AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುದುಚೆರಿ ಪ್ರಯಾಣದ ವೇಳೆ ಬಸ್​​ನಲ್ಲಿ ಗಿಳಿ ಕಳವು: ಪೊಲೀಸರಿಗೆ ಬೆಂಗಳೂರು ಮಹಿಳೆಯಿಂದ ದೂರು

ಬೆಂಗಳೂರಿನ ಮಹಿಳೆಯೊಬ್ಬರ ಸಾಕು ಗಿಳಿ ಪುದುಚೆರಿಗೆ ಪ್ರಯಾಣದ ವೇಳೆ ಬಸ್‌ನಲ್ಲಿ ಕಳ್ಳತನವಾಗಿದೆ. ಆನೇಕಲ್ ಮತ್ತು ಅತ್ತಿಬೆಲೆ ನಡುವೆ ಬಸ್‌ನಲ್ಲಿದ್ದ ಗಿಳಿ ಪಂಜರ ಸಮೇತ ಕಾಣೆಯಾಗಿದೆ ಎಂದು ಮಹಿಳೆ ಅತ್ತಿಬೆಲೆ ಪೊಲೀಸರಿಗೆ ದೂರು ನೀಡಿದ್ದಾರೆ. ಬಸ್‌ನ ಸಿಸಿಟಿವಿ ದೃಶ್ಯಾವಳಿ ಹಾಗೂ ಪ್ರಯಾಣಿಕರ ವಿವರಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು, ಆರೋಪಿ ಪತ್ತೆಗೆ ಶೋಧ ಮುಂದುವರಿದಿದೆ.

ಪುದುಚೆರಿ ಪ್ರಯಾಣದ ವೇಳೆ ಬಸ್​​ನಲ್ಲಿ ಗಿಳಿ ಕಳವು: ಪೊಲೀಸರಿಗೆ ಬೆಂಗಳೂರು ಮಹಿಳೆಯಿಂದ ದೂರು
ಸಾಂದರ್ಭಿಕ ಚಿತ್ರImage Credit source: AI Image
ಪ್ರಸನ್ನ ಹೆಗಡೆ
|

Updated on: May 14, 2026 | 2:37 PM

Share

ಬೆಂಗಳೂರು, ಮೇ 14: ಆನೇಕಲ್​​ನಿಂದ ಪುದುಚೆರಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತನ್ನ ಸಾಕು ಗಿಳಿಯನ್ನು ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಿ 48 ವರ್ಷದ ಮಹಿಳೆ ಪೊಲೀಸರ ಮೊರೆ ಹೋಗಿರುವ ಘಟನೆ ನಡೆದಿದೆ. ಚಂದಾಪುರದ VBHC ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿರುವ ಖಾಸಗಿ ಕಂಪನಿಯ ಉದ್ಯೋಗಿ ಎಂ. ಲಿಜಿ ಅವರು ತಮ್ಮ ಅಸ್ವಸ್ಥ ತಂದೆಯನ್ನು ಭೇಟಿಯಾಗಲುಪುದುಚೆರಿಗೆ ತೆರಳುತ್ತಿದ್ದ ವೇಳೆ ಅವರ ಸಾಕು ಗಿಳಿ ಕಳುವಾಗಿದ್ದು, ಈ ಬಗ್ಗೆ ದೂರು ದಾಖಲಿಸಿದ್ದಾರೆ.

ಮಾಹಿತಿಯ ಪ್ರಕಾರ ಆನೇಕಲ್​​ ರಸ್ತೆಯಲ್ಲಿ ಅವರು ಬಸ್​​ ಹತ್ತಿದ್ದು, ತಮ್ಮ ಸಾಕು ಗಿಳಿಯನ್ನು ಚಾಲಕನ ಕ್ಯಾಬಿನ್​​ ಸಮೀಪ ಪಂಜರದಲ್ಲಿ ಇಟ್ಟಿದ್ದರು. ಆದರೆ ಆನೇಕಲ್​​ ಮತ್ತು ಅತ್ತಿಬೆಲೆ ಟೋಲ್​​ ಪ್ಲಾಜಾಗಳ ನಡುವೆ ಯಾರೋ ಪಂಜರದ ಸಮೇತ ಗಿಳಿಯನ್ನು ಕದ್ದು ಎಸ್ಕೇಪ್​​ ಆಗಿದ್ದಾರೆ ಎನ್ನಲಾಗಿದೆ. ಅತ್ತಿಬೆಲೆ ಟೋಲ್ ಬಳಿ ಬಸ್ ತಲುಪಿದಾಗ ಗಿಳಿಯನ್ನು ನೋಡಲು ಲಿಜಿ ಅವರು ತೆರಳಿದ್ದ ವೇಳೆ ಘಟನೆ ಬೆಳಕಿಗೆ ಬಂದಿದೆ. ಕ್ಷಣ ಚಾಲಕ ಮತ್ತು ಬಸ್ ಸಿಬ್ಬಂದಿಗೆ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಬಸ್​​ ಅನ್ನು ಸಂಪೂರ್ಣವಾಗಿ ಪರಿಶೀಲಿಸಿದರೂ ಗಿಳಿ ಪತ್ತೆಯಾಗಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು, ಸಿಸಿಟಿವಿಲಿ ಸೆರೆಯಾಯ್ತು ಖದೀಮರ ಕೈಚಳಕ

ತುರ್ತು ಪರಿಸ್ಥಿತಿಯಿಂದ ಪ್ರಯಾಣ ಮುಂದುವರಿಸಿದ್ದ ಮಹಿಳೆ, ಬಸ್ ಸಿಬ್ಬಂದಿಯಿಂದ ಠಾಣೆಯ ಸಂಪರ್ಕ ಸಂಖ್ಯೆ ಪಡೆದು ಬಳಿಕ ವಾಟ್ಸಾಪ್ ಮೂಲಕ ಅತ್ತಿಬೆಲೆ ಪೊಲೀಸರಿಗೆ ದೂರು ನೀಡಿದ್ದಾರೆ. ಬಸ್‌ನಲ್ಲಿದ್ದ ಸಹ ಪ್ರಯಾಣಿಕರು ಗಿಳಿಯನ್ನು ಕದ್ದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಶಂಕಿತನ ಬಗ್ಗೆ ಕೆಲವು ಮಹತ್ವದ ಸುಳಿವುಗಳು ಲಭ್ಯವಾಗಿವೆ. ಆದರೆ ಆರೋಪಿಯು ಯಾವ ಸ್ಥಳದಲ್ಲಿ ಬಸ್‌ನಿಂದ ಇಳಿದಿದ್ದಾನೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆನೇಕಲ್ ಮತ್ತು ಅತ್ತಿಬೆಲೆ ನಡುವೆ ಹಲವು ಕಡೆ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲಾಗಿದೆ. ಹೀಗಾಗಿ ಬಸ್ ನಿರ್ವಹಣಾ ಸಂಸ್ಥೆ ನೀಡಿದ ಪ್ರಯಾಣಿಕರ ವಿವರಗಳನ್ನು ಪರಿಶೀಲಿಸಲಾಗುತ್ತಿದ್ದು, ಬಸ್‌ನ ಸಿಸಿಟಿವಿ ದೃಶ್ಯಾವಳಿಯನ್ನೂ ವೀಕ್ಷಿಸಲಾಗುತ್ತಿದೆ. ಮನೆಯಲ್ಲಿ ಗಿಳಿಯನ್ನು ನೋಡಿಕೊಳ್ಳಲು ಯಾರೂ ಇಲ್ಲದ ಕಾರಣ ಅದನ್ನು ಜೊತೆಗೆ ಕರೆದುಕೊಂಡು ಹೋಗಿದ್ದಾಗಿ ಲಿಜಿ ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿಳೋದಾಗಿ ದಿ ನ್ಯೂ ಇಂಡಿಯನ್​​ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ