AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಡೆಂಗ್ಯೂ ಜೊತೆ ಮಲೇರಿಯಾ ಆತಂಕ, ಪ್ರಕರಣಗಳ ಸಂಖ್ಯೆ ಹೆಚ್ಚಳ

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಈಗಾಗಲೇ ಜನರನ್ನು ಡೆಂಗ್ಯೂ ಕಾಡುತ್ತಿದೆ. ರಾಜ್ಯದ ಒಟ್ಟು ಪ್ರಕರಣಗಳ ಜತೆ ಹೋಲಿಸಿದ್ರೆ ಡೆಂಗ್ಯೂ ಪ್ರಕರಣಗಳಲ್ಲಿ ಸಿಂಹಪಾಲು ಬೆಂಗಳೂರಿನದ್ದಾಗಿದೆ. ಹೀಗಿರುವಾಗ ನಗರಕ್ಕೆ ಮತ್ತೊಂದು ಸೋಂಕಿನ ಭೀತಿ ಶುರುವಾಗಿದೆ. ಆ ಕುರಿತು ಇಲ್ಲಿದೆ ವಿವರ.

ಬೆಂಗಳೂರು: ಡೆಂಗ್ಯೂ ಜೊತೆ ಮಲೇರಿಯಾ ಆತಂಕ, ಪ್ರಕರಣಗಳ ಸಂಖ್ಯೆ ಹೆಚ್ಚಳ
ಬೆಂಗಳೂರು: ಡೆಂಗ್ಯೂ ಜೊತೆ ಮಲೇರಿಯಾ ಆತಂಕ, ಪ್ರಕರಣಗಳ ಸಂಖ್ಯೆ ಹೆಚ್ಚಳ
ವಿನಯ್​ ಕಾಶಪ್ಪನವರ್​
| Edited By: |

Updated on: Jul 26, 2024 | 9:36 AM

Share

ಬೆಂಗಳೂರು, ಜುಲೈ 26: ಕರ್ನಾಟಕದಲ್ಲಿ ಈ ವರ್ಷ ನೀರಿಕ್ಷೆಗೂ ಮೀರಿ ಊಹೆಗೂ ಸಿಗದಂತೆ ಡೆಂಗ್ಯೂ ಜ್ವರ ಜನರ ಜೀವ ಹಿಂಡುತ್ತಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ದಾಖಲೆಯ ಪ್ರಮಾಣದಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 443 ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 443ಕ್ಕೆ ಏರಿಕೆಯಾಗಿದೆ. ರಾಜ್ಯದ ಒಟ್ಟು ಡೆಂಘಿ ಪ್ರಕರಣಗಳ ಸಂಖ್ಯೆ 15544ಕ್ಕೆ ಏರಿಕೆಯಾದರೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಗುರುವಾರ ಕೂಡಾ 203 ಡೆಂಗ್ಯೂ ಪಾಸಿಟಿವ್ ಕೇಸ್​ಗಳು ಕಂಡು ಬಂದಿದ್ದು ಈ ಮೂಲಕ ಬಿಬಿಎಂಪಿ ವ್ಯಾಪ್ತಿಯಲ್ಲಿ 6995 ಪ್ರಕರಣಗಳು ವರದಿಯಾಗಿ ಆತಂಕ ಹೆಚ್ಚಿಸಿದೆ.

ಈಗಾಗಲೇ ರಾಜ್ಯದಲ್ಲಿ ಹಾಗೂ ಬೆಂಗಳೂರಿನಲ್ಲಿ ಡೆಂಗ್ಯೂ ಆರ್ಭಟ ಶುರುವಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಅತಿ ಹೆಚ್ಚು ಪ್ರಕರಣಗಳು ಕಂಡು ಬರುತ್ತಿವೆ. ಇದನ್ನು ತಡೆಗಟ್ಟಲು ಆರೋಗ್ಯ ಇಲಾಖೆ ಹರಸಾಹಸ ಪಡುತ್ತಿದೆ. ಆದರೂ ಕೂಡಾ ಸದ್ಯದ‌ ಮಟ್ಟಿಗೆ ಡೆಂಗ್ಯೂ ಹತೋಟಿಗೆ ಬರುತ್ತಿಲ್ಲ. ಹೀಗಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ರಾಜ್ಯದ ಡಿಸಿ ಹಾಗೂ ಸಿಇಓಗಳ ಜೊತೆ ವಿಕಾಸಸೌಧದಲ್ಲಿ ತುರ್ತು ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ದಿನೇಶ್ ಗುಂಡೂರಾವ್, ಡೆಂಗ್ಯೂ ಪ್ರಕರಣಗಳ ಸ್ಥಿತಿ ಸಂಖ್ಯೆ ಒಂದೇ ರೀತಿ ಇದೆ. ಇದು ಉತ್ತಮ ಬೆಳವಣಿಗೆಯಲ್ಲ. ಈಗಾಗಲೇ ಪ್ರಕರಣಗಳ ಸಂಖ್ಯೆ ಕಡಿಮೆಯಾಗಬೇಕಿತ್ತು ಎಂದಿದ್ದಾರೆ. ಜತೆಗೆ, ರೋಗ ನಿಯಂತ್ರಣಕ್ಕೆ ಇನ್ನಷ್ಟು ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ್ದಾರೆ.

ಈ ಮಧ್ಯೆ, ಬೆಂಗಳೂರಿನಲ್ಲಿ ಡೆಂಗ್ಯೂ ಜೊತೆ ಮಲೇರಿಯಾ ವಕ್ಕರಿಸುತ್ತಿದೆ. ರಾಜಧಾನಿಯಲ್ಲಿ ಶೇ 80 ರಷ್ಟು ಡೆಂಘೀ ಕೇಸ್ ಕಂಡುಬಂದರೆ ಶೇ 20 ರಷ್ಟು ಮಲೇರಿಯಾ ಕೇಸ್​ಗಳು ಪತ್ತೆಯಾಗುತ್ತಿವೆ.

ಮಲೇರಿಯಾ ಲಕ್ಷಣಗಳು

ಮಲೇರಿಯಾ ರೋಗದಲ್ಲಿ ದಾಖಲಾಗುವ ರೋಗಿಗಳಲ್ಲಿ ತೀವ್ರ ಜ್ವರ, ಚಳಿನಡುಕ, ತಲೆನೋವು, ಮೈಕೈ ನೋವು, ವಾಂತಿ, ವಿಪರೀತ ಸುಸ್ತು ಈ ಲಕ್ಷಣಗಳು ಕಂಡುಬರುತ್ತಿವೆ. ಜೊತೆಗೆ ಡೆಂಗ್ಯೂ ಸೋಂಕಿನಲ್ಲಿಯೂ ಇದೇ ತರದ ಲಕ್ಷಣಗಳು ಕಂಡು ಬರ್ತಿದ್ದು ರೋಗಿಗಳನ್ನು ಟೆಸ್ಟ್ ಮಾಡಿದಾಗ ಮಲೇರಿಯಾ ಪತ್ತೆಯಾಗುತ್ತಿದೆ. ಸದ್ಯ, ಇತಹ ಲಕ್ಷಣಗಳು ಕಂಡುಬಂದರೆ ನಿರ್ಲಕ್ಷ್ಯ ವಹಿಸದಂತೆ ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಈ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ರಕ್ತಪರೀಕ್ಷೆ ಮಾಡಿಸಲು ವೈದ್ಯರು ಸೂಚಿಸಿದ್ದಾರೆ.

ತ್ವರಿತ ಚಿಕಿತ್ಸೆ ದೊರೆಯದಿದ್ದರೆ ಅಪಾಯ

ತ್ವರಿತವಾಗಿ ಚಿಕಿತ್ಸೆ ದೊರೆಯದಿದ್ದರೆ ಯಕೃತ್‌ ಸಮಸ್ಯೆ, ಶ್ವಾಸಕೋಶಗಳಲ್ಲಿ ನೀರು ತುಂಬುವುದು, ನ್ಯುಮೋನಿಯ, ದೃಷ್ಟಿಯ ತೊಂದರೆ, ಕಿಡ್ನಿ ವೈಫಲ್ಯ- ಹೀಗೆ ಹಲವು ರೀತಿಯಲ್ಲಿ ಆರೋಗ್ಯ ಕೈಕೊಟ್ಟು ಸಾವು ವಕ್ಕರಿಸಬಹುದು ಎಂದು ಬೌರಿಂಗ್ ಆಸ್ಪತ್ರೆಯ ಜನರಲ್ ಫಿಜಿಶಿಯನ್ ಡಾ ಅಂಭರೀಷ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಈ ಕಷಾಯ ಡೆಂಗ್ಯೂ ಜ್ವರವನ್ನು ನಿವಾರಿಸುತ್ತದೆ! ಮಾಡುವ ವಿಧಾನ ಇಲ್ಲಿದೆ

ಒಟ್ಟಿನಲ್ಲಿ ನಗರದಲ್ಲಿ ಡೆಂಘೀ ಜ್ವರ ಹೆಚ್ಚಾಗುತ್ತಿರುವುದು ಆತಂಕವನ್ನು ಹುಟ್ಟಿಸಿದ್ದು, ಅದರೊಂದಿಗೆ ಇದೀಗ ಮಲೇರಿಯಾ ಕೂಡ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ