ಬೆಂಗಳೂರಿನಲ್ಲಿ ಇದೆಂಥಾ ಕೃತ್ಯ: ಯುವತಿಯ ಖಾಸಗಿ ಭಾಗ ಮುಟ್ಟಿ ಬರ್ತಿಯಾ ಎಂದ ಕಾಮುಕರು!
ಬೆಂಗಳೂರಿನ ಹೆಣ್ಣೂರು ಮುಖ್ಯ ರಸ್ತೆಯ ಇಂಡಿಯನ್ ಪೆಟ್ರೋಲ್ ಬಂಕ್ ಬಳಿ ಯುವತಿಯೊಬ್ಬಳು ಬೀದಿ ಕಾಮುಕರ ಕಿರುಕುಳಕ್ಕೆ ಒಳಗಾಗಿದ್ದಾರೆ. ಇಬ್ಬರು ಅಪರಿಚಿತರು ಯುವತಿಯ ಸ್ಕೂಟರ್ ಅನ್ನು ಅಡ್ಡಗಟ್ಟಿ ಲೈಂಗಿಕ ದೌರ್ಜನ್ಯ ಎಸಗಿರುವಂತಹ ಘಟನೆ ನಡೆದಿದೆ. ಸದ್ಯ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಮತ್ತು ತನಿಖೆ ನಡೆಯುತ್ತಿದೆ.

ಬೆಂಗಳೂರು, ಏಪ್ರಿಲ್ 05: ಸಿಲಿಕಾನ್ ಸಿಟಿಯಲ್ಲಿ (Bangaluru) ಬೀದಿ ಕಾಮುಕರ ದೌರ್ಜನ್ಯ ದಿನದಿಂದ ದಿನಕ್ಕೆ ಮಿತಿಮೀರುತ್ತಿದೆ. ಯುವತಿಗೆ ಬ್ಯಾಡ್ ಟಚ್ (bad touch) ಮಾಡಿ ಅಸಭ್ಯ ವರ್ತನೆ ಮಾಡಿದ್ದಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿ ನಮ್ಮ ಜೊತೆ ಬರುತ್ತೀಯಾ ಎಂದು ಕಿರುಕುಳ ನೀಡಿರುವಂತಹ ಘಟನೆ ಹೆಣ್ಣೂರು ಮುಖ್ಯ ರಸ್ತೆಯ ಇಂಡಿಯನ್ ಪೆಟ್ರೋಲ್ ಬಂಕ್ ಬಳಿ ಮೂರು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಬಾಣಸವಾಡಿ ಪೊಲೀಸರಿಂದ ಎಫ್ಐಆರ್ ದಾಖಲಿಸಿದ್ದು ತನಿಖೆ ಆರಂಭಿಸಿದ್ದಾರೆ.
ನಡೆದದ್ದೇನು?
ಯುವತಿ ತನ್ನ ಸ್ನೇಹಿತರ ಮನೆಯಿಂದ ಬೆಳಗ್ಗಿನ ಜಾವ 4.30 ರ ವೇಳೆ ಸ್ಕೂಟರ್ನಲ್ಲಿ ಹೊರಟ್ಟಿದ್ದರು. ಈ ವೇಳೆ ಇಬ್ಬರು ಅಪರಿಚಿತ ವ್ಯಕ್ತಿಗಳು ಸ್ಕೂಟರ್ ಹಿಂಬಾಲಿಸಿಕೊಂಡು ಬಂದಿದ್ದು, ಅಡ್ಡ ಹಾಕಿ ಖಾಸಗಿ ಭಾಗ ಟಚ್ ಮಾಡಿ ಲೈಂಗಿಕ ಕಿರುಕುಳ ನೀಡಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಕತ್ತಲಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್, ಕಾಮುಕನ ಕೃತ್ಯದ ವಿಡಿಯೋ ವೈರಲ್
ಈ ವೇಳೆ ಕಾಮುಕರನ್ನ ಹಿಡಿಯಲು ಬಂದ ಸಾರ್ವಜನಿಕರಿಗೆ ಚಾಕು ತೋರಿಸಿ ಪರಾರಿಯಾಗಿದ್ದಾರೆ. ಸದ್ಯ ಬಾಣಸವಾಡಿ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದು, ಎಫ್ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಕತ್ತಲಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್
ಇನ್ನು ಇತ್ತೀಚೆಗೆ ರಾಮಮೂರ್ತಿ ನಗರದಲ್ಲಿ ಇಂತಹದ್ದೇ ಒಂದು ಘಟನೆ ನಡೆದಿತ್ತು. ರಾತ್ರಿ ಕತ್ತಲಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬೈಕ್ನಲ್ಲಿ ಬಂದ ಕಾಮುಕನೊಬ್ಬ ಬ್ಯಾಡ್ ಟಚ್ ಮಾಡಿ ಪರಾರಿಯಾಗಿದ್ದ. ಘಟನೆಯ ವಿಡಿಯೋ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ವೈರಲ್ ಕೂಡ ಆಗಿತ್ತು.
ಬೈಕ್ ಸವಾರ ಅರುಣ್ ಎಂಬಾತ ಅಸಭ್ಯ ವರ್ತನೆ ತೋರಿದ್ದು, ಈ ಬಗ್ಗೆ ರಾಮಮೂರ್ತಿ ನಗರ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಕೇವಲ ಎರಡು ಗಂಟೆಗಳಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಜಾತ್ರೆಗೆ ಬಂದಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗ ಅಂದರೆ ಪ್ರಸಿದ್ಧ ಪುಣ್ಯ ಕ್ಷೇತ್ರ. ದೇಶದ ಬಹುತೇಕ ಭಾಗದಿಂದ ಇಲ್ಲಿ ಯುಗಾದಿ ಜಾತ್ರೆಗೆ ಲಕ್ಷಾಂತರ ಜನ ಬರುತ್ತಾರೆ. ಹೀಗೆ ತನ್ನೇರಡು ಮಕ್ಕಳನ್ನ ಕರೆದು ಕೊಂಡು ಮಹಿಳೆ ಬಂದಿದ್ದಳು.
ಇದನ್ನೂ ಓದಿ: ಅರಣ್ಯ ಪ್ರದೇಶದಲ್ಲಿ ಮರ ಕಳ್ಳತನಕ್ಕೆ ಯತ್ನ: ಆರೋಪಿಗಳಿಗೆ ವಿಚಿತ್ರ ಶಿಕ್ಷೆ ವಿಧಿಸಿದ ಕೋರ್ಟ್
ಈ ಮಹಿಳೆ ವಾಪಸ್ಸು ಹೋಗುವಾಗ ತಡವಾಗಿದೆ. ಕೊನೆಯ ಬಸ್ ಹತ್ತಿದ್ದಾರೆ. ಈ ವೇಳೆ ಆ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಮಹಿಳೆಯ ಚೀರಾಟದಿಂದ ಸಾರ್ವಜನಿಕರಿಂದ ರಕ್ಷಣೆ ಮಾಡಲಾಗಿದೆ. ಖಾಸಗಿ ಬಸ್ ಚಾಲಕ, ಕಂಡಕ್ಟರ್ ಹಾಗೂ ಬಸ್ ಎಜೆಂಟ್ನ್ನು ಪೊಲೀಸರು ಬಂಧಿಸಿದ್ದಾರೆ.
ವರದಿ: ಪ್ರದೀಪ್ ಚಿಕ್ಕಾಟೆ
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.