Bannerghatta Biological Park: ಬೆಂಗಳೂರು ಬನ್ನೇರುಘಟ್ಟ ಜೈವಿಕ ಉದ್ಯಾನ ಫೆಬ್ರವರಿ 9 ರಂದು ಬಂದ್

ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನ(Bannerghatta Biological Park)ವನ್ನು ಫೆಬ್ರವರಿ 9 ರಂದು ಒಂದು ದಿನಗಳ ಕಾಲ ಮುಚ್ಚಲಾಗುತ್ತಿದೆ. ಜಿ 20 ರಾಷ್ಟ್ರಗಳ ಪ್ರತಿನಿಧಿಗಳು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಒಂದು ದಿನ ಉದ್ಯಾನಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.

Bannerghatta Biological Park: ಬೆಂಗಳೂರು ಬನ್ನೇರುಘಟ್ಟ ಜೈವಿಕ ಉದ್ಯಾನ ಫೆಬ್ರವರಿ 9 ರಂದು ಬಂದ್
ಬನ್ನೇರುಘಟ್ಟ ಜೈವಿಕ ಉದ್ಯಾನ

Updated on: Feb 08, 2023 | 10:27 AM

ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನ(Bannerghatta Biological Park)ವನ್ನು ಫೆಬ್ರವರಿ 9 ರಂದು ಒಂದು ದಿನಗಳ ಕಾಲ ಮುಚ್ಚಲಾಗುತ್ತಿದೆ. ಜಿ 20 ರಾಷ್ಟ್ರಗಳ ಪ್ರತಿನಿಧಿಗಳು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಒಂದು ದಿನ ಉದ್ಯಾನಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಬೆಂಗಳೂರಿನಲ್ಲಿ ಫೆಬ್ರವರಿ 9 ರಿಂದ 11 ದಿನಗಳ ಕಾಲ ಸಭೆ ನಡೆಯಲಿದೆ. ಸಭೆಯ ಭಾಗವಾಗಿ ಜಿ 20 ಸದಸ್ಯರು ಬೆಂಗಳೂರಿನ ವಿವಿಧ ಭಾಗಗಳಿಗೆ ಭೇಟಿ ನೀಡಲಿದ್ದಾರೆ. ಪ್ರೋಟೋಕಾಲ್ ಪ್ರಕಾರ ಬಿಬಿಪಿ, ಬಟರ್​ಫ್ಲೈ ಪಾರ್ಕ್​ ಹಾಗೂ ಸಫಾರಿ ಪ್ರದೇಶವನ್ನು ಮುಚ್ಚುವಂತೆ ಸೂಚನೆ ನೀಡಲಾಗಿದೆ.

ಭಾರತ ಇಂಧನ ಸಪ್ತಾಹ, ಜಿ 20 ಸಭೆ ಹಾಗೂ ಏರ್ ಶೋ ಪರಿಣಾಮ ಹೊರ ರಾಜ್ಯ ಹಾಗೂ ವಿದೇಶದ ಪ್ರತಿನಿಧಿಗಳ ವಾಸ್ತವ್ಯಕ್ಕೆ ನಗರದ ಹೋಟೆಲ್​ಗಳಲ್ಲಿನ ಅಂದಾಜು 50 ಸಾವಿರ ಕೊಠಡಿಗಳನ್ನು ಕಾಯ್ದಿರಿಸಲಾಗಿದೆ.

ಮತ್ತಷ್ಟು ಓದಿ: Aero India 2023: ಬೆಂಗಳೂರು ಏರ್​ ಶೋ ವೇಳೆ ವಿಮಾನ ಹಾರಾಟ ಸ್ಥಗಿತ, ವೇಳಾಪಟ್ಟಿಯಲ್ಲಿ ಬದಲಾವಣೆ

ಭಾರತದ ಇಂಧನ ಸಪ್ತಾಹ ಇಂದು ಕೊನೆಗೊಳ್ಳಲಿದೆ, ಫೆ. 13 ರಿಂದ 17ರವರೆಗೆ ಏರೋ ಇಂಡಿಯಾ ನಡೆಯಲಿದೆ. ನಗರದಲ್ಲಿನ ಪಂಚತಾರಾ ಕೊಠಡಿಗಳನ್ನು ಪೂರ್ಣ ಪ್ರಮಾಣದಲ್ಲಿ ಕಾಯ್ದಿರಿಸಲಾಗಿದೆ. ತ್ರಿ ಸ್ಟಾರ್ ಹೋಟೆಲ್​ಗಳಲ್ಲಿ ಕೆಲವು ಕೊಠಡಿಗಳು ಮಾತ್ರ ಲಭ್ಯವಿದ್ದು, ಅವುಗಳ ದರವೂ ಹೆಚ್ಚಳವಾಗಿದೆ.

ಪ್ರತಿ ವರ್ಷ ಏರ್​ ಶೋ ಸೇರಿದಂತೆ ಇತರೆ ಚಟುವಟಿಕೆಯಿಂದ ಕೊಠಡಿಗಳ ಕಾಯ್ದಿರಿಸುವಿಕೆ ಪ್ರಮಾಣ ಹೆಚ್ಚಿರುತ್ತಿತ್ತು. ಆದರೆ, ಈ ವರ್ಷ ಮೂರು ಪ್ರಮುಖ ಕಾರ್ಯಕ್ರಮಗಳು ಆಸುಪಾಸಿನಲ್ಲೇ ನಡೆಯುತ್ತಿರುವ ಪರಿಣಾಮ ಕೊಠಡಿಗಳ ಕಾಯ್ದಿರಿಸುವಿಕೆ ಹೆಚ್ಚಾಗಿದೆ ಎಂದು ಹೇಳಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us