
ಬೆಂಗಳೂರು, (ಆಗಸ್ಟ್ 13): ಬಹುನಿರೀಕ್ಷಿತ ಆರ್.ವಿ. ರಸ್ತೆ ಟು ಡೆಲ್ಮಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ಹಳದಿ ಮೆಟ್ರೋ ಮಾರ್ಗವನ್ನು (Yellow Metro Line) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬಂದು ಲೋಕಾರ್ಪಣೆ ಮಾಡಿ ಹೋಗಿದ್ದು, ಈ ಭಾಗದ ಜನರಿಗೆ ಭಾರಿ ಅನುಕೂಲಕರವಾಗಿದೆ. ಐಟಿ ಬಿಟಿ ಕಂಪನಿಗಳಿರುವ ಕಾರಣ ಈ ಭಾಗದಲ್ಲೇ ಹೆಚ್ಚು ಟ್ರಾಫಿಕ್ ಸಮಸ್ಯೆ ಇತ್ತು. ಆದ್ರೆ, ಇದೀಗ ಮೆಟ್ರೋ ಶುರುವಾಗಿದ್ದರಿಂದ ಜನರು ಸಂತಸಗೊಂಡಿದ್ದಾರೆ. ಇನ್ನು ಈ ಹಳದಿ ಮಾರ್ಗದ ಮೆಟ್ರೋ ವೇಳಾಪಟ್ಟಿಯನ್ನು ನೋಡುವುದಾದರೆ ವಾರದ ಎಲ್ಲಾ ದಿನಗಳಲ್ಲಿ ಆರ್.ವಿ. ರಸ್ತೆ ಮತ್ತು ಡೆಲ್ಮಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ಮೆಟ್ರೋ ನಿಲ್ದಾಣಗಳಿಂದ ಬೆಳಿಗ್ಗೆ 6.30 ಕ್ಕೆ ರೈಲುಗಳು ಪ್ರಾರಂಭವಾಗುತ್ತವೆ. ಇನ್ನು ಪ್ರಮುಖವಾಗಿ ಗಮನಿಸಬೇಕಾದ ಅಂಶ ಅಂದರೆ ಗ್ರೀನ್ ಹಾಗೂ ಪರ್ಪಲ್ ಲೈನ್ ಮೆಟ್ರೋ ಪ್ರತಿ ದಿನ ಬೆಳಗ್ಗೆ 5 ಗಂಟೆಗೆ ಪ್ರಾರಂಭವಾದರೆ, ಈ ಹೊಸ ಹಳದಿ ಮಾರ್ಗದಲ್ಲಿ ಮೆಟ್ರೋ ಸಂಚಾರ ಬೆಳಗ್ಗೆ 6.30ರಿಂದ ಶುರುವಾಗುತ್ತವೆ.
ಹಳದಿ ಮಾರ್ಗದ ಟರ್ಮಿನಲ್ ನಿಲ್ದಾಣಗಳ ನಡುವಿನ ಪ್ರಯಾಣದ ದರ 60ರೂ. ಟೋಕನ್‌ಗಳು, NCMC ಕಾರ್ಡ್‌ಗಳು, ಬಿಎಂಆರ್‌ಸಿಎಲ್ ಸ್ಮಾರ್ಟ್ ಕಾರ್ಡ್ ಗಳು, QR ಟಿಕೆಟ್‌ಗಳು ಎಂದಿನಂತೆಯೇ ಲಭ್ಯವಿದೆ. ಟಿಕೆಟ್ ವಿತರಣೆ ವಿಧಾನದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಐಫೋನ್ ಬಳಸುವ ಬಿಎಂಆರ್‌ಸಿಎಲ್ ಪ್ರಯಾಣಿಕರು ಆಪಲ್ ಸ್ಟೋರ್‌ನಿಂದ ನಮ್ಮ ಅಧಿಕೃತ ಮೆಟ್ರೋ ಆಪ್ ಅನ್ನು ಡೌನ್‌ಲೋಡ್ ಮಾಡಿಕೊಂಡು, ಕ್ಯೂರ್ ಕೋಡ್ ಆಧಾರಿತ ಟಿಕೆಟ್‌ಗಳನ್ನು ಖರೀದಿಸಲು ಹಾಗೂ ಬಿಎಂಆರ್‌ಸಿಎಲ್ ಸ್ಮಾರ್ಟ್ ಕಾರ್ಡ್‌ಗಳನ್ನು ರೀಚಾರ್ಜ್ ಮಾಡಲು ಬಳಸಿಕೊಳ್ಳಬಹುದು.
ಆರ್‌ವಿ.ರಸ್ತೆಯಿಂದ ಬೊಮ್ಮಸಂದ್ರ ವರೆಗೆ ದೈನಂದಿನ ಪ್ರಯಾಣವು ಈ ಹಿಂದೆ ಈ ಒಂದು ಮಾರ್ಗದಲ್ಲಿ ಒಂದುವರೆ ಗಂಟೆಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿತ್ತು. ಈಗ ಕೇವಲ 35 ನಿಮಿಷಗಳಲ್ಲಿ ತಲುಪಬಹುದು. ಹೀಗಾಗಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಸಹಕಾರಿಯಾಗಲು ಇನ್ಫೋಸಿಸ್ ತನ್ನ ಉದ್ಯೋಗಿಗಳನ್ನು ಹೊಸ ಹಳದಿ ಮೆಟ್ರೋ ಮಾರ್ಗವನ್ನು ಬಳಸಲು ಪ್ರೋತ್ಸಾಹಿಸಿದೆ. ಸಂಸ್ಥೆಯು ಕಳುಹಿಸಿದ ಆಂತರಿಕ ಇಮೇಲ್‌ನಲ್ಲಿ, ವಿಶೇಷವಾಗಿ ಪೀಕ್ ಅವಧಿಯಲ್ಲಿ ಈ ಮಾರ್ಗವನ್ನು “ದಕ್ಷ” ಎಂದು ವರ್ಣಿಸಿ, ಟ್ರಾಫಿಕ್-ಮುಕ್ತ ಪ್ರಯಾಣಕ್ಕೆ ಶಿಫಾರಸು ಮಾಡಲಾಗಿದೆ.
ಮೆಟ್ರೊ ಪ್ರಯಾಣಿಕರ ಅನುಕೂಲಕ್ಕಾಗಿ ಆರ್.ವಿ.ರಸ್ತೆ-ಬೊಮ್ಮಸಂದ್ರ ಮಾರ್ಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು(ಬಿಎಂಟಿಸಿ) ಹೊಸದಾಗಿ ಫೀಡರ್ ಬಸ್‌ಗಳ ಕಾರ್ಯಾಚರಣೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಂಗಳವಾರ ಚಾಲನೆ ನೀಡಿದ್ದಾರೆ. ಹೀಗಾಗಿ ಹಳದಿ ಮೆಟ್ರೊ ಮಾರ್ಗದಲ್ಲಿ ಸಂಸ್ಥೆಯು ಒಟ್ಟು 4 ಮಾರ್ಗಗಳಲ್ಲಿ ಫೀಡರ್ ಸೇವೆ ಆರಂಭಿಧಿಸಿದ್ದು, 12 ಬಸ್‌ಗಳು 96 ಟ್ರಿಪ್ ಕಾರ್ಯಾಚರಣೆ ನಡೆಸುತ್ತಿವೆ. ಹೊಸ ರೋಡ್, ಬೆರಟೇನ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ, ಇನ್ಫೋಸಿಸ್ ಫೌಂಡೇಶನ್, ಕೋನಪ್ಪನ ಅಗ್ರಹಾರ, ಹೆಬ್ಬಗೋಡಿ ಹಾಗೂ ಬೊಮ್ಮಸಂದ್ರ ಸೇಧಿರಿಧಿದಂತೆ ಒಟ್ಟು 6 ಮೆಟ್ರೊ ನಿಲ್ದಾಣಗಳಿಗೆ ಫೀಡರ್ ಸೇವೆಗಳ ಸೌಲಭ್ಯ ಇದೆ.
ಮಾದಾವರ ಟು ಸಿಲ್ಕ್ ಇನ್ಸ್ಟಿಟ್ಯೂಟ್ (ಗ್ರೀನ್ ಲೈನ್) ಮತ್ತು ವೈಟ್ ಫೀಲ್ಡ್ ನಿಂದ ಚೆಲ್ಲಘಟ್ಟ ( ನೇರಳೆ ಮಾರ್ಗ ) ದಿಂದ ಹಾಗೂ ನಾಡಪ್ರಭು ಕೆಂಪೇಗೌಡ (ಮೆಜಸ್ಟಿಕ್ ) ಇಂಟರ್ ಚೇಂಜ್ ಮೆಟ್ರೋ ಸ್ಟೇಷನ್ ನಿಂದಲೂ ಎಲೆಕ್ಟ್ರಾನಿಕ್ ಸಿಟಿ, ಬೊಮ್ಮಸಂದ್ರ ಮಾರ್ಗಕ್ಕೆ ದೊಡ್ಡ ಪ್ರಮಾಣದಲ್ಲಿ ಪ್ರಯಾಣಿಕರು ಆರ್.ವಿ ರೋಡ್ ಇಂಟರ್ ಚೇಂಜ್ ಮೆಟ್ರೋ ಸ್ಟೇಷನ್ ಮೂಲಕ ಪ್ರಯಾಣ ಮಾಡುತ್ತಿದ್ದಾರೆ.