ಫುಟ್‌ಪಾತ್ ತೆರವು ಅಭಿಯಾನ: ಆರ್.ಟಿ. ನಗರದಲ್ಲಿ ಬೀದಿ ಬದಿ ವ್ಯಾಪಾರಿಗಳಿಂದ ಪ್ರತಿಭಟನೆ

Edited By:

Updated on: Jul 07, 2026 | 1:59 PM

ಮುಖ್ಯಾಂಶಗಳು

  • ಬೆಂಗಳೂರಲ್ಲಿ ಏಳನೇ ದಿನಕ್ಕೆ ಕಾಲಿಟ್ಟ ಫುಟ್​​ಪಾತ್​​ ತೆರವು ಕಾರ್ಯಾಚರಣೆ
  • ಜಿಬಿಎ ಅಧಿಕಾರಿಗಳ ನಡೆಗೆ ಬೀದಿ ಬದಿ ವ್ಯಾಪಾರಿಗಳ ಆಕ್ರೋಶ
  • ಬೇರೆ ಜಾಗ ತೋರಿಸದೆ ತೆರವುಗೊಳಿಸಿದರೆ ಹೇಗೆಂದು ಪ್ರಶ್ನೆ

ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ಮುಂದುವರಿದಿದ್ದು, ಆರ್.ಟಿ. ನಗರದ ಜೆ.ಸಿ. ನಗರ ಮುಖ್ಯರಸ್ತೆಯಲ್ಲಿ ಬೀದಿ ಬದಿ ವ್ಯಾಪಾರಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಪರ್ಯಾಯ ವ್ಯವಸ್ಥೆ ಇಲ್ಲದೆ ತಮ್ಮ ಜೀವನಕ್ಕೆ ತೊಂದರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ವ್ಯಾಪಾರಿಗಳು, ಜಿಬಿಎ ನೀಡಿದ ಗುರುತಿನ ಚೀಟಿ ಮತ್ತು ಸಾಲಗಳ ಹೊರತಾಗಿಯೂ ತೆರವುಗೊಳ್ಳುತ್ತಿರುವುದಕ್ಕೆ ಆಕ್ಷೇಪಿಸಿದ್ದಾರೆ.

ಬೆಂಗಳೂರು, ಜುಲೈ 07: ನಗರದಲ್ಲಿ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ಏಳನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಆರ್.ಟಿ. ನಗರದ ಜೆ.ಸಿ. ನಗರ ಮುಖ್ಯರಸ್ತೆಯಲ್ಲಿ ತೆರವು ಕಾರ್ಯಾಚರಣೆಗೆ ಬೀದಿ ಬದಿ ವ್ಯಾಪಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪರ್ಯಾಯ ಜಾಗ ನೀಡದೆ ತೆರವುಗೊಳಿಸುತ್ತಿರುವುದಕ್ಕೆ ವ್ಯಾಪಾರಿಗಳು ಆಕ್ರೋಶ ಹೊರಹಾಕಿದ್ದಾರೆ. ಜಿಬಿಎನಿಂದ ಐಡಿ ಕಾರ್ಡ್‌ಗಳನ್ನು ಪಡೆದು, ಸಾಲ ಪಡೆದು ವ್ಯಾಪಾರ ಮಾಡುತ್ತಿದ್ದೇವೆ. ಈಗ ಬೇರೆ ಜಾಗ ತೋರಿಸದೆ ತೆರವುಗೊಳಿಸಿದರೆ ನಮ್ಮ ಜೀವನ ಹೇಗೆ? ಎಂದು ವ್ಯಾಪಾರಿಗಳು ಪ್ರಶ್ನಿಸಿದ್ದಾರೆ. ವ್ಯಾಪಾರಿಗಳ ಪ್ರತಿರೋಧದ ನಡುವೆಯೂ ತೆರವು ಕಾರ್ಯ ಮುಂದುವರಿದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jul 07, 2026 01:57 PM
Loading...
Unable to load recommendations.
Follow Us
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More