AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ; ಆಕಸ್ಮಿಕವೋ ಅಥವಾ ಕೊಲೆಯೋ? ಮಗಳ ಸಾವಿನ ಹಿಂದೆ ಅಳಿಯನ ಕೈವಾಡವಿದೆ ಎಂದು ಪೋಷಕರ ಆರೋಪ!

ಬೆಂಗಳೂರಿನ ಗೌಡಹಳ್ಳಿಯಲ್ಲಿ ವಾಷಿಂಗ್ ಮೆಷಿನ್ ವಿದ್ಯುತ್ ಆಘಾತದಿಂದ ಮಹಿಳೆಯೊಬ್ಬರ ಸಾವು ಕೊಲೆಯೋ ಆಕಸ್ಮಿಕವೋ ಎಂಬ ಅನುಮಾನ ಮೂಡಿಸಿದೆ. ಪೋಷಕರು ಅಳಿಯನ ಮೇಲೆ ಕೊಲೆ ಸಂಚಿನ ಆರೋಪ ಮಾಡಿದ್ದಾರೆ. ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ಈ ಅನುಮಾನ ಹೆಚ್ಚಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ.

ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ; ಆಕಸ್ಮಿಕವೋ ಅಥವಾ ಕೊಲೆಯೋ? ಮಗಳ ಸಾವಿನ ಹಿಂದೆ ಅಳಿಯನ ಕೈವಾಡವಿದೆ ಎಂದು ಪೋಷಕರ ಆರೋಪ!
ವಾಷಿಂಗ್ ಮೆಷಿನ್ ಶಾಕ್‌ಗೆ ಸುಜಾತ ಬಲಿ
ಅಕ್ಷಯ್​ ಪಲ್ಲಮಜಲು​​
|

Updated on: Apr 27, 2026 | 6:12 PM

Share

ಬೆಂಗಳೂರು, ಏ.27: ರಾಜ್ಯ ರಾಜಧಾನಿಯಲ್ಲಿ ಒಂದು ವಿಚಿತ್ರ ಘಟನೆಯೊಂದು ನಡೆದಿದೆ. ಇದು ಕೊಲೆಯೋ ಅಥವಾ ಆಕಸ್ಮಿಕವೋ ಎಂಬ ಅನುಮಾನಗಳು ಉಂಟಾಗಿದೆ. ಇದೀಗ ಈ ಸಾವಿನ ಸುತ್ತ ಹಲವು ಊಹಪೋಹಗಳು ಉಂಟಾಗಿದೆ. ವಾಷಿಂಗ್ ಮೆಷಿನ್ ಬಳಸುವಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗೌಡಹಳ್ಳಿಯಲ್ಲಿ ನಡೆದಿದೆ. ಆದರೆ, ಮಗಳ ಸಾವಿನ ಹಿಂದೆ ಅಳಿಯನ ಕೈವಾಡವಿದೆ ಎಂದು ಪೋಷಕರು ಗಂಭೀರ ಶಂಕೆ ವ್ಯಕ್ತಪಡಿಸಿದ್ದಾರೆ.

ಮೃತ ಮಹಿಳೆಯನ್ನು ಸುಜಾತ (30) ಎಂದು ಗುರುತಿಸಲಾಗಿದೆ. ತುಮಕೂರಿನ ಹೆಗ್ಗೆರೆ ನಿವಾಸಿಗಳಾದ ಪಾಂಡುರಂಗಯ್ಯ ಮತ್ತು ಭಾಗ್ಯಮ್ಮ ದಂಪತಿಯ ನಾಲ್ಕನೇ ಮಗಳಾದ ಸುಜಾತ, 10 ವರ್ಷಗಳ ಹಿಂದೆ ರಿಯಲ್ ಎಸ್ಟೇಟ್ ಉದ್ಯಮಿ ಚೇತನ್ ಎಂಬುವವರನ್ನು ವಿವಾಹವಾಗಿದ್ದರು. ಇಂದು ಬೆಳಗ್ಗೆ 7:30ರ ಸುಮಾರಿಗೆ ವಾಷಿಂಗ್ ಮೆಷಿನ್ ಹಾಕಲು ಹೋದಾಗ ಕರೆಂಟ್ ಶಾಕ್ ತಗುಲಿ ಸುಜಾತ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ಗಲಾಟೆ, ಬೆಂಗಳೂರಲ್ಲಿ ಬೆದರಿಕೆ: ಪಾರ್ಕ್​​ನಲ್ಲೇ ವ್ಯಕ್ತಿ ಆತ್ಮಹತ್ಯೆ ಕೇಸ್​​ಗೆ ಸ್ಫೋಟಕ ಟ್ವಿಸ್ಟ್​​

ಪೋಷಕರ ಅನುಮಾನಕ್ಕೆ ಕಾರಣವೇನು?

ಸುಜಾತ ಅವರ ಸಾವು ಕೇವಲ ಆಕಸ್ಮಿಕವಲ್ಲ, ಇದರ ಹಿಂದೆ ಅವರ ಪತಿ ಚೇತನ್ ಸಂಚು ಇರಬಹುದು ಎಂದು ಪೋಷಕರು ಆರೋಪಿಸುತ್ತಿದ್ದಾರೆ. ಅದಕ್ಕೆ ಕೆಲವೊಂದು ಕಾರಣಗಳನ್ನು ನೀಡಿದ್ದಾರೆ. ಮೊದಲಾಗಿ ಮದುವೆಯಾದಾಗಿನಿಂದಲೂ ದಂಪತಿಗಳ ನಡುವೆ ಜಗಳ ನಡೆಯುತ್ತಿತ್ತು. ಗಂಡನ ಕಿರುಕುಳ ತಾಳಲಾರದೆ ಸುಜಾತ ಒಂದು ತಿಂಗಳ ಹಿಂದೆ ತವರು ಮನೆಗೆ ಹೋಗಿದ್ದರು ಎಂದು ಹೇಳಲಾಗಿದೆ. ಚೇತನ್ ಮತ್ತು ಆತನ ತಾಯಿ ಸುಜಾತಳ ಮನವೊಲಿಸಿ ಕೇವಲ ಒಂದು ವಾರದ ಹಿಂದಷ್ಟೇ ಗೌಡಹಳ್ಳಿಗೆ ಕರೆಕೊಂಡು ಬಂದಿದ್ದರು. ಮನೆಗೆ ಬಂದ ಎಂಟೇ ದಿನದಲ್ಲಿ ಸುಜಾತ ಶವವಾಗಿರುವುದು ಪೋಷಕರಲ್ಲಿ ಭಾರಿ ಅನುಮಾನ ಮೂಡಿಸಿದೆ ಎಂದು ಆರೋಪಿಸಿದ್ದಾರೆ.

ಘಟನೆ ನಡೆದ ತಕ್ಷಣ ಸುಜಾತ ಅವರನ್ನು ವಿಪಿ ಮಾಗ್ನಸ್ ಆಸ್ಪತ್ರೆಗೆ ದಾಖಲಿಸಿದರೂ, ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ. ಸದ್ಯ ಮೃತದೇಹವನ್ನು ಹೆಚ್ಚಿನ ತನಿಖೆ ಮತ್ತು ಮರಣೋತ್ತರ ಪರೀಕ್ಷೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಇದು ಆಕಸ್ಮಿಕವೋ ಅಥವಾ ವ್ಯವಸ್ಥಿತ ಕೊಲೆಯೋ ಎಂಬುದು ತಿಳಿದುಬರಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು