AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಳಿ ಶುದ್ಧತೆಯಲ್ಲಿ ದೇಶಕ್ಕೆ ಬೆಂಗಳೂರಿನ ಕೋರಮಂಗಲ ಮಾದರಿ: ರಾಮಲಿಂಗಾರೆಡ್ಡಿ ಕ್ಷೇತ್ರಕ್ಕೆ ಕೇಂದ್ರದ ಗರಿ

ಬೆಂಗಳೂರಿನ ಕೋರಮಂಗಲ ವಾರ್ಡ್ 151, ಸ್ವಚ್ಛ ವಾಯು ಸಮೀಕ್ಷೆ 2026ರಲ್ಲಿ ರಾಷ್ಟ್ರೀಯ ಪ್ರಶಸ್ತಿ ಗೆದ್ದಿದೆ. 30 ಸಾವಿರಕ್ಕೂ ಅಧಿಕ ಜನಸಂಖ್ಯೆ ವಿಭಾಗದಲ್ಲಿ ವಾರ್ಡ್‌ಗೆ ಈ ಗೌರವ ಸಂದಿದೆ. ಉತ್ತಮ ವಾಯು ಗುಣಮಟ್ಟ, ನಗರ ಪರಿಸರ ನಿರ್ವಹಣೆ, ಸ್ವಚ್ಛ ಗಾಳಿ ಅಭಿಯಾನ ಹಾಗೂ ಘನತ್ಯಾಜ್ಯ ನಿರ್ವಹಣೆಯಲ್ಲಿನ ಸಾಧನೆಗಾಗಿ ಮಾನ್ಯತೆ ದೊರಕಿದೆ.

ಗಾಳಿ ಶುದ್ಧತೆಯಲ್ಲಿ ದೇಶಕ್ಕೆ ಬೆಂಗಳೂರಿನ ಕೋರಮಂಗಲ ಮಾದರಿ: ರಾಮಲಿಂಗಾರೆಡ್ಡಿ ಕ್ಷೇತ್ರಕ್ಕೆ ಕೇಂದ್ರದ ಗರಿ
ರಾಮಲಿಂಗಾರೆಡ್ಡಿ
ಹರೀಶ್ ಜಿ.ಆರ್​.
| Edited By: |

Updated on: Nov 16, 2026 | 3:03 PM

Share

ಮುಖ್ಯಾಂಶಗಳು

  • ಬೆಂಗಳೂರಿನ ಕೋರಮಂಗಲ ವಾರ್ಡ್ 151ಕ್ಕೆ ರಾಷ್ಟ್ರೀಯ ಪ್ರಶಸ್ತಿ
  • ವಾಯು ಗುಣಮಟ್ಟ, ನಗರ ಪರಿಸರ ನಿರ್ವಹಣೆಗೆ ಸಂದ ಗೌರವ
  • ಸ್ವಚ್ಛ ಗಾಳಿ ಅಭಿಯಾನ, ಘನತ್ಯಾಜ್ಯ ನಿರ್ವಹಣೆಯಲ್ಲಿ ಪ್ರಶಸ್ತಿ

ಬೆಂಗಳೂರು, ನವೆಂಬರ್​ 16: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಕ್ಷೇತ್ರವು ಭಾರತ ಸರ್ಕಾರದ ಸ್ವಚ್ಛ ವಾಯು ಸಮೀಕ್ಷೆಯಲ್ಲಿ 151ನೇ ಸ್ಥಾನ ಪಡೆದುಕೊಂಡಿದೆ. ಭಾರತ ಸರ್ಕಾರದ ಸ್ವಚ್ಛ ವಾಯು ಸರ್ವೇಕ್ಷಣ 2026ರಲ್ಲಿ ಅಡಿಯಲ್ಲಿ ಬೆಂಗಳೂರಿನ ಕೋರಮಂಗಲ ವಾರ್ಡ್-151 ರಾಷ್ಟ್ರೀಯ ಪ್ರಶಸ್ತಿಗೆ ಭಾಜನವಾಗಿದೆ. ಬಿಟಿಎಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಕೋರಮಂಗಲ ವಾರ್ಡ್, 30 ಸಾವಿರಕ್ಕೂ ಅಧಿಕ ಜನಸಂಖ್ಯೆಯ ವಿಭಾಗದಲ್ಲಿ ಪ್ರಶಸ್ತಿ ಪಡೆದಿದೆ.

ಸ್ವಚ್ಛ ಗಾಳಿ ಅಭಿಯಾನ; ಪರಿಸರ ನಿರ್ವಹಣೆಗೆ ಮನ್ನಣೆ

ಸ್ವಚ್ಛ ವಾಯು ಸಮೀಕ್ಷೆಯಲ್ಲಿ ಕೋರಮಂಗಲ ವಾರ್ಡ್ 151ನೇ ಸ್ಥಾನ ಪಡೆದಿದೆ. ಬಿಟಿಎಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಈ ವಾರ್ಡ್‌ನಲ್ಲಿ ಸ್ವಚ್ಛ ಗಾಳಿ ಅಭಿಯಾನ, ಸುಸ್ಥಿರ ನಗರ ಚಟುವಟಿಕೆಗಳು, ಘನತ್ಯಾಜ್ಯ ನಿರ್ವಹಣೆ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆಗೆ ಒತ್ತು ನೀಡಲಾಗಿದೆ. ಈ ಪ್ರಯತ್ನಗಳಿಗೆ ರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ದೊರೆತಿದೆ.

ಸಚಿವ ರಾಮಲಿಂಗಾರೆಡ್ಡಿ ಸಂತಸ 

ಇನ್ನು ಈ ಕುರಿತಾಗಿ ಸಚಿವ ರಾಮಲಿಂಗಾರೆಡ್ಡಿ ಸಂತಸ ವ್ಯಕ್ತಪಡಿಸಿದ್ದಾರೆ. ‘ಪ್ರಶಸ್ತಿ ಪಡೆಯಲು ಸಹಕರಿಸಿದ ಎಲ್ಲಾ ಅಧಿಕಾರಿಗಳು, ಪೌರಕಾರ್ಮಿಕರು ಮತ್ತು ನಾಗರಿಕರನ್ನು ಅಭಿನಂದಿಸಿರುವ ಅವರು, ಎಲ್ಲರ ಸಾಮೂಹಿಕ ಪ್ರಯತ್ನದಿಂದ ಕರ್ನಾಟಕಕ್ಕೆ ಈ ಗೌರವ ಲಭಿಸಿದೆ’ ಎಂದು ತಿಳಿಸಿದ್ದಾರೆ.

LIVE TV

ಕರ್ನಾಟಕದ ಮೂರು ವಾರ್ಡ್‌ಗಳಿಗೆ ಪ್ರಶಸ್ತಿ

ಸ್ವಚ್ಛ ವಾಯು ಸರ್ವೇಕ್ಷಣ್ 2026ರಲ್ಲಿ ಕರ್ನಾಟಕದ ಮೂರು ವಾರ್ಡ್‌ಗಳು ವಿವಿಧ ಜನಸಂಖ್ಯೆ ವಿಭಾಗಗಳಲ್ಲಿ ಪ್ರಶಸ್ತಿ ಪಡೆದಿವೆ.

  • ವಿಭಾಗ-1 (30,000ಕ್ಕೂ ಹೆಚ್ಚು ಜನಸಂಖ್ಯೆ): ಬೆಂಗಳೂರು ನಗರದ ಕೋರಮಂಗಲ ವಾರ್ಡ್-151.
  • ವಿಭಾಗ-2 (10,000ರಿಂದ 30,000 ಜನಸಂಖ್ಯೆ): ದಾವಣಗೆರೆ ನಗರದ ವಾರ್ಡ್-36.
  • ವಿಭಾಗ-3 (10,000ಕ್ಕಿಂತ ಕಡಿಮೆ ಜನಸಂಖ್ಯೆ): ದಾವಣಗೆರೆ ನಗರದ ವಾರ್ಡ್-07.

ಇದನ್ನೂ ಓದಿ: ನಮ್ಮ ಮೆಟ್ರೋ ಪಿಂಕ್ ಲೈನ್‌ ಬೆಂಗಳೂರಿನ ಅಭಿವೃದ್ಧಿಗೆ ಮತ್ತೊಂದು ಮೈಲಿಗಲ್ಲಾಗಲಿ: ಸಚಿವ ರಾಮಲಿಂಗಾರೆಡ್ಡಿ ಪೋಸ್ಟ್

ನಗರ ಪ್ರದೇಶಗಳಲ್ಲಿ ವಾಯು ಗುಣಮಟ್ಟ ಸುಧಾರಣೆ ಹಾಗೂ ಆರೋಗ್ಯಕರ ಜೀವನ ಪರಿಸರ ನಿರ್ಮಾಣಕ್ಕೆ ಬೆಂಗಳೂರು ಮತ್ತು ದಾವಣಗೆರೆ ನಗರಗಳ ಈ ಸಾಧನೆ ಪ್ರೇರಣೆಯಾಗಿದ್ದು, ಇತರ ನಗರ ಸ್ಥಳೀಯ ಸಂಸ್ಥೆಗಳೂ ಸ್ವಚ್ಛ ಗಾಳಿ ಮತ್ತು ಉತ್ತಮ ಜೀವನಮಟ್ಟಕ್ಕಾಗಿ ನವೀನ ಹಾಗೂ ಸುಸ್ಥಿರ ಕ್ರಮಗಳನ್ನು ಅಳವಡಿಸಿಕೊಳ್ಳಲು ಉತ್ತೇಜನ ನೀಡಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
ಇ-ಕೆವೈಸಿ ಹೆಸರಲ್ಲಿ ವಸೂಲಿಗಿಳಿದ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕಠಿಣ ಕ್ರಮ
ಇ-ಕೆವೈಸಿ ಹೆಸರಲ್ಲಿ ವಸೂಲಿಗಿಳಿದ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕಠಿಣ ಕ್ರಮ
ಜೆಡಿಎಸ್‌-ಬಿಜೆಪಿ ಮೈತ್ರಿ ಭಿನ್ನಾಭಿಪ್ರಾಯವಿಲ್ಲ: ಕುಮಾರಸ್ವಾಮಿ ಸ್ಪಷ್ಟನೆ
ಜೆಡಿಎಸ್‌-ಬಿಜೆಪಿ ಮೈತ್ರಿ ಭಿನ್ನಾಭಿಪ್ರಾಯವಿಲ್ಲ: ಕುಮಾರಸ್ವಾಮಿ ಸ್ಪಷ್ಟನೆ
'ನಿಖಿಲ್​​ಗೆ ದೇಗುಲ ಪ್ರವೇಶ ನಿರಾಕರಣೆ ದೊಡ್ಡ ಸುದ್ದಿನಾ?': ಪ್ರಿಯಾಂಕ್​​
'ನಿಖಿಲ್​​ಗೆ ದೇಗುಲ ಪ್ರವೇಶ ನಿರಾಕರಣೆ ದೊಡ್ಡ ಸುದ್ದಿನಾ?': ಪ್ರಿಯಾಂಕ್​​
'ಸಿಎಂ ಸೇರಿ ತನ್ನ ಫೋನ್​​ ಕೂಡ ಕದ್ದಾಲಿಕೆ ಆಗುತ್ತವೆ': ಪ್ರಿಯಾಂಕ್​​ ಖರ್ಗೆ
'ಸಿಎಂ ಸೇರಿ ತನ್ನ ಫೋನ್​​ ಕೂಡ ಕದ್ದಾಲಿಕೆ ಆಗುತ್ತವೆ': ಪ್ರಿಯಾಂಕ್​​ ಖರ್ಗೆ
ಮುಂದಿನ ಸಿನಿಮಾ ಬಗ್ಗೆ ಅಪ್​​ಡೇಟ್ ಕೊಟ್ಟ ರಮಿಕಾ ಶಿವು
ಮುಂದಿನ ಸಿನಿಮಾ ಬಗ್ಗೆ ಅಪ್​​ಡೇಟ್ ಕೊಟ್ಟ ರಮಿಕಾ ಶಿವು
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟ
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟ
ಭದ್ರಾ ಡ್ಯಾಂನಿಂದ 10 ದಿನ 1500 ಕ್ಯೂಸೆಕ್ ನೀರು ಬಿಡುಗಡೆ
ಭದ್ರಾ ಡ್ಯಾಂನಿಂದ 10 ದಿನ 1500 ಕ್ಯೂಸೆಕ್ ನೀರು ಬಿಡುಗಡೆ
ಮಹಾರಾಣಿ ಪಟ್ಟಕ್ಕೆ ಬಿಗ್ ಬಾಸ್ ಮನೆಯಲ್ಲಿ ಭರ್ಜರಿ ಸ್ಪರ್ಧೆ
ಮಹಾರಾಣಿ ಪಟ್ಟಕ್ಕೆ ಬಿಗ್ ಬಾಸ್ ಮನೆಯಲ್ಲಿ ಭರ್ಜರಿ ಸ್ಪರ್ಧೆ
ಕುಮಾರಕೃಪಾ ಗೆಸ್ಟ್ ಹೌಸ್ ಹೆಸರು ಚೇಂಜ್: ಇನ್ನು ಇದುವೇ ಸಿಎಂ ಅಧಿಕೃತ ನಿವಾಸ
ಕುಮಾರಕೃಪಾ ಗೆಸ್ಟ್ ಹೌಸ್ ಹೆಸರು ಚೇಂಜ್: ಇನ್ನು ಇದುವೇ ಸಿಎಂ ಅಧಿಕೃತ ನಿವಾಸ
ಕಾರ್ತಿಕ ಸೋಮವಾರದ ವಿಶೇಷ ಫಲ
ಕಾರ್ತಿಕ ಸೋಮವಾರದ ವಿಶೇಷ ಫಲ