವರ್ಕ್ ಔಟ್ ಮಾಡುತ್ತಿರುವಾಗ ಸಾವನ್ನಪ್ಪುವ ಬಗ್ಗೆ ಹಲವು ಅಭಿಪ್ರಾಯಗಳು ಜನರಲ್ಲಿ ಇವೆ. ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಕೂಡ ಜಿಮ್​ಗೆ ತೆರಳಿದ್ದ ವೇಳೆ ಮೃತಪಟ್ಟಿದ್ದರು. ಆಗಲೂ ಅತಿಯಾದ ವರ್ಕ್ ಔಟ್ ಮಾಡುವ ಬಗ್ಗೆ ಹಲವು ಮಾಹಿತಿಗಳು, ಪ್ರಶ್ನೆಗಳು ಜನರ ಮನಸಲ್ಲಿ ಮೂಡಿತ್ತು. ಈ ಘಟನೆಯೂ ಅದಕ್ಕೆ ಪೂರಕ ಎಂಬಂತೆ ನಡೆದಿತ್ತು. ಜಿಮ್​ನಲ್ಲಿ ವರ್ಕ್ ಔಟ್ ಮಾಡುತ್ತಲೇ ಯುವತಿ ಕುಸಿದು ಬಿದ್ದು ಸಾವನ್ನಪ್ಪಿದ್ದರು.

ರಕ್ತದ ಒತ್ತಡ ಉಂಟಾಗಿ ಮೆದುಳಿನಲ್ಲಿ ಬ್ಲಡ್ ಪ್ರೆಶರ್ ಆಗಿದೆ

ಮಾರ್ಚ್ 26 ರಂದು ಬೈಯಪ್ಪನಹಳ್ಳಿ ಠಾಣಾ ವ್ಯಾಪ್ತಿಯ ಜಿಮ್​ನಲ್ಲಿ ಯುವತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಪೂರ್ವ ವಿಭಾಗ ಡಿಸಿಪಿ ಡಾ. ಭೀಮಾಶಂಕರ್ ಗುಳೇದ ಹೇಳಿಕೆ ನೀಡಿದ್ದಾರೆ. ಯುವತಿ ಜಿಮ್​ನಲ್ಲಿ ವರ್ಕ್ ಔಟ್ ಮಾಡುವ ವೇಳೆ ಭಾರವಾದ ವಸ್ತುವನ್ನು ಲಿಫ್ಟ್ ಮಾಡಿದ್ದಾರೆ. ಈ ವೇಳೆ ರಕ್ತದ ಒತ್ತಡ ಉಂಟಾಗಿ ಮೆದುಳಿನಲ್ಲಿ ಬ್ಲಡ್ ಪ್ರೆಶರ್ ಉಂಟಾಗಿದೆ. ಮೆದುಳಿನಲ್ಲಿ ಒತ್ತಡದಿಂದ ರಕ್ತನಾಳಗಳು ಒಡೆದು, ರಕ್ತಸ್ರಾವವಾಗಿ ಕೋಮಾಗೆ ಹೋಗಿದ್ದಾರೆ. ಬಳಿಕ ಯುವತಿ ಸಾವನ್ನಪ್ಪಿದ್ದಾರೆಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ವೈದ್ಯರು ಉಲ್ಲೇಖಿಸಿದ್ದಾರೆ ಎಂದು ತಿಳಿಸಿದ್ದಾರೆ.

ಮೃತ ಯುವತಿ ಮೂಲತಃ ಮಂಗಳೂರು ನಿವಾಸಿ:
ಮೃತ ಯುವತಿ ಮೂಲತಃ ಮಂಗಳೂರು ನಿವಾಸಿ. ಖಾಸಗಿ ಕಂಪೆನಿಯಲ್ಲಿ ಬ್ಯಾಕ್​​ ಗ್ರೌಂಡ್ ವೆರಿಫಿಕೇಷನ್ ಅಫೀಸರ್ ಆಗಿ ಕೆಲಸ ಮಾಡ್ತಿದ್ದರು. 35 ವರ್ಷದ ಅವಿವಾಹಿತ ವಿನಯ ಕುಮಾರಿ ಮಲ್ಲೇಶಪಾಳ್ಯದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಕಳೆದು ಎರಡು ವರ್ಷಗಳಿಂದ ಜಿಮ್ ನಲ್ಲಿ ವರ್ಕ್ ಔಟ್ ಮಾಡ್ತಿದ್ದ ವಿನಯ ಕುಮಾರಿ ಬೆಳಗ್ಗೆ ವೇಳೆ ಜಿಮ್ ನಲ್ಲಿ ವರ್ಕ್ ಔಟ್ ಮಾಡಿ, ಕೆಲಸಕ್ಕೆ ತೆರಳುತ್ತಿದ್ದರು.

ಇದನ್ನೂ ಓದಿ: Golden Hour ಎಂಬ ಅಮೂಲ್ಯ ಕ್ಷಣವೂ ಇಲ್ಲದಂತೆ ಹಾರಿಹೋದ ಪ್ರಾಣಪಕ್ಷಿ! ಬೈಯಪ್ಪನಹಳ್ಳಿ ಜಿಮ್‌ನಲ್ಲಿ ಕುಸಿದುಬಿದ್ದು ಮಹಿಳೆ ಸಾವು

ಇದನ್ನೂ ಓದಿ: 3 ತಿಂಗಳಿಂದ ಜಿಮ್ ಬಂದ್: ಮಂಡ್ಯದಲ್ಲಿ ಗೆಳೆಯನ ಮನೆಯಲ್ಲಿ ನಟ ಕಂ Gym Trainer ಆತ್ಮಹತ್ಯೆ

Follow us on

Related Stories

Most Read Stories

Click on your DTH Provider to Add TV9 Kannada