ರಾಜ್ಯ ರಾಜಧಾನಿ ಬೆಂಗಳೂರು ಮಹಾನಗರದ ಅಷ್ಟ ದಿಕ್ಕುಗಳಿಗೂ ಸಂಪರ್ಕ ಕಲ್ಪಿಸುವುದಲ್ಲದೇ ಭಾರತದ ವಿವಿಧ ಪ್ರಮುಖ ನಗರಗಳಿಗೆ ತೆರಳಲು ಖಾಸಗಿ ಬಸ್ಗಳ ಪ್ರದೇಶವಾಗಿರುವ ಕಲಾಪಿಪಾಳ್ಯ ಬಸ್ ಟರ್ಮಿನಲ್ ಸಿದ್ಧಗೊಂಡಿದ್ದು, ಉದ್ಘಾಟನೆಯೊಂದೇ ಬಾಕಿ ಇದೆ. ಕಳೆದ ಆರು ವರ್ಷಗಳ ಹಿಂದೆ ಕಲಾಸಿಪಾಳ್ಯ ಬಸ್ ನಿಲ್ದಾಣ ನಿರ್ಮಾಣಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶಂಕು ಸ್ಥಾಪನೆ ನೆರವೇರಿಸಿದ್ದರು.
4.13 ಎಕರೆ ವಿಸ್ತೀರ್ಣದಲ್ಲಿ 60 ಕೋಟಿ ರೂ. ವೆಚ್ಚದಲ್ಲಿ ನಿಲ್ದಾಣ ನಿರ್ಮಾಣ ಪೂರ್ಣವಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿರ್ಮಿಸಿರುವ ಬಹುಕಾಲದಿಂದ ಬಾಕಿ ಉಳಿದಿದ್ದ ಕಲಾಸಿಪಾಳ್ಯ ಬಸ್ ಟರ್ಮಿನಲ್ ನಿರ್ಮಾಣ ಯೋಜನೆಯು 2018ರ ಡಿಸೆಂಬರ್ನಲ್ಲಿಯೇ ಪೂರ್ಣಗೊಳ್ಳಬೇಕಿತ್ತು. ತಡವಾಗಿ ಕೊನೆಗೂ 4 ವರ್ಷದ ಬಳಿಕ ಸಿದ್ಧವಾಗಿದೆ.
ಮತ್ತಷ್ಟು ಓದಿ: BMTCಯಲ್ಲಿ ನಡೆಯುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದ ಟಿವಿ9, ಚಾಲಕನ ಪತ್ರ ಪರಿಶೀಲಿಸುವಂತೆ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ
ಸಧ್ಯ ಕೆಎಸ್ಆರ್ಟಿಸಿ, ಬಿಎಂಟಿಸಿ, ಅಂತಾರಾಜ್ಯ ಸರ್ಕಾರಿ ಹಾಗೂ ಖಾಸಗಿ ಬಸ್ಗಳು ಪಕ್ಕದ ರಸ್ತೆಯಲ್ಲೇ ನಿಲುಗಡೆ ಮಾಡುತ್ತಿವೆ.
60 ಕೋಟಿ ರೂ. ಪೈಕಿ ಕೇಂದ್ರ ಸರ್ಕಾರದ ನಗರ ಭೂ ಸಾರಿಗೆ ನಿರ್ದೇಶನಾಲಯವು 25 ಕೋಟಿ ರೂ.ಗಳನ್ನು ನೀಡಿದೆ. ಉಳಿದ ಹಣವನ್ನು ಬಿಎಂಟಿಸಿ ಭರಿಸಿದೆ.
ಕಲಾಸಿಪಾಳ್ಯ ನಿಲ್ದಾಣದ ಮೂಲಕ ಪ್ರತಿ ದಿನ ಲಕ್ಷಾಂತರ ಮಂದಿ ಪ್ರಯಾಣ ಮಾಡುತ್ತಾರೆ. ನಗರದ ಹೊರವಲಯದ ರೈತರು ಹೂವು, ಹಣ್ಣು, ತರಕಾರಿಗಳನ್ನು ಬಸ್ಗಳಲ್ಲಿಯೇ ಮಾರುಕಟ್ಟೆಗೆ ತಂದು ಮಾರಾಟ ಮಾಡುತ್ತಾರೆ. ಟರ್ಮಿನಲ್ ಏಕಕಾಲದಲ್ಲಿ 18 ಬಿಎಂಟಿಸಿ, 6 ಕೆಎಸ್ಆರ್ಟಿಸಿ ಹಾಗೂ 6 ಖಾಸಗಿ ಬಸ್ಗಳಿಗೆ ಅವಕಾಶ ಕಲ್ಪಿಸುತ್ತದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ