AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ದೇಶದ ಮೊದಲ ‘ಡಬಲ್ ಡೆಕ್ಕರ್’ ಸಾರಿಗೆ: ಒಂದೇ ಮಾರ್ಗದಲ್ಲಿ ಮೆಟ್ರೋ ಮತ್ತು ಸಬರ್ಬನ್ ರೈಲು; 169 ಕೋಟಿ ರೂ. ಉಳಿತಾಯ!

ಬೆಂಗಳೂರಿನಲ್ಲಿ ದೇಶದ ಮೊದಲ ಡಬಲ್ ಡೆಕ್ಕರ್ ಸಾರಿಗೆ ವ್ಯವಸ್ಥೆ ಜಾರಿಗೆ ಬಂದಿದೆ. ಮೆಟ್ರೋ ಮತ್ತು ಸಬರ್ಬನ್ ರೈಲುಗಳು ಬೆನ್ನಿಗಾನಹಳ್ಳಿಯಲ್ಲಿ ಒಂದೇ ಮಾರ್ಗದಲ್ಲಿ, ಒಂದರ ಮೇಲೆ ಮತ್ತೊಂದು ಸಂಚರಿಸುತ್ತವೆ. ಇದು ಭೂಸ್ವಾಧೀನ ತಪ್ಪಿಸಿ 169 ಕೋಟಿ ರೂ. ಉಳಿತಾಯ ಮಾಡಿದೆ, 600ಕ್ಕೂ ಹೆಚ್ಚು ನಿವಾಸಿಗಳಿಗೆ ವಾಸಸ್ಥಳ ಉಳಿಸಿದೆ. ಈ ವಿಶಿಷ್ಟ ಮಾದರಿಯು ಭವಿಷ್ಯದಲ್ಲಿ ಇತರ ನಗರಗಳಿಗೂ ದಾರಿ ಮಾಡಿಕೊಡಲಿದೆ.

ಬೆಂಗಳೂರಿನಲ್ಲಿ ದೇಶದ ಮೊದಲ 'ಡಬಲ್ ಡೆಕ್ಕರ್' ಸಾರಿಗೆ: ಒಂದೇ ಮಾರ್ಗದಲ್ಲಿ ಮೆಟ್ರೋ ಮತ್ತು ಸಬರ್ಬನ್ ರೈಲು; 169 ಕೋಟಿ ರೂ. ಉಳಿತಾಯ!
ಸಾಂದರ್ಭಿಕ ಚಿತ್ರ Image Credit source: google gemini
ಅಕ್ಷಯ್​ ಪಲ್ಲಮಜಲು​​
|

Updated on: Jun 03, 2026 | 12:36 PM

Share

ಬೆಂಗಳೂರು, ಜೂ.3: ಸಿಲಿಕಾನ್ ಸಿಟಿ ಬೆಂಗಳೂರಿನ ಸಂಚಾರ ದಟ್ಟಣೆಗೆ ಮುಕ್ತಿ ನೀಡಲು ಜಾರಿಯಾಗುತ್ತಿರುವ ಎರಡು ಪ್ರಮುಖ ಸಾರಿಗೆ ಯೋಜನೆಗಳಾದ ‘ನಮ್ಮ ಮೆಟ್ರೋ’ (Namma Metro) ಮತ್ತು ‘ಬೆಂಗಳೂರು ಉಪನಗರ ರೈಲು’ (Suburban Rail) ಪೂರ್ವ ಬೆಂಗಳೂರಿನ ಬೆನ್ನಿಗಾನಹಳ್ಳಿಯಲ್ಲಿ ಸಂಪರ್ಕ ಸಾಧಿಸಲಿದೆ. ನಗರದ ಸಾರಿಗೆ ಇತಿಹಾಸದಲ್ಲೇ ಮೊದಲ ಬಾರಿಗೆ, ಈ ಎರಡು ಬೃಹತ್ ಸಾರಿಗೆ ವ್ಯವಸ್ಥೆಗಳು ಒಂದೇ ಮಾರ್ಗದಲ್ಲಿ (Shared Alignment), ಒಂದರ ಕೆಳಗೆ ಮತ್ತೊಂದರಂತೆ ಸಂಚರಿಸುವ ಅತ್ಯಂತ ಸುಧಾರಿತ ತಂತ್ರಜ್ಞಾನವನ್ನು ಅಳವಡಿಸಿಕೊಂಡಿವೆ. ಇದು ಭೂಸ್ವಾಧೀನದ ವೆಚ್ಚ ಮತ್ತು ಯೋಜನಾ ವೆಚ್ಚವನ್ನು ಗಣನೀಯವಾಗಿ ಕಡಿಮೆ ಮಾಡಲಿದೆ.

ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ಕಂಪನಿ ನೀಡಿರುವ ಮಾಹಿತಿಯ ಪ್ರಕಾರ, ಬೆನ್ನಿಗಾನಹಳ್ಳಿ ಫ್ಲೈಓವರ್ ಬಳಿ ಸುಮಾರು 500 ಮೀಟರ್‌ಗಳವರೆಗೆ ಉಪನಗರ ರೈಲಿನ ‘ಕನಕ ಲೈನ್’ ಮೇಲ್ಸೇತುವೆಯು, ನಮ್ಮ ಮೆಟ್ರೋದ ‘ಬ್ಲೂ ಲೈನ್’ ಮೇಲ್ಸೇತುವೆಯ ಕೆಳಭಾಗದಲ್ಲೇ ನೇರವಾಗಿ ಹಾದುಹೋಗಲಿದೆ. ಹೀಗಾಗಿ ಒಂದೇ ಪಿಲ್ಲರ್ ಬೇಸ್‌ನ ಮೇಲ್ಭಾಗದಲ್ಲಿ ಮೆಟ್ರೋ ಹಾಗೂ ಅದರ ಕೆಳಭಾಗದಲ್ಲಿ ಸಬರ್ಬನ್ ರೈಲು ಸಂಚರಿಸಲಿವೆ. ಕನಕ ಲೈನ್ ಹೀಲಳಿಗೆಯಿಂದ ರಾಜಾನುಕುಂಟೆಯನ್ನು (46 ಕಿ.ಮೀ) ಸಂಪರ್ಕಿಸಿದರೆ, ಮೆಟ್ರೋ ಬ್ಲೂ ಲೈನ್ ಕೆ.ಆರ್. ಪುರದಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುತ್ತದೆ.

ಈ ಮಾದರಿಯಿಂದಾಗಿ ಬೆಂಗಳೂರಿನ ಅತ್ಯಂತ ದುಬಾರಿ ವಸತಿ ಪ್ರದೇಶದ ಸುಮಾರು 1.65 ಎಕರೆ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈ ಬಿಡಲಾಗಿದೆ. ಇದರಿಂದಾಗಿ ಆ ಭಾಗದಲ್ಲಿ ವಾಸವಿದ್ದ ಸುಮಾರು 600 ಕ್ಕೂ ಹೆಚ್ಚು ನಿವಾಸಿಗಳು ತಮ್ಮ ಮನೆಗಳನ್ನು ಕಳೆದುಕೊಂಡು ಸ್ಥಳಾಂತರಗೊಳ್ಳುವ ದೊಡ್ಡ ಆಪತ್ತಿನಿಂದ ಪಾರಾಗಿದ್ದಾರೆ. ಈ ಅತ್ಯಾಧುನಿಕ ಕಲ್ಪನೆಯಿಂದ ಯೋಜನೆಗೆ ಅಂದಾಜು 150 ಕೋಟಿ ರೂಪಾಯಿಯಿಂದ 169 ಕೋಟಿ ರೂಪಾಯಿಗಳಷ್ಟು ಸಾರ್ವಜನಿಕ ಹಣ ಉಳಿತಾಯವಾಗಿದೆ ಎಂದು ಕೆ-ರೈಡ್ ಹೇಳಿದೆ.

ಇದನ್ನೂ ಓದಿ: “ಕೈ-ಕಾಲು ಕತ್ತರಿಸಿದಾಗಷ್ಟೇ ಜನಕ್ಕೆ ಕಾನೂನಿನ ಭಯ ಬರತ್ತೆ”: ಲೈಂಗಿಕ ದೌರ್ಜನ್ಯ ಆರೋಪಿ ಜಾಮೀನು ಅರ್ಜಿ ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್ ಆಕ್ರೋಶ!

ಈ ಯೋಜನೆಯಲ್ಲಿ ಎರಡು ವಿಭಿನ್ನ ವಿದ್ಯುತ್ ಶಕ್ತಿ ವ್ಯವಸ್ಥೆಗಳನ್ನು ಸಂಯೋಜಿಸುವುದು ಎಂಜಿನಿಯರ್‌ಗಳಿಗೆ ದೊಡ್ಡ ಸವಾಲಾಗಿತ್ತು. ಉಪನಗರ ರೈಲು ಆಲ್ಟರ್ನೇಟಿಂಗ್ ಕರೆಂಟ್ (AC) ಬಳಸಿದರೆ, ಮೆಟ್ರೋ ಡೈರೆಕ್ಟ್ ಕರೆಂಟ್ (DC) ತಂತ್ರಜ್ಞಾನದಲ್ಲಿ ಚಲಿಸುತ್ತದೆ. ಈ ಎರಡೂ ವಿಭಿನ್ನ ತಾಂತ್ರಿಕ ಸುರಕ್ಷತೆಯನ್ನು ಭಾರತೀಯ ವಿಜ್ಞಾನ ಸಂಸ್ಥೆಯು ಕೂಲಂಕಷವಾಗಿ ಮೌಲ್ಯಮಾಪನ ಮಾಡಿ ಗ್ರೀನ್ ಸಿಗ್ನಲ್ ನೀಡಿದೆ. ಜಾಗದ ಅಭಾವವಿರುವ ಭಾರತದ ಇತರೆ ಮೆಟ್ರೋ ಸಿಟಿಗಳಿಗೆ ಬೆಂಗಳೂರಿನ ಈ ಮಾದರಿಯನ್ನೇ ತರಲಾಗುವುದು ಎಂದು ಹೇಳಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ