ಬೆಂಗಳೂರು: ಫುಟ್​ಪಾತ್​ ಮೇಲೆ ವಾಹನ ಚಲಾಯಿಸಿದ್ರೆ ಲೈಸೆನ್ಸ್​ ರದ್ದು!

ಬೆಂಗಳೂರು ಸಂಚಾರ ಪೊಲೀಸರು ಪಾದಚಾರಿ ಮಾರ್ಗಗಳಲ್ಲಿ ವಾಹನ ಚಾಲನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದಾರೆ. ಮೊದಲ ಅಪರಾಧಕ್ಕೆ ದಂಡ ವಿಧಿಸಲಾಗುವುದು, ಪುನರಾವರ್ತಿತ ಅಪರಾಧಕ್ಕೆ ಚಾಲನಾ ಪರವಾನಗಿಯನ್ನು ರದ್ದುಗೊಳಿಸಲಾಗುವುದು. ಪಾದಚಾರಿಗಳ ಸುರಕ್ಷತೆಯನ್ನು ಖಾತ್ರಿಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಪಾದಚಾರಿ ಮಾರ್ಗಗಳಲ್ಲಿ ವಾಹನ ಚಾಲನೆ ಮಾಡುವುದು ಅಪಾಯಕಾರಿ ಮತ್ತು ಕಾನೂನುಬಾಹಿರ ಎಂಬುದನ್ನು ಜನರು ಅರಿತುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಬೆಂಗಳೂರು: ಫುಟ್​ಪಾತ್​ ಮೇಲೆ ವಾಹನ ಚಲಾಯಿಸಿದ್ರೆ ಲೈಸೆನ್ಸ್​ ರದ್ದು!
ಸಾಂದರ್ಭಿಕ ಚಿತ್ರ
Edited By: ವಿವೇಕ ಬಿರಾದಾರ

Updated on: Feb 03, 2025 | 10:38 AM

ಬೆಂಗಳೂರು, ಫೆಬ್ರವರಿ 03: ಬೆಂಗಳೂರು ಸಂಚಾರಿ ಪೊಲೀಸರು (Bengaluru Traffic Police) ಟ್ರಾಫಿಕ್​ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುತ್ತಲೇ ಇದ್ದಾರೆ. ಹಾಗೇ, ಸಂಚಾರಿ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ಆದರೂ ಕೂಡ ಕೆಲವರು ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ಬೇಕಾಬಿಟ್ಟಿಯಾಗಿ ತಿರುಗಾಡುತ್ತಿದ್ದಾರೆ. ಇಂತವರ ವಿರುದ್ಧ ಸಂಚಾರಿ ಪೊಲೀಸರು ಕ್ರಮಕೈಗೊಳ್ಳುತ್ತಿದ್ದಾರೆ. ಟ್ರಾಫಿಕ್ ಜಾಮ್​ ಅಂತ ಫುಟ್​​ಪಾತ್​ ಮೇಲೆ ಗಾಡಿ ಓಡಿಸುವವರ ವಿರುದ್ಧ ನೂತನ ಅಸ್ತ್ರ ಪ್ರಯೋಗಿಸಲು ಬೆಂಗಳೂರು ಸಂಚಾರಿ ಪೊಲೀಸರು ನಿರ್ಧರಿಸಿದ್ದಾರೆ.

ದಂಡಾಸ್ತ್ರಕ್ಕೂ ಜಗ್ಗದ ವಾಹನ ಸವಾರರ ಡ್ರೈವಿಂಗ್​ ಲೈಸೆನ್ಸ್​ (Driving licence) ಅಮಾನತು ಮಾಡಲು ತೀರ್ಮಾನಿಸಿದ್ದಾರೆ. ಪಾದಚಾರಿಗಳ ಸುರಕ್ಷತೆ ದೃಷ್ಠಿಯಿಂದ ಸಂಚಾರಿ ಪೊಲೀಸರು ಈ ನಿಯಮ ಜಾರಿಗೆ ತಂದಿದ್ದಾರೆ. ಈ ಹಿಂದೆ ಫುಟಪಾತ್​​ ಮೇಲೆ ಗಾಡಿ ಓಡಿಸಿದರೆ ಸಂಚಾರಿ ಪೊಲೀಸರು ದಂಡ ಹಾಕುತ್ತಿದ್ದರು. ದಂಡ ವಿಧಿಸಿದರೂ ವಾಹನ ಸವಾರರು ಮಾತ್ರ, ಜಗ್ಗದೆ ಮತ್ತೆ ತಮ್ಮ ಫುಟ್​ಪಾತ್​ ಮೇಲೆ ವಾಹನ ಚಲಾಯಿಸುತ್ತಿದ್ದಾರೆ.

ಇದನ್ನೂ ಓದಿ: BTP AsTraM App: ಬೆಂಗಳೂರು ಟ್ರಾಫಿಕ್​ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಅಸ್ತ್ರಂ ಆ್ಯಪ್ ಬಿಡುಗಡೆ, ಇಲ್ಲಿದೆ ವಿವರ

ಹೀಗಾಗಿ, ಬೆಂಗಳೂರು ಸಂಚಾರಿ ಪೊಲೀಸ್​ ಹಿರಿಯ ಅಧಿಕಾರಿಗಳು ಸಭೆ ನಡೆಸಿ, ಡ್ರೈವಿಂಗ್​ ಲೈಸೆನ್ಸ್​​ ಅಮಾನತು ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಮೊದಲ ಬಾರಿಗೆ ದಂಡ ಹಾಕಲಾಗುತ್ತದೆ. ಮತ್ತೆ ಮತ್ತೆ ಸಿಕ್ಕಿಬಿದ್ದರೇ, ಆತನ ಲೈಸೆನ್ಸ್​ ಅಮಾನತು ಮಾಡುವಂತೆ ಸಂಚಾರಿ ಪೊಲೀಸರು ಶಿಪಾರಸ್ಸು ಮಾಡುತ್ತಾರೆ. ಹೀಗಾಗಿ, ಇನ್ಮುಂದೆ ಫುಟ್​ಪಾತ್​​ ಮೇಲೆ ಗಾಡಿ ಓಡಿಸುವ ಮುನ್ನ ಯೋಚಿಸಿ ಎಂದು ಸಂಚಾರಿ ಪೊಲೀಸರಿ ಎಚ್ಚರಿಕೆ ನೀಡಿದ್ದಾರೆ.

ಟ್ವಿಟರ್​ ಪೋಸ್ಟ್​

80 ಲಕ್ಷ ರೂ. ದಂಡ ಸಂಗ್ರಹ

ಡ್ರಂಕ್ & ಡ್ರೈವ್ ವಿರುದ್ಧ ಸಂಚಾರಿ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು, ಜನವರಿ 27ರಿಂದ ಫೆ.2ರವರೆಗೆ ತಪಾಸಣೆಯಲ್ಲಿ 80 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ. ಬೆಂಗಳೂರಿನ 50 ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ತಪಾಸಣೆ ನಡೆದಿದೆ. ಕಳೆದ 1 ವಾರದಲ್ಲಿ 800 ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಸಂಚಾರಿ ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್​​ ಮಾಹಿತಿ ನೀಡಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:35 am, Mon, 3 February 25

ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
Loading...
Unable to load recommendations.
Follow Us