ಬೆಂಗಳೂರು: ಮಧ್ಯರಾತ್ರಿ ಯುವತಿಗೆ ಪುಂಡರಿಂದ ಲೈಂಗಿಕ ಕಿರುಕುಳ; ನಾಲ್ವರ ಬಂಧನ

ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಪುಂಡರ ಹಾವಳಿ ಮೀತಿಮೀರಿದ್ದು. ಇದೀಗ ಕಸ ಎಸೆಯಲು ಹೊಗಿದ್ದ ಯುವತಿಗೆ ಖಾಸಗಿ ಭಾಗ ಸ್ಪರ್ಶಿಸಿ ಕಿರುಕುಳ ನೀಡಿದ ಘಟನೆ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಹಿನ್ನಲೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಮಧ್ಯರಾತ್ರಿ ಯುವತಿಗೆ ಪುಂಡರಿಂದ ಲೈಂಗಿಕ ಕಿರುಕುಳ; ನಾಲ್ವರ ಬಂಧನ
ಬೆಂಗಳೂರಿನಲ್ಲಿ ಯುವತಿ ಮೇಲೆ ಲೈಂಗೀಕ ದೌರ್ಜನ್ಯ
Follow us
Shivaprasad
| Updated By: ಕಿರಣ್ ಹನುಮಂತ್​ ಮಾದಾರ್

Updated on:Feb 24, 2024 | 3:58 PM

ಬೆಂಗಳೂರು, ಫೆ.24: ಮಾಯಾನಗರಿ ಬೆಂಗಳೂರಿನಲ್ಲಿ ಮಧ್ಯರಾತ್ರಿ ಯುವತಿಗೆ ಪುಂಡರ ಗ್ಯಾಂಗ್​ವೊಂದು ಲೈಂಗಿಕ ಕಿರುಕುಳ ನೀಡಿದ ಘಟನೆ ಆಡುಗೋಡಿ ಪೊಲೀಸ್ ಠಾಣಾ(Adugodi Police Station) ವ್ಯಾಪ್ತಿಯಲ್ಲಿ ನಡೆದಿದೆ. ಕಸ ಎಸೆಯಲು ಹೊಗಿದ್ದ ಯುವತಿಗೆ ಖಾಸಗಿ ಭಾಗ ಸ್ಪರ್ಶಿಸಿ ಕಿರುಕುಳ ನೀಡಿದ್ದು, ಫೆಬ್ರವರಿ 18 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದ್ದು, ಇದೀಗ ಆರೋಪಿಗಳನ್ನ ಬಂಧಿಸಿದ್ದಾರೆ.

ಇದೇ ಫೆಬ್ರವರಿ 18 ರಂದು ಯುವತಿ, ತನ್ನ ಸ್ನೇಹಿತನೊಂದಿಗೆ ಕಸ ಎಸೆಯಲು ತೆರಳಿದ್ದರು. ಈ ವೇಳೆ ಕೊರಮಂಗಲ ಆಟೋ ಸ್ಟಾಂಡ್ ಬಳಿ ಎಂಟ್ರಿ ಕೊಟ್ಟಿದ್ದ ದುರುಳರು, ಯುವತಿ ಮೇಲೆ ಬಿದ್ದು ಖಾಸಗಿ ಭಾಗವನ್ನು ಸ್ಪರ್ಶಿಸಿದ್ದಾರೆ. ಯುವತಿ ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದಾಗ ಆಕೆಯ ಮೇಲೆ ಹಲ್ಲೆ ಮಾಡಿದ್ದಾರೆ. ಜೊತೆಗೆ ಯುವತಿ ಸ್ನೇಹಿತನಿಗೂ ತಳಿಸಿರುವ ಅಪ್ರಾಪ್ತರ ಗುಂಪು, ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಇದನ್ನೂ ಓದಿ:ಸಹ ಶಿಕ್ಷಕನಿಂದ ಶಿಕ್ಷಕಿಯರಿಗೆ ಲೈಂಗಿಕ ಕಿರುಕುಳ ಆರೋಪ; ಶಿಕ್ಷಕನನ್ನು ಟರ್ಮಿನೇಟ್ ಮಾಡಿದ ಶಾಲಾ ಆಡಳಿತ ಮಂಡಳಿ

ಮನೆ ಮುಂದೆ ನಿಲ್ಲಿಸಿದ ಟಾಟಾ ಏಸ್ ವಾಹನವನ್ನು ಕದ್ದು ಎಸ್ಕೇಪ್ ಅಗಿರೋ ಖದೀಮ

ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ ಟಾಟಾ ಏಸ್ ವಾಹನವನ್ನು ಖದೀಮರು ಕದ್ದು ಎಸ್ಕೇಪ್ ಆಗಿರುವ ಘಟನೆ ಬ್ಯಾಟರಾಯನಪುರ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರ ನಿರ್ಲಕ್ಷ್ಯಕ್ಕೆ ವಾಹನ ಚಾಲಕ ಚಾಲಕ ಫಿರೋಜ್ ಬೇಗ್ ಕಣ್ಣೀರು ಹಾಕುತ್ತಿದ್ದಾರೆ. ಬಾಡಿಗೆಗೆ ಟಾಟಾ ಏಸ್ ವಾಹನವನ್ನು ಓಡಿಸಿಕೊಂಡು ಜೀವನ ಮಾಡ್ತಿದ್ದ. ರಾತ್ರಿ ಮನೆಯ ಹೊರಗೆ ನಿಲ್ಲಿಸಿ ಬೆಳಗೆದ್ದು ಬಂದು ನೋಡೋದ್ರಲ್ಲಿ ಟಾಟಾ ಏಸ್ ಕಳ್ಳತನವಾಗಿದೆ. ಖದೀಮನ ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬ್ಯಾಟರಾಯನಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಜೀವನಕ್ಕೆ ಆಧಾರವಾಗಿದ್ದ ವಾಹನ ಕಳುವಾಗಿದ್ದು, ವಾಹನ ಪತ್ತೆಯಾಗ್ತಿಲ್ಲವೆಂದು ಪ್ರತಿದಿನ ವಾಹನವನ್ನ ಹುಡುಕುತ್ತಾ ಪೊಲೀಸ್ ಠಾಣೆಗೆ ಅಲೆಯುತ್ತಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:53 pm, Sat, 24 February 24

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ