AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಸರಿನ ಪ್ಯಾಕೆಟ್​​ಗೆ ರಿಫಂಡ್​ ಪಡೆಯಲು ಹೋಗಿ 98 ಸಾವಿರ ರೂ. ಕಳೆದುಕೊಂಡ ಮಹಿಳೆ: ಅಷ್ಟಕ್ಕೂ ಆಗಿದ್ದೇನು? ಇಲ್ಲಿದೆ ಮಾಹಿತಿ

ಬ್ಲಿಂಕಿಟ್ನಲ್ಲಿ ಆರ್ಡರ್​​ ಮಾಡಿದ್ದ ಮೊಸರಿನ ಪ್ಯಾಕೆಟ್‌ ಹಾಳಾಗಿದ್ದ ಕಾರಣ ಅದಕ್ಕೆ ರಿಫಂಡ್ ಪಡೆಯಲು ಯತ್ನಿಸಿದ ಬೆಂಗಳೂರಿನ ಮಹಿಳೆಯೋರ್ವರು 98 ಸಾವಿರ ರೂಪಾಯಿ ಕಳೆದುಕೊಂಡ ಆಘಾತಕಾರಿ ಘಟನೆ ನಡೆದಿದೆ. ಕಸ್ಟಮರ್ ಕೇರ್ ನಕಲಿ ನಂಬರ್ ನಂಬಿ ವಂಚಕರ ಬಲೆಗೆ ಬಿದ್ದ ಆಕೆ ಅವರು ಹೇಳಿದಂತೆ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದರು. ಆ ಬಳಿಕ ಖಾತೆಯಿಂದ ಹಣ ಕಡಿತವಾಗಿರುವುದು ಮಹಿಳೆಗೆ ಗೊತ್ತಾಗಿದೆ ಎನ್ನಲಾಗಿದೆ.

ಮೊಸರಿನ ಪ್ಯಾಕೆಟ್​​ಗೆ ರಿಫಂಡ್​ ಪಡೆಯಲು ಹೋಗಿ 98 ಸಾವಿರ ರೂ. ಕಳೆದುಕೊಂಡ ಮಹಿಳೆ: ಅಷ್ಟಕ್ಕೂ ಆಗಿದ್ದೇನು? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರImage Credit source: Getty Images
ಪ್ರಸನ್ನ ಹೆಗಡೆ
|

Updated on: Oct 26, 2026 | 4:28 PM

Share

ಬೆಂಗಳೂರು, ಅಕ್ಟೋಬರ್​​ 26: ಸಮಯದ ಅಭಾವದ ಕಾರಣ ಇಂದು ನಗರಗಳ ಬಹುತೇಕ ಜನರು ದೈನಂದಿನ ಗೃಹೋಪಯೋಗಿ ವಸ್ತುಗಳಿಗೆ ಇನ್​​ಸ್ಟಂಟ್​​ ಡೆಲಿವರಿ ಆ್ಯಪ್​​ಗಳನ್ನು ನೆಚ್ಚಿಕೊಂಡಿದ್ದಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡು ಆನ್​​ಲೈನ್​​ ವಂಚನೆ ಪ್ರಕರಣಗಳು ಹೆಚ್ಚುತ್ತಿವೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಬೆಂಗಳೂರಿನ ಮಹಿಳೆಯೋರ್ವರು ರಿಫಂಡ್​​ ಪಡೆಯಲು ಹೋಗಿ ಬರೋಬ್ಬರಿ 98 ಸಾವಿರ ರೂ. ಕಳೆದುಕೊಂಡಿದ್ದಾರೆ. ಕಸ್ಟಮರ್ ಕೇರ್ ಪ್ರತಿನಿಧಿಗಳೆಂದು ಮಹಿಳೆಯನ್ನು ಸಂಪರ್ಕಿಸಿದ್ದ ವಂಚಕರು, ಮಹಿಳೆಗೆ ವಾಟ್ಸ್​​ಆ್ಯಪ್​​ ಲಿಂಕ್​​ ಕಳುಹಿಸಿದ್ದರು. ಬಳಿಕ ಅವರು ಹೇಳಿದ್ದ ಪ್ರಕ್ರಿಯೆಯನ್ನು ಅನುಸರಿಸಿದ ಬಳಿಕ ವಂಚನೆ ನಡೆದಿದೆ ಎನ್ನಲಾಗಿದೆ.

ಪ್ರಕರಣ ಏನು?

ವಸಂತನಗರದ ಪ್ಯಾಲೇಸ್ ಕ್ರಾಸ್ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್ ನಿವಾಸಿ ಮಹಿಳೆ ಅಕ್ಟೋಬರ್ 17ರಂದು ಬ್ಲಿಂಕಿಟ್‌ನಲ್ಲಿ ಮೊಸರಿನ ಪ್ಯಾಕೆಟ್ ಆರ್ಡರ್ ಮಾಡಿದ್ದರು. ಪ್ಯಾಕೆಟ್ ಹಾನಿಗೊಳಗಾದ ಸ್ಥಿತಿಯಲ್ಲಿ ಬಂದಿದ್ದರಿಂದ ಅವರು ಡೆಲಿವರಿ ಏಜೆಂಟ್‌ಗೆ ದೂರು ನೀಡಿದ್ದರು. ಈ ವೇಳೆ ಕಸ್ಟಮರ್ ಕೇರ್ ಅನ್ನು ಸಂಪರ್ಕಿಸುವಂತೆ ಏಜೆಂಟ್ ಸಲಹೆ ನೀಡಿದ್ದ. ನಂತರ ಮಹಿಳೆ ಆನ್‌ಲೈನ್‌ನಲ್ಲಿ ಕಸ್ಟಮರ್ ಕೇರ್ ನಂಬರ್ ಹುಡುಕಿ, ಅಲ್ಲಿ ಸಿಕ್ಕ ಸಂಖ್ಯೆಗೆ ಕರೆ ಮಾಡಿದ್ದರು. ಕರೆ ಸ್ವೀಕರಿಸಿದ ವ್ಯಕ್ತಿ ಹಣ ಮರುಪಾವತಿ ಮಾಡುವುದಾಗಿ ಭರವಸೆ ನೀಡಿ, ಕೆಲವು ಹಂತಗಳನ್ನು ಅನುಸರಿಸುವಂತೆ ಸೂಚಿಸಿದ್ದ ಎನ್ನಲಾಗಿದೆ.

ಇದನ್ನೂ ಓದಿ: ವಿಧಾನಸೌಧವನ್ನು ಬಾಂಬ್​ನಿಂದ ಉಡಾಯಿಸಿದಂತೆ ಎಐ ವೀಡಿಯೋ ಸೃಷ್ಟಿಸಿದ ಯುವಕ! ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ

ಬಳಿಕ ವಾಟ್ಸ್‌ಆ್ಯಪ್‌ನಲ್ಲಿ ಲಿಂಕ್ ಕಳುಹಿಸಿ, ಹಾನಿಗೊಳಗಾದ ಮೊಸರಿನ ಪ್ಯಾಕೆಟ್‌ನ ಫೋಟೋ ಅಪ್‌ಲೋಡ್ ಮಾಡುವಂತೆ ಕೇಳಿದ್ದ. ಮಹಿಳೆ ಫೋಟೋ ಕಳುಹಿಸಿದ ನಂತರ ಮತ್ತೊಬ್ಬ ವ್ಯಕ್ತಿ ಕರೆ ಮಾಡಿ, ಮರುಪಾವತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿ ಡಿಜಿಟಲ್ ಪಾವತಿ ಖಾತೆಯನ್ನು ಪರಿಶೀಲಿಸುವಂತೆ ಸೂಚಿಸಿದ್ದ. ಹೀಗಾಗಿ ಮಹಿಳೆ ಖಾತೆ ತೆರೆದು ಬ್ಯಾಲೆನ್ಸ್ ಪರಿಶೀಲಿಸಲು ಪಾಸ್‌ವರ್ಡ್ ನಮೂದಿಸಿದಾಗ, ಆ್ಯಪ್ ಇದ್ದಕ್ಕಿದ್ದಂತೆ ಪರದೆಯಿಂದ ಮಾಯವಾಗಿದೆ. ಕೆಲವೇ ಹೊತ್ತಿನಲ್ಲಿ ಅವರ ಬ್ಯಾಂಕ್ ಖಾತೆಯಿಂದ 98 ಸಾವಿರ ರೂ. ಕಡಿತವಾಗಿರುವುದು ತಿಳಿದುಬಂದಿದೆ ಎಂದು ಟೈಮ್ಸ್​​ ಆಫ್​​ ಇಂಡಿಯಾ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಬಿಗ್ ಬಾಸ್ ಅಲ್ಲಿರೋ ಕುಮಾರಿ ವೇಸ್ಟ್; ನೇರವಾಗಿ ತೀರ್ಪು ನೀಡಿದ ಲಕ್ಷ್ಮಿ
ಬಿಗ್ ಬಾಸ್ ಅಲ್ಲಿರೋ ಕುಮಾರಿ ವೇಸ್ಟ್; ನೇರವಾಗಿ ತೀರ್ಪು ನೀಡಿದ ಲಕ್ಷ್ಮಿ
ಲಖನೌದಲ್ಲಿ ಕಾರು ಪಾರ್ಕಿಂಗ್ ವಿಚಾರಕ್ಕೆ ಗುಂಡಿನ ದಾಳಿ
ಲಖನೌದಲ್ಲಿ ಕಾರು ಪಾರ್ಕಿಂಗ್ ವಿಚಾರಕ್ಕೆ ಗುಂಡಿನ ದಾಳಿ
ಹೇಗಿದೆ ಗೊತ್ತಾ ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್​​ ರೈಲು?
ಹೇಗಿದೆ ಗೊತ್ತಾ ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್​​ ರೈಲು?
ಸಂಸತ್ ಭವನದ ನಾರ್ತ್ ಬ್ಲಾಕ್‌ನಲ್ಲಿ ಭಾರಿ ಅಗ್ನಿ ಅವಘಡ
ಸಂಸತ್ ಭವನದ ನಾರ್ತ್ ಬ್ಲಾಕ್‌ನಲ್ಲಿ ಭಾರಿ ಅಗ್ನಿ ಅವಘಡ
ವೃದ್ಧೆ ಕೊಂದು ಮನೆಯಲ್ಲಿದ್ದ ಚಿನ್ನಾಭರಣ ದರೋಡೆ ಮಾಡಿದ ದುರುಳರು
ವೃದ್ಧೆ ಕೊಂದು ಮನೆಯಲ್ಲಿದ್ದ ಚಿನ್ನಾಭರಣ ದರೋಡೆ ಮಾಡಿದ ದುರುಳರು
ಸ್ಟಿಂಗ್ ವಿಡಿಯೋದಲ್ಲಿದ್ದ ಮಹಿಳೆ ಹೇಳಿಕೆಗೆ ಯತೀಂದ್ರ ಏನಂದ್ರು ನೋಡಿ
ಸ್ಟಿಂಗ್ ವಿಡಿಯೋದಲ್ಲಿದ್ದ ಮಹಿಳೆ ಹೇಳಿಕೆಗೆ ಯತೀಂದ್ರ ಏನಂದ್ರು ನೋಡಿ
ಕುಮಾರಿ ವೇಸ್ಟ್​ ಪೀಸ್ ಎಂದ ಸೌಂದರ್ಯಾ ಶೆಟ್ಟಿ; ನಡೆಯಿತು ದೊಡ್ಡ ಜಗಳ
ಕುಮಾರಿ ವೇಸ್ಟ್​ ಪೀಸ್ ಎಂದ ಸೌಂದರ್ಯಾ ಶೆಟ್ಟಿ; ನಡೆಯಿತು ದೊಡ್ಡ ಜಗಳ
ಸೀಗೆ ಹುಣ್ಣಿಮೆ: ಕೊಪ್ಪಳ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರ ಮಹಾಪೂರ, ಜನಸಾಗರ
ಸೀಗೆ ಹುಣ್ಣಿಮೆ: ಕೊಪ್ಪಳ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರ ಮಹಾಪೂರ, ಜನಸಾಗರ
ಇಂದು ಸೀಗೆ ಹುಣ್ಣಿಮೆ; ಈ ರಾಶಿಯವರಿಗೆ ಶುಭ ದಿನ
ಇಂದು ಸೀಗೆ ಹುಣ್ಣಿಮೆ; ಈ ರಾಶಿಯವರಿಗೆ ಶುಭ ದಿನ
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಇನ್ಮುಂದೆ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಇನ್ಮುಂದೆ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ