ಕಸ ಹಾಕಲು ಹೋದ ವಿವಾಹಿತ ಮಹಿಳೆ ನಿಗೂಢ ನಾಪತ್ತೆ: ಪ್ರಿಯಕರನ ಜೊತೆ ಪರಾರಿಯಾದ ಆರೋಪ, ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಬೆಂಗಳೂರಿನ ಬಾಗಲಗುಂಟೆಯಲ್ಲಿ ಕಸ ಹಾಕಲೆಂದು ಹೊರಬಂದ ಮಹಿಳೆ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಏರಿಯಾದ ಕಟಿಂಗ್ ಶಾಪ್ ಮಾಲೀಕ ಪ್ರಭು ಜೊತೆ ಈಕೆ ಪರಾರಿಯಾಗಿದ್ದಾಳೆ ಎಂದು ಪತಿ ಶರತ್ ದೂರು ನೀಡಿದ್ದು, ಅನೈತಿಕ ಸಂಬಂಧದ ಶಂಕೆ ಮೂಡಿದೆ. ಮಹಿಳೆ ತೆರಳಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ದೃಶ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಕಸ ಹಾಕಲು ಹೋದ ವಿವಾಹಿತ ಮಹಿಳೆ ನಿಗೂಢ ನಾಪತ್ತೆ: ಪ್ರಿಯಕರನ ಜೊತೆ ಪರಾರಿಯಾದ ಆರೋಪ, ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ಆರೋಪಿ ಪ್ರಭು ಹಾಗೂ ಮಹಿಳೆ
Image Credit source: tv9

Updated on: Apr 22, 2026 | 9:06 AM

ಬೆಂಗಳೂರು, ಏಪ್ರಿಲ್ 22: ‘ಕಸ ಹಾಕಿ ಬರುತ್ತೇನೆ’ ಎಂದು ಮನೆಯಿಂದ ಹೊರಹೋದ ಇಬ್ಬರು ಮಕ್ಕಳ ತಾಯಿ ನಾಪತ್ತೆಯಾಗಿರುವ ಘಟನೆ ಬೆಂಗಳೂರಿನ (Bengaluru) ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆಯು ತನ್ನ ಪ್ರಿಯಕರನ ಜೊತೆ ಪರಾರಿಯಾಗಿದ್ದಾಳೆ ಎಂದು ಪತಿ ಗಂಭೀರ ಆರೋಪ ಮಾಡಿದ್ದು, ಸದ್ಯ ಪ್ರಕರಣ ಪೊಲೀಸ್ ಮೆಟ್ಟಿಲೇರಿದೆ.

ಮಹಿಳೆ ನಿಗೂಢ ನಾಪತ್ತೆ ಘಟನೆಯ ಹಿನ್ನೆಲೆ

ಬಾಗಲಗುಂಟೆಯಲ್ಲಿ ವಾಸವಿದ್ದ ಶರತ್ ಕುಮಾರ್ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಶರತ್ ಕೆಲಸಕ್ಕೆ ಹೋದ ಸಮಯದಲ್ಲಿ ಅದೇ ಏರಿಯಾದಲ್ಲಿ ಕಟಿಂಗ್ ಶಾಪ್ ನಡೆಸುತ್ತಿದ್ದ ಪ್ರಭು ಎಂಬಾತನ ಜೊತೆ ಮಹಿಳೆ ಸಂಪರ್ಕ ಹೊಂದಿದ್ದಳು ಎನ್ನಲಾಗಿದೆ. ಪ್ರಭು ಮಹಿಳೆಯ ಮೊಬೈಲ್ ರೀಚಾರ್ಜ್ ಮಾಡಿಸುತ್ತಿದ್ದ ವಿಷಯ ತಿಳಿದು ದಂಪತಿ ನಡುವೆ ಈ ಹಿಂದೆ ಗಲಾಟೆಯೂ ನಡೆದಿತ್ತು. ಪತಿ ಶರತ್ ಈ ಬಗ್ಗೆ ಪತ್ನಿಗೆ ಬುದ್ಧಿವಾದ ಹೇಳಿದ್ದರು.

ನಿದ್ದೆ ಮಾತ್ರೆ ಹಾಕಿ ಎಸ್ಕೇಪ್?

ಏಪ್ರಿಲ್ 11ರ ರಾತ್ರಿ ಸುಮಾರು 11:57ಕ್ಕೆ ಮಹಿಳೆ ಮನೆ ಬಿಟ್ಟು ಹೋಗಿದ್ದಾಳೆ. ಹೋಗುವ ಮುನ್ನ ಪತಿ ಮತ್ತು ಮಕ್ಕಳಿಗೆ ಊಟದಲ್ಲಿ ನಿದ್ದೆ ಮಾತ್ರೆ ಬೆರೆಸಿದ್ದಳು ಎಂಬ ಗಂಭೀರ ಆರೋಪವನ್ನು ಪತಿ ಶರತ್ ಮಾಡಿದ್ದಾರೆ. ‘ನಾನು ಮನೆಯಲ್ಲಿದ್ದಾಗಲೇ ಒಂದು ಕೈಯಲ್ಲಿ ಕಸದ ಬಕೆಟ್ ಹಾಗೂ ಮತ್ತೊಂದು ಕೈಯಲ್ಲಿ ಬ್ಯಾಗ್ ಹಿಡಿದುಕೊಂಡು ಪ್ರಿಯಕರನ ಜೊತೆ ಹೋಗಿದ್ದಾಳೆ’ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಸಿಸಿಟಿವಿಯಲ್ಲಿ ದೃಶ್ಯ ದಾಖಲು

Married Woman Flee With Boyfriend In Bengaluru: ಕಸ ಎಸೆದು ಬರ್ತೀನಿ ಅಂತ ಗೃಹಿಣಿ ಪ್ರಿಯಕರನ ಜತೆ ಪರಾರಿ?
ಮಹಿಳೆಯು ಬ್ಯಾಗ್ ಹಿಡಿದು ಹೋಗುತ್ತಿರುವ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಪತ್ನಿಗಾಗಿ ಎಲ್ಲೆಡೆ ಹುಡುಕಾಟ ನಡೆಸಿದ ಪತಿ ಶರತ್, ಕೊನೆಗೆ ಸಿಗದಿದ್ದಾಗ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ‘ಫಾರಿನ್ ಸ್ಟೈಲ್’ ಪ್ರಪೋಸ್ ಮಾಡ್ತೀನಿ ಅಂತ ಕೈ-ಕಾಲು ಕಟ್ಟಿ ಪ್ರಿಯಕರನಿಗೆ ಬೆಂಕಿ ಹಚ್ಚಿದ ಪ್ರಿಯತಮೆ! ಕಣ್ಣೆದುರೇ ಸುಟ್ಟು ಕರಕಲಾದ ಯುವಕ

ವರದಿ: ಅರುಣ್ ಕುಮಾರ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:35 am, Wed, 22 April 26

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us