ಫುಟ್‌ಪಾತ್ ತೆರವು ಅಭಿಯಾನ: ಆರ್.ಟಿ. ನಗರದಲ್ಲಿ ಬೀದಿ ಬದಿ ವ್ಯಾಪಾರಿಗಳಿಂದ ಪ್ರತಿಭಟನೆ
ಮುಖ್ಯಾಂಶಗಳು
- ಬೆಂಗಳೂರಲ್ಲಿ ಏಳನೇ ದಿನಕ್ಕೆ ಕಾಲಿಟ್ಟ ಫುಟ್‌ಪಾತ್ ತೆರವು ಕಾರ್ಯಾಚರಣೆ
- ಜಿಬಿಎ ಅಧಿಕಾರಿಗಳ ನಡೆಗೆ ಬೀದಿ ಬದಿ ವ್ಯಾಪಾರಿಗಳ ಆಕ್ರೋಶ
- ಬೇರೆ ಜಾಗ ತೋರಿಸದೆ ತೆರವುಗೊಳಿಸಿದರೆ ಹೇಗೆಂದು ಪ್ರಶ್ನೆ
ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ಮುಂದುವರಿದಿದ್ದು, ಆರ್.ಟಿ. ನಗರದ ಜೆ.ಸಿ. ನಗರ ಮುಖ್ಯರಸ್ತೆಯಲ್ಲಿ ಬೀದಿ ಬದಿ ವ್ಯಾಪಾರಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಪರ್ಯಾಯ ವ್ಯವಸ್ಥೆ ಇಲ್ಲದೆ ತಮ್ಮ ಜೀವನಕ್ಕೆ ತೊಂದರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ವ್ಯಾಪಾರಿಗಳು, ಜಿಬಿಎ ನೀಡಿದ ಗುರುತಿನ ಚೀಟಿ ಮತ್ತು ಸಾಲಗಳ ಹೊರತಾಗಿಯೂ ತೆರವುಗೊಳ್ಳುತ್ತಿರುವುದಕ್ಕೆ ಆಕ್ಷೇಪಿಸಿದ್ದಾರೆ.
ಬೆಂಗಳೂರು, ಜುಲೈ 07: ನಗರದಲ್ಲಿ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ಏಳನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಆರ್.ಟಿ. ನಗರದ ಜೆ.ಸಿ. ನಗರ ಮುಖ್ಯರಸ್ತೆಯಲ್ಲಿ ತೆರವು ಕಾರ್ಯಾಚರಣೆಗೆ ಬೀದಿ ಬದಿ ವ್ಯಾಪಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪರ್ಯಾಯ ಜಾಗ ನೀಡದೆ ತೆರವುಗೊಳಿಸುತ್ತಿರುವುದಕ್ಕೆ ವ್ಯಾಪಾರಿಗಳು ಆಕ್ರೋಶ ಹೊರಹಾಕಿದ್ದಾರೆ. ಜಿಬಿಎನಿಂದ ಐಡಿ ಕಾರ್ಡ್‌ಗಳನ್ನು ಪಡೆದು, ಸಾಲ ಪಡೆದು ವ್ಯಾಪಾರ ಮಾಡುತ್ತಿದ್ದೇವೆ. ಈಗ ಬೇರೆ ಜಾಗ ತೋರಿಸದೆ ತೆರವುಗೊಳಿಸಿದರೆ ನಮ್ಮ ಜೀವನ ಹೇಗೆ? ಎಂದು ವ್ಯಾಪಾರಿಗಳು ಪ್ರಶ್ನಿಸಿದ್ದಾರೆ. ವ್ಯಾಪಾರಿಗಳ ಪ್ರತಿರೋಧದ ನಡುವೆಯೂ ತೆರವು ಕಾರ್ಯ ಮುಂದುವರಿದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jul 07, 2026 01:57 PM
Follow Us
Latest Videos

