AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಪಿ ನಗರ – ಹೆಬ್ಬಾಳ ಮಧ್ಯೆ ಬೆಂಗಳೂರಿನ ಅತಿ ಉದ್ದದ ಡಬಲ್ ಡೆಕ್ಕರ್ ಫ್ಲೈಓವರ್: ಇಲ್ಲಿದೆ ವಿವರ

ಬೆಂಗಳೂರು ನಗರದ ಅತಿ ಉದ್ದದ ಡಬಲ್ ಡೆಕ್ಕರ್ ಮೇಲ್ಸೇತುವೆ ನಿರ್ಮಾಣವಾಗಲಿರುವ ಪ್ರದೇಶದ ಕೆಲವು ಸ್ಥಳಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಇತ್ತೀಚೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೆಪಿ ನಗರದಿಂದ ಹೆಬ್ಬಾಳ ವರೆಗೆ ಹೊರ ವರ್ತುಲ ರಸ್ತೆಯ ವ್ಯಾಪ್ತಿಯಲ್ಲಿ ಈ ಫ್ಲೈ ಓವರ್ ನಿರ್ಮಾಣವಾಗಲಿದ್ದು, ಆ ಕುರಿತ ವಿವರಗಳು ಇಲ್ಲಿವೆ.

ಜೆಪಿ ನಗರ - ಹೆಬ್ಬಾಳ ಮಧ್ಯೆ ಬೆಂಗಳೂರಿನ ಅತಿ ಉದ್ದದ ಡಬಲ್ ಡೆಕ್ಕರ್ ಫ್ಲೈಓವರ್: ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Feb 08, 2025 | 8:41 AM

Share

ಬೆಂಗಳೂರು, ಫೆಬ್ರವರಿ 8: ಬೆಂಗಳೂರಿನಲ್ಲಿ ಜೆಪಿ ನಗರದಿಂದ ಹೆಬ್ಬಾಳ ವರೆಗೆ ಮತ್ತೊಂದು ಡಬಲ್ ಡೆಕ್ಕರ್ ಫ್ಲೈ ಓವರ್ ನಿರ್ಮಾಣವಾಗಲಿದ್ದು, ಇದು ಬೆಂಗಳೂರಿನ ಅತಿ ಉದ್ದದ ಡಬಲ್ ಡೆಕ್ಕರ್ ಮೇಲ್ಸೇತುವೆಯಾಗಿರಲಿದೆ. ಈ ಮೇಲ್ಸೇತುವೆ ಔಟರ್ ರಿಂಗ್ ರೋಡ್​ನಲ್ಲಿ ಹಾದುಹೋಗಲಿದ್ದು, 32.15 ಕಿ.ಮೀ ಉದ್ದವಿರಲಿದೆ. ರಾಗಿ ಗುಡ್ಡದಿಂದ ಸಿಲ್ಕ್ ಬೋರ್ಡ್ ವರೆಗೆ ಇರುವ ಡಬಲ್ ಡೆಕ್ಕರ್ ಫ್ಲೈ ಓವರ್ ಮಾದರಿಯಲ್ಲಿಯೇ ಇದು ಕೂಡ ಇರಲಿದ್ದು, ಮೆಟ್ರೋ ಲೈನ್ ಕೂಡ ಇರಲಿದೆ.

ಈ ಡಬಲ್ ಡೆಕ್ಕರ್ ಫ್ಲೈ ಓವರ್ ಯೋಜನೆಯ ಅಂದಾಜು ವೆಚ್ಚ 9800 ಕೋಟಿ ರೂಪಾಯಿ ಆಗಿದೆ. ಪ್ರಸ್ತಾವಿತ ಯೋಜನೆಗೆ ಸಂಬಂಧಿಸಿ ಪ್ರಗತಿಪರಿಶೀಲನೆಗೆ ಡಿಸಿಎಂ ಡಿಕೆ ಶಿವಕುಮಾರ್ ಇತ್ತೀಚೆಗೆ ಹೆಬ್ಬಾಳ, ಬಿಇಎಲ್ ರಸ್ತೆ, ಸುಮನಹಳ್ಳಿ ಮತ್ತು ಗೊರಗುಂಟೆಪಾಳ್ಯ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಬೆಂಗಳೂರಿನ ಸಂಚಾರದಟ್ಟಣೆ ಕಡಿಮೆ ಮಾಡುವುದು ಮತ್ತು ಸುಗಮ ಸಂಚಾರಕ್ಕಾಗಿ ಇಂತಹ ಡಬಲ್ ಡೆಕ್ಕರ್ ಫ್ಲೈ ಓವರ್ ಗಳನ್ನು ನಿರ್ಮಿಸಬೇಕಾದ ಅಗತ್ಯಗಳ ಬಗ್ಗೆ ಅವರು ಒತ್ತಿ ಹೇಳಿದ್ದಾರೆ.

40 ಕಿಲೋಮೀಟರ್‌ಗಳಿಗಿಂತ ಹೆಚ್ಚು ವಿಸ್ತಾರವಾಗಿರುವ ನಮ್ಮ ಮೆಟ್ರೋ ಹಂತ 3 ರ ಭಾಗವಾಗಿರುವ ಈ ಹೊಸ ಕಾರಿಡಾರ್ ಡಬಲ್ ಡೆಕ್ಕರ್ ಫ್ಲೈಓವರ್ ಒಳಗೊಂಡಿರುತ್ತದೆ. ಯೋಜನೆಯ ಕಾರ್ಯಸಾಧ್ಯತಾ ಅಧ್ಯಯನವು ಈಗಾಗಲೇ ಶೇಕಡಾ 90 ರಷ್ಟು ಪೂರ್ಣಗೊಂಡಿದೆ. ಆದರೂ ಎತ್ತರದ ರಸ್ತೆಗಳು ಮತ್ತು ಮೆಟ್ರೋ ಮಾರ್ಗವನ್ನು ಜತೆಯಾಗಿ ನಿರ್ಮಾಣ ಮಾಡಬೇಕಾದ ಅಗತ್ಯವಿರುವುದರಿಂದ ಕೆಲವು ಹೊಂದಾಣಿಕೆಗಳನ್ನು ಮಾಡಬೇಕಿದೆ. ಈ ಕಾರಣಕ್ಕೆ ತುಸು ವಿಳಂಬವಾಗುತ್ತಿದೆ ಎನ್ನಲಾಗಿದೆ. ಕೇಂದ್ರ ಸರ್ಕಾರವು ಕಳೆದ ವರ್ಷದ ಆಗಸ್ಟ್‌ನಲ್ಲಿ ಯೋಜನೆಗೆ ಅನುಮೋದನೆ ನೀಡಿತ್ತು.

ಇದನ್ನೂ ಓದಿ: ನಮ್ಮ ಮೆಟ್ರೋ ಆರೆಂಜ್ ಲೈನ್: ಉದ್ದೇಶಿತ ಪೀಣ್ಯ ನಿಲ್ದಾಣ ಗೊರಗುಂಟೆಪಾಳ್ಯಕ್ಕೆ ಸ್ಥಳಾಂತರಕ್ಕೆ ಬಿಎಂಆರ್​ಸಿಎಲ್ ಚಿಂತನೆ

ನಗರದ ದೀರ್ಘಕಾಲೀನ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಯೋಜನೆಯನ್ನು ರೂಪಿಸಲಾಗಿದೆ. ವೆಚ್ಚವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ನಮ್ಮ ಮೆಟ್ರೋ ನಡುವೆ ಸಮಾನವಾಗಿ ಹಂಚಿಕೊಳ್ಳಲಾಗಿದೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್