Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ವರ್ಷ ಹಳೆಯದಾದ ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣದ ಕಮಾನುಗಳು ನೆಲಸಮ

ಬೆಂಗಳೂರು ಕ್ಯಾಂಟೋನ್ಮೆಂಟ್ ರೈಲು ನಿಲ್ದಾಣದ ನೂರು ವರ್ಷಗಳಷ್ಟು ಹಳೆಯ ಕಮಾನುಗಳನ್ನು ರೈಲ್ವೇ ಇಲಾಖೆ ನೆಲಸಮ ಮಾಡಿದೆ. ಶಿಥಿಲಾವಸ್ಥೆ ಮತ್ತು ಸುರಕ್ಷತಾ ಕಾರಣಗಳನ್ನು ನೀಡಲಾಗಿದೆ. ಆದರೆ, ಪಾರಂಪರಿಕ ಸ್ಥಳಗಳ ಸಂರಕ್ಷಣಾ ಪ್ರೇಮಿಗಳು ಆಧುನಿಕ ತಂತ್ರಜ್ಞಾನದ ಮೂಲಕ ಕಮಾನುಗಳನ್ನು ಉಳಿಸಬಹುದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. 480 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾರ್ಯದ ನಡುವೆ ಈ ಘಟನೆ ನಡೆದಿದೆ.

100 ವರ್ಷ ಹಳೆಯದಾದ ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣದ ಕಮಾನುಗಳು ನೆಲಸಮ
ಬೆಂಗಳೂರು ಕ್ಯಾಂಟೋನ್ಮೆಂಟ್ ರೈಲು ನಿಲ್ದಾಣ
Follow us
ವಿವೇಕ ಬಿರಾದಾರ
|

Updated on:Dec 10, 2024 | 2:05 PM

ಬೆಂಗಳೂರು, ಡಿಸೆಂಬರ್​ 10: ಬೆಂಗಳೂರು ಕಂಟೋನ್ಮೆಂಟ್ (BNC) ರೈಲು ನಿಲ್ದಾಣದ ಎರಡು ಪ್ಲಾಟ್​ಫಾರ್ಮ್​ಗಳಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ 100 ವರ್ಷ ಇತಿಹಾಸ ಹೊಂದಿರುವ ಪ್ಲಾಟ್‌ಫಾರ್ಮ್ ಒಂದು ಮತ್ತು ಪ್ಲಾಟ್‌ಫಾರ್ಮ್ ಎರಡರ ನಡುವೆ ಇರುವ ಕಮಾನುಗಳನ್ನು ರೈಲ್ವೆ ಇಲಾಖೆ (Railway Department) ನೆಲಸಮ ಮಾಡಿದೆ. ಇದು ಪಾರಂಪರಿಕ ತಾಣಗಳ ಸಂರಕ್ಷಣಾ ಪ್ರೇಮಿಗಳಿಗೆ ಬೇಸರವಾಗಿದೆ.

ಕಮಾನುಗಳು ಶಿಥಿಲಗೊಂಡಿದ್ದು, ಪ್ರಯಾಣಿಕರ ಜೀವಕ್ಕೆ ಅಪಾಯವನ್ನುಂಟು ಮಾಡುವ ಸಾಧ್ಯತೆ ಇತ್ತು ಎಂಬ ಕಾರಣವನ್ನು ನೀಡಿ ರೈಲ್ವೆ ಇಲಾಖೆ ನೆಲಸಮ ಮಾಡಿದೆ. ಆದರೆ, ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಕಮಾನುಗಳನ್ನು ಉಳಿಸಿಕೊಳ್ಳಬೇಕಿತ್ತು ಎಂದು ಪಾರಂಪರಿಕ ತಾಣಗಳ ಸಂರಕ್ಷಣಾ ಪ್ರೇಮಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನೂರು ವರ್ಷಗಳಷ್ಟು ಹಳೆಯದಾದ ರೈಲ್ವೆ ನಿಲ್ದಾಣದಲ್ಲಿ 480 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಕಾಮಗಾರಿಗೆ ಸಂಬಂಧಿಸಿದಂತೆ ನೈಋತ್ಯ ರೈಲ್ವೆ ವಲಯ ಕಳೆದ ವರ್ಷ ಬಿಡುಗಡೆಗೊಳಿಸಿದ್ದ ಅಧಿಕೃತ ಪ್ರಕಟಣೆಯಲ್ಲಿ ನಿಲ್ದಾಣದ ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಿಸಲಾಗುವುದು ಎಂದು ಹೇಳಿತ್ತು. ಆದರೆ, ಇದೀಗ ತನ್ನ ಹೇಳಿಕೆಯ ವಿರುದ್ಧವಾಗಿ ನಡೆದುಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಮ್ಮ ಮೆಟ್ರೋ ಹಳದಿ ಮಾರ್ಗ: ಬೊಮ್ಮಸಂದ್ರ ನಿಲ್ದಾಣಕ್ಕೆ ತೈವಾನ್‌ ಕಂಪನಿಯ ಹೆಸರು! ಕಾರಣ ಇಲ್ಲಿದೆ

ಒಂದು ಶತಮಾನದಷ್ಟು ಹಳೆಯದಾದ ಪ್ಲಾಟ್‌ಫಾರ್ಮ್ ಒಂದು ಮತ್ತು ಪ್ಲಾಟ್‌ಫಾರ್ಮ್ ಎರಡರ ನಡುವಿನ ಕಮಾನುಗಳನ್ನು ನೆಲಸಮ ಮಾಡಿದ್ದಕ್ಕೆ, ಪಾರಂಪರಿಕ ಸ್ಥಳಗಳ ಸಂರಕ್ಷಣಾ ಸಮುದಾಯ ಬೇಸರ ವ್ಯಕ್ತಪಡಿಸಿದ್ದು, ರೈಲ್ವೆ ಇಲಾಖೆಗೆ ಪತ್ರ ಬರೆದಿದೆ. ಒಂದು ಶತಮಾನದಷ್ಟು ಹಳೆಯದಾದ ಕಮಾನುಗಳನ್ನು ನೆಲಸಮ ಮಾಡುವ ಮೊದಲು ಏಕೆ ನಮ್ಮೊಂದಿಗೆ ಸಮಾಲೋಚನೆ ನಡೆಸಲಿಲ್ಲ ಎಂದು ಪತ್ರದ ಮೂಲಕ ಪ್ರಶ್ನಿಸಿದ್ದಾರೆ.

ರೈಲ್ವೆ ಬೆಂಗಳೂರು ವಿಭಾಗೀಯ ವ್ಯವಸ್ಥಾಪಕ ಯೋಗೇಶ್ ಮೋಹನ್ ಮಾತನಾಡಿ, “ಕಮಾನುಗಳು ಶಿಥಿಲಾವಸ್ಥೆಯಲ್ಲಿದ್ದು, ಯಾವುದೇ ಸಮಯದಲ್ಲಿ ಪ್ರಯಾಣಿಕರ ಮೇಲೆ ಬೀಳುವ ಸಾಧ್ಯತೆಯಿದ್ದವು. ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಕಮಾನುಗಳನ್ನು ತೆರವುಗೊಳಿಸುವ ಅನಿವಾರ್ಯ ಸೃಷ್ಟಿಯಾಗಿತ್ತು. ಸುರಕ್ಷತಾ ಕ್ರಮದ ದೃಷ್ಟಿಯಿಂದ ಅವುಗಳನ್ನು ನೆಲಸಮ ಮಾಡಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೆಲಸ ಮಾಡಿದ್ದೇವೆ ಎಂದರು.

ಬೆಂಗಳೂರು ಕಂಟೋನ್ಮೆಂಟ್​ ಅನ್ನು 1862ರಲ್ಲಿ ನಿರ್ಮಾಣ ಮಾಡಲಾಗಿದೆ. 162 ವರ್ಷಗಳ ಹಳೆಯದಾದ ರೈಲು ನಿಲ್ದಾಣದ ಜೋರ್ಣೋದ್ಧಾರ ಕಾರ್ಯಗಳು ನಡೆಯುತ್ತಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:04 pm, Tue, 10 December 24

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ