AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

ಹದಿನೇಳು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪದಡಿ ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿ ಯೋಗ ಕೇಂದ್ರ ನಡೆಸುತ್ತಿದ್ದ ಯೋಗ ಗುರು ನನ್ನು ರಾಜರಾಜೇಶ್ವರಿನಗರ ಪೊಲೀಸರು ಬಂಧಿಸಿದ್ದಾರೆ. ಬಾಲಕಿ ಮಾತ್ರವಲ್ಲದೇ ಯೋಗ ಸೆಂಟರ್​ಗೆ ಬರುತ್ತಿದ್ದ ಸುಮಾರು 8 ಮಹಿಳೆಯರು ಮತ್ತು ಯುವತಿಯರ ಮೇಲೆ ಅತ್ಯಾಚಾರ ಎಸಗಿರುವುದು ತನಿಖೆ ವೇಳೆ ಬಹಿರಂಗವಾಗಿದೆ.

ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ
ಯೋಗ ಗುರು ನಿರಂಜನಾ ಮೂರ್ತಿ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Sep 18, 2025 | 8:45 AM

Share

ಬೆಂಗಳೂರು, ಸೆಪ್ಟೆಂಬರ್​​ 18: ತನ್ನ ಯೋಗ ಸೆಂಟರ್​ಗೆ ಬರುತ್ತಿದ್ದ ಬಾಲಕಿ, ಯುವತಿಯರು ಸೇರಿದಂತೆ ಎಂಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ (Sexually Assault) ಆರೋಪದ ಅಡಿಯಲ್ಲಿ ಯೋಗ ಗುರು (Yoga Guru) ನಿರಂಜನಾ ಮೂರ್ತಿಯನ್ನು ರಾಜರಾಜೇಶ್ವರಿ ನಗರ ಪೊಲೀಸ ಬಂಧಿಸಿದ್ದಾರೆ. ಹದಿನೇಳು ವರ್ಷದ ಬಾಲಕಿ ದೂರಿನ ಅನ್ವಯ ಪೋಕ್ಸೋ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಾಗಿದೆ. ಇನ್ನು ಅತ್ಯಾಚಾರ ಎಸಗಿರುವುದು ತನಿಖೆ ವೇಳೆ ಬಯಲಾಗಿದೆ.

ನಡೆದದ್ದೇನು?

ಯೋಗ ಗುರು ನಿರಂಜನಾ ಮೂರ್ತಿ ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರ ನಡೆಸುತ್ತಿದ್ದ. ನಿಮಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗದಲ್ಲಿ ಹೆಸರು ಬರುವಂತೆ ಮಾಡುತ್ತೇನೆ. ನಿಮಗೆ ಆದರಿಂದ ಸರ್ಕಾರಿ ಕೆಲಸವು ಸಿಗಬಹುದು ಎಂದು ನಂಬಿಸಿ, ಯೋಗ ಸೆಂಟರ್​ಗೆ ಬರುತ್ತಿದ್ದ ಯುವತಿಯರು ಸೇರಿದಂತೆ ಸುಮಾರು ಏಳೆಂಟು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದ.

ಇದನ್ನೂ ಓದಿ: ಆಟೋನಲ್ಲಿ ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಖಾಸಗಿ ಅಂಗಕ್ಕೆ ಕೈ ಹಾಕಿದ ಕಾಮುಕ ಚಾಲಕ

ಇದನ್ನೂ ಓದಿ
Image
ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಖಾಸಗಿ ಅಂಗಕ್ಕೆ ಕೈ ಹಾಕಿದ ಕಾಮುಕ ಚಾಲಕ
Image
ಶ್ವಾನದ ರಕ್ಷಣೆಗೆ ಮುಂದಾಗಿದ್ದ ಯುವತಿಯ ಖಾಸಗಿ ಅಂಗ ಮುಟ್ಟಿ ಪರಾರಿ: ಬಂಧನ
Image
ಬಸ್ಸಿನಲ್ಲಿ ಪುತ್ರಿಗೆ ಲೈಂಗಿಕ ಕಿರುಕುಳ:ಚಾಲಕನ ಬಟ್ಟೆ ಬಿಚ್ಚಿ ಥಳಿತ
Image
ಬೆಂಗಳೂರು: ಯುವತಿಯ ಖಾಸಗಿ ಭಾಗ ಮುಟ್ಟಿ ಬರ್ತಿಯಾ ಎಂದ ಕಾಮುಕರು!

ಅಷ್ಟೇ ಅಲ್ಲದೆ ಹದಿನೇಳು ವರ್ಷದ ಬಾಲಕಿ ಮೇಲೆ ಕೂಡ ಆರೋಪಿ ಅತ್ಯಾಚಾರವೆಸಗಿದ್ದ. ಬಾಲಕಿ ದೂರಿನ ಅನ್ವಯ ರಾಜರಾಜೇಶ್ವರಿ ನಗರ ಪೊಲೀಸರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲು ಮಾಡಿಕೊಂಡಿದ್ದರು. ಅತ್ತ ಕೇಸ್ ದಾಖಲಾಗುತ್ತಿದ್ದಂತೆ ಇತ್ತ ಆರೋಪಿ ತಲೆಮರಿಸಿಕೊಂಡಿದ್ದ. ಸದ್ಯ ಪೊಲೀಸರು ಹುಡುಕಿ ಆತನನ್ನು ಬಂಧಿಸಿದ್ದಾರೆ. ಇನ್ನು ತನಿಖೆ ವೇಳೆ ಅತ್ಯಾಚಾರ ಎಸಗಿರುವುದು ಬಯಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಶ್ವಾನದ ರಕ್ಷಣೆಗೆ ಮುಂದಾಗಿದ್ದ ಯುವತಿಯ ಖಾಸಗಿ ಅಂಗ ಮುಟ್ಟಿ ಪರಾರಿ, ವ್ಯಕ್ತಿ ಬಂಧನ

ಇನ್ನು ಆರೋಪಿ ಹಲವು ಮುಗ್ದ ಬಾಲಕಿಯರು ಮತ್ತು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಬಗ್ಗೆ ಮಾಹಿತಿ ಇದೆ. ಸದ್ಯ ಹೆಚ್ಚಿನ ತನಿಖೆ ನಡೆಯುತ್ತಿದೆ. ಈ ಯೋಗ ಗುರುವಿನಿಂದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರಕ್ಕೆ ಒಳಗಾಗಿದ್ದರೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಲು ಪೊಲೀಸರು ಸೂಚನೆ ನೀಡಿದ್ದಾರೆ. ದೂರುದಾರರ ಮಾಹಿತಿಯನ್ನು ಗೌಪ್ಯವಾಗಿಡುವುದಾಗಿ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:44 am, Thu, 18 September 25

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ