AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalasipalya Bus Terminal: ಬೆಂಗಳೂರಿನ ಕಲಾಸಿಪಾಳ್ಯ ಬಸ್​ ಟರ್ಮಿನಲ್ ಸಿದ್ಧ, ಕೇವಲ ಉದ್ಘಾಟನೆಯೊಂದೇ ಬಾಕಿ

ರಾಜ್ಯ ರಾಜಧಾನಿ ಬೆಂಗಳೂರು ಮಹಾನಗರದ ಅಷ್ಟ ದಿಕ್ಕುಗಳಿಗೂ ಸಂಪರ್ಕ ಕಲ್ಪಿಸುವುದಲ್ಲದೇ ಭಾರತದ ವಿವಿಧ ಪ್ರಮುಖ ನಗರಗಳಿಗೆ ತೆರಳಲು ಖಾಸಗಿ ಬಸ್​ಗಳ ಪ್ರದೇಶವಾಗಿರುವ ಕಲಾಪಿಪಾಳ್ಯ ಬಸ್​ ಟರ್ಮಿನಲ್ ಸಿದ್ಧಗೊಂಡಿದ್ದು, ಉದ್ಘಾಟನೆಯೊಂದೇ ಬಾಕಿ ಇದೆ

Kalasipalya Bus Terminal: ಬೆಂಗಳೂರಿನ ಕಲಾಸಿಪಾಳ್ಯ ಬಸ್​ ಟರ್ಮಿನಲ್ ಸಿದ್ಧ, ಕೇವಲ ಉದ್ಘಾಟನೆಯೊಂದೇ ಬಾಕಿ
ಬೆಂಗಳೂರು ಕಲಾಸಿಪಾಳ್ಯ ಬಸ್ ಟರ್ಮಿನಲ್Image Credit source: ChristinMathewPhilip (Twitter)
ನಯನಾ ರಾಜೀವ್
|

Updated on: Feb 08, 2023 | 11:13 AM

Share

ರಾಜ್ಯ ರಾಜಧಾನಿ ಬೆಂಗಳೂರು ಮಹಾನಗರದ ಅಷ್ಟ ದಿಕ್ಕುಗಳಿಗೂ ಸಂಪರ್ಕ ಕಲ್ಪಿಸುವುದಲ್ಲದೇ ಭಾರತದ ವಿವಿಧ ಪ್ರಮುಖ ನಗರಗಳಿಗೆ ತೆರಳಲು ಖಾಸಗಿ ಬಸ್​ಗಳ ಪ್ರದೇಶವಾಗಿರುವ ಕಲಾಪಿಪಾಳ್ಯ ಬಸ್​ ಟರ್ಮಿನಲ್ ಸಿದ್ಧಗೊಂಡಿದ್ದು, ಉದ್ಘಾಟನೆಯೊಂದೇ ಬಾಕಿ ಇದೆ. ಕಳೆದ ಆರು ವರ್ಷಗಳ ಹಿಂದೆ ಕಲಾಸಿಪಾಳ್ಯ ಬಸ್​ ನಿಲ್ದಾಣ ನಿರ್ಮಾಣಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶಂಕು ಸ್ಥಾಪನೆ ನೆರವೇರಿಸಿದ್ದರು.

4.13 ಎಕರೆ ವಿಸ್ತೀರ್ಣದಲ್ಲಿ 60 ಕೋಟಿ ರೂ. ವೆಚ್ಚದಲ್ಲಿ ನಿಲ್ದಾಣ ನಿರ್ಮಾಣ ಪೂರ್ಣವಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿರ್ಮಿಸಿರುವ ಬಹುಕಾಲದಿಂದ ಬಾಕಿ ಉಳಿದಿದ್ದ ಕಲಾಸಿಪಾಳ್ಯ ಬಸ್ ಟರ್ಮಿನಲ್ ನಿರ್ಮಾಣ ಯೋಜನೆಯು 2018ರ ಡಿಸೆಂಬರ್​ನಲ್ಲಿಯೇ ಪೂರ್ಣಗೊಳ್ಳಬೇಕಿತ್ತು. ತಡವಾಗಿ ಕೊನೆಗೂ 4 ವರ್ಷದ ಬಳಿಕ ಸಿದ್ಧವಾಗಿದೆ.

ಮತ್ತಷ್ಟು ಓದಿ: BMTCಯಲ್ಲಿ ನಡೆಯುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದ ಟಿವಿ9, ಚಾಲಕನ ಪತ್ರ ಪರಿಶೀಲಿಸುವಂತೆ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ

ಸಧ್ಯ ಕೆಎಸ್​ಆರ್​ಟಿಸಿ, ಬಿಎಂಟಿಸಿ, ಅಂತಾರಾಜ್ಯ ಸರ್ಕಾರಿ ಹಾಗೂ ಖಾಸಗಿ ಬಸ್​ಗಳು ಪಕ್ಕದ ರಸ್ತೆಯಲ್ಲೇ ನಿಲುಗಡೆ ಮಾಡುತ್ತಿವೆ. 60 ಕೋಟಿ ರೂ. ಪೈಕಿ ಕೇಂದ್ರ ಸರ್ಕಾರದ ನಗರ ಭೂ ಸಾರಿಗೆ ನಿರ್ದೇಶನಾಲಯವು 25 ಕೋಟಿ ರೂ.ಗಳನ್ನು ನೀಡಿದೆ. ಉಳಿದ ಹಣವನ್ನು ಬಿಎಂಟಿಸಿ ಭರಿಸಿದೆ.

ಕಲಾಸಿಪಾಳ್ಯ ನಿಲ್ದಾಣದ ಮೂಲಕ ಪ್ರತಿ ದಿನ ಲಕ್ಷಾಂತರ ಮಂದಿ ಪ್ರಯಾಣ ಮಾಡುತ್ತಾರೆ. ನಗರದ ಹೊರವಲಯದ ರೈತರು ಹೂವು, ಹಣ್ಣು, ತರಕಾರಿಗಳನ್ನು ಬಸ್​ಗಳಲ್ಲಿಯೇ ಮಾರುಕಟ್ಟೆಗೆ ತಂದು ಮಾರಾಟ ಮಾಡುತ್ತಾರೆ. ಟರ್ಮಿನಲ್ ಏಕಕಾಲದಲ್ಲಿ 18 ಬಿಎಂಟಿಸಿ, 6 ಕೆಎಸ್​ಆರ್​ಟಿಸಿ ಹಾಗೂ 6 ಖಾಸಗಿ ಬಸ್​ಗಳಿಗೆ ಅವಕಾಶ ಕಲ್ಪಿಸುತ್ತದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ