AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕನ ವಿರುದ್ಧ ಲವ್ ಜಿಹಾದ್ ಆರೋಪ ಮಾಡಿದ್ದ ಬೆಂಗಳೂರು ಯುವತಿಯ ಕೇಸ್​ಗೆ ಟ್ವಿಸ್ಟ್, ಪೊಲೀಸರು ಬಿಚ್ಚಿಟ್ಟ ಸತ್ಯವೇನು ಗೊತ್ತಾ?

37 ವರ್ಷದ ಬೆಂಗಳೂರು ಮಹಿಳೆಯ ‘ಲವ್ ಜಿಹಾದ್’ ಆರೋಪದ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಪೊಲೀಸರು, ಈ ಪ್ರಕರಣದಲ್ಲಿ ಯಾವುದೇ ರೀತಿಯಲ್ಲೂ ಲವ್ ಜಿಹಾದ್ ಆಯಾಮ ಕಂಡು ಬಂದಿಲ್ಲ. ಕಾಶ್ಮೀರ್ ಯುವಕ ಹಾಗೂ ಬೆಂಗಳೂರು ಯುವತಿ ಇಬ್ಬರೂ ಎರಡು ವರ್ಷದ ಹಿಂದೆಯೇ ಬ್ರೇಕ್ ಆಪ್ ಆಗಿದ್ದಾರೆ. ಯುವಕ ಬೇರೆ ಯುವತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು ವಿಷಯ ತಿಳಿಯುತ್ತಿದ್ದಂತೆ ಯುವತಿ ಲವ್ ಜಿಹಾದ್ ಆರೋಪ ಮಾಡಿದ್ದಾರೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ಯುವಕನ ವಿರುದ್ಧ ಲವ್ ಜಿಹಾದ್ ಆರೋಪ ಮಾಡಿದ್ದ ಬೆಂಗಳೂರು ಯುವತಿಯ ಕೇಸ್​ಗೆ ಟ್ವಿಸ್ಟ್, ಪೊಲೀಸರು ಬಿಚ್ಚಿಟ್ಟ ಸತ್ಯವೇನು ಗೊತ್ತಾ?
ಬೆಂಗಳೂರು ಪೊಲೀಸ್
ಆಯೇಷಾ ಬಾನು
|

Updated on:Sep 26, 2023 | 9:20 AM

Share

ಬೆಂಗಳೂರು, ಸೆ.26: ಇತ್ತೀಚೆಗೆ ಯುವತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ (Social Media) ಲವ್ ಜಿಹಾದ್ (Love Jihad) ಆರೋಪ ಮಾಡಿ ಪೊಲೀಸರಿಗೆ ಟ್ಯಾಗ್ ಮಾಡಿ ಪೋಸ್ಟ್ ಹಾಕಿದ್ದರು. ಇದನ್ನು ಗಮನಿಸಿದ ನಗರ ಪೊಲೀಸರು (Bengaluru Police) ಯುವತಿಯಿಂದ ಹೇಳಿಕೆ ಪಡೆದು ಕಾಶ್ಮೀರ್ ಮೂಲದ ಯುವಕನ ವಿರುದ್ಧ ಎಫ್​ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದರು. ಸದ್ಯ ಈಗ ಘಟನೆಯ ಸತ್ಯಾಂಶ ಬಯಲಾಗಿದೆ. ಈ ಪ್ರಕರಣದಲ್ಲಿ ಲವ್ ಜಿಹಾದ್ ಆರೋಪ ಸುಳ್ಳು ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

37 ವರ್ಷದ ಬೆಂಗಳೂರು ಮಹಿಳೆಯ ‘ಲವ್ ಜಿಹಾದ್’ ಆರೋಪದ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಪೊಲೀಸರು, ಈ ಪ್ರಕರಣದಲ್ಲಿ ಯಾವುದೇ ರೀತಿಯಲ್ಲೂ ಲವ್ ಜಿಹಾದ್ ಆಯಾಮ ಕಂಡು ಬಂದಿಲ್ಲ. ಕಾಶ್ಮೀರ್ ಯುವಕ ಹಾಗೂ ಬೆಂಗಳೂರು ಯುವತಿ ಇಬ್ಬರೂ ಎರಡು ವರ್ಷದ ಹಿಂದೆಯೇ ಬ್ರೇಕ್ ಆಪ್ ಆಗಿದ್ದಾರೆ. ಸದ್ಯ ಈಗ ಯುವಕ ಬೇರೆ ಯುವತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾನೆ ಎಂದು ವಿಷಯ ತಿಳಿಯುತ್ತಿದ್ದಂತೆ ಬೆಂಗಳೂರು ಯುವತಿ ಲವ್ ಜಿಹಾದ್ ಆರೋಪ ಮಾಡಿದ್ದಾರೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ಘಟನೆ ಹಿನ್ನೆಲೆ

ಲವ್ ಜಿಹಾದ್ ಆರೋಪ ಮಾಡಿ ಯುವತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಇದನ್ನು ಗಮನಿಸಿದ ಪೊಲೀಸರು ಯುವತಿಯನ್ನು ಪತ್ತೆ ಮಾಡಿ ಹೇಳಿಕೆ ಪಡೆದು ಯುವಕನ ವಿರುದ್ಧ ಎಫ್​ಐಆರ್ ದಾಖಲಿಸಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ತನಿಖೆ ಆರಂಭಿಸಿದ್ದ ಪೊಲೀಸರು ಕಳೆದ ವಾರ ಕಾಶ್ಮೀರದ ಶ್ರೀನಗರದ ಜಕುರಾ ಪ್ರದೇಶದ ಮೊಜಿಫ್ ಅಶ್ರಫ್ ಬೇಗ್ (32) ಎಂಬಾತನನ್ನು ಬೆಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದರು. ಬಳಿಕ ಭಾರತೀಯ ದಂಡ ಸಂಹಿತೆಯಡಿ ಅತ್ಯಾಚಾರ, ಅಸ್ವಾಭಾವಿಕ ಲೈಂಗಿಕತೆ, ಕ್ರಿಮಿನಲ್ ಬೆದರಿಕೆ ಮತ್ತು ವಂಚನೆಗೆ ಸಂಬಂಧಿಸಿದ ಆರೋಪಗಳು ಹಾಗೂ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಕಾಯಿದೆಯಡಿ ಅಕ್ರಮ ಮತಾಂತರಕ್ಕೆ ಯತ್ನಿಸಿದ ಆರೋಪದಡಿ ಅಶ್ರಫ್ ಬೇಗ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂ ಓದಿ: ಮಣಿಪುರ: ಜುಲೈನಲ್ಲಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಹತ್ಯೆ, ಶವದ ಚಿತ್ರಗಳು ವೈರಲ್

ಸದ್ಯ ತನಿಖೆ ನಂತರ ಈ ಪ್ರಕರಣದಲ್ಲಿ ಯಾವುದೇ ‘ಲವ್ ಜಿಹಾದ್’ ಆಯಾಮವಿಲ್ಲ. ಆದ್ದರಿಂದ ನಾವು ಆರೋಪಗಳನ್ನು ಕೈಬಿಡುತ್ತಿದ್ದೇವೆ. ಆದರೆ ಅಶ್ರಫ್ ಬೇಗ್ ವಿರುದ್ಧ ಅತ್ಯಾಚಾರ, ವಂಚನೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪಗಳು ಇರಲಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಯುವತಿ ಹಾಗೂ ಯುವಕ ಇಬ್ಬರೂ ಟೆಕ್ಕಿಗಳಾಗಿದ್ದು, ಬೆಂಗಳೂರು ನಗರದ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. 2018ರಲ್ಲಿ ಇಬ್ಬರಿಗೂ ಪರಿಚಯವಾಗಿ ಪ್ರೇಮ ಶುರುವಾಗಿತ್ತು. ಬಳಿಕ ಮೂರು ವರ್ಷ ಲೀವಿಂಗ್ ಟು ಗೆದರ್ ಇದ್ದು ಬ್ರೇಕ್ ಅಪ್ ಆಗಿದ್ದಾರೆ. ಅಶ್ರಫ್ ಕೆಲಸದ ನಿಮಿತ್ತ ಪುಣೆಗೆ ತೆರಳಿದ್ದ. ಬ್ರೇಕ್ ಅಪ್ ಆದರೂ ಫೋನ್ ಕರೆಗಳ ಮೂಲಕ ಇಬ್ಬರೂ ಸಂಪರ್ಕದಲ್ಲಿದ್ದರು. ಆದರೆ ಇತ್ತೀಚೆಗೆ ಅಶ್ರಫ್ ತನ್ನ ಊರಲ್ಲೇ ಯುವತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ. ಈ ವಿಚಾರ ಬೆಂಗಳೂರಿನಲ್ಲಿದ್ದ ಯುವತಿಗೆ ತಿಳಿಯುತ್ತಿದ್ದಂತೆ ಆಕೆ ಅಶ್ರಫ್ ವಿರುದ್ಧ ಲವ್ ಜಿಹಾದ್ ಆರೋಪ ಮಾಡಿ ಪ್ರಕರಣ ದಾಖಲಿಸಿದ್ದಳು. ಇನ್ನು ಯುವತಿ ಯುವಕನಿಗಿಂತ ಐದು ವರ್ಷ ದೊಡ್ಡವರು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:16 am, Tue, 26 September 23

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ