AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್​ 4 ದಿನ ಬಂದ್​​: ಬದಲಿ ಮಾರ್ಗದ ಮಾಹಿತಿ ಇಲ್ಲಿದೆ

ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇ 5 ರಿಂದ 8 ರವರೆಗೆ 4 ದಿನ ಬಂದ್ ಆಗಲಿದೆ. ಕೇಬಲ್ ದುರಸ್ತಿ ಮತ್ತು ಅಂತಿಮ ಲೋಡ್ ಟೆಸ್ಟಿಂಗ್ ಕಾರಣ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಬೆಂಗಳೂರು ಟ್ರಾಫಿಕ್ ಪೊಲೀಸರು ಮಾಹಿತಿ ನೀಡಿದ್ದು, ಫ್ಲೈಓವರ್ ಬಂದ್​​ ಹಿನ್ನೆಲೆ ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ. ಸುಗಮ ಸಂಚಾರಕ್ಕಾಗಿ ಸಾರ್ವಜನಿಕರು ಸೂಚನೆ ಪಾಲಿಸುವಂತೆ ಮನವಿಯನ್ನೂ ಮಾಡಿದ್ದಾರೆ.

ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್​ 4 ದಿನ ಬಂದ್​​: ಬದಲಿ ಮಾರ್ಗದ ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರImage Credit source: AI Image
ರಾಚಪ್ಪಾಜಿ ನಾಯ್ಕ್
| Edited By: |

Updated on:May 02, 2026 | 8:10 AM

Share

ಬೆಂಗಳೂರು, ಮೇ 02: ಫ್ಲೈಓವರ್ ಕೇಬಲ್ ಅಳವಡಿಕೆ ದುರಸ್ತಿ ಕಾಮಗಾರಿ ಹಾಗೂ ಅಂತಿಮ ಲೋಡ್ ಟೆಸ್ಟಿಂಗ್ ಹಿನ್ನೆಲೆ ಬೆಂಗಳೂರಿನ (Bengaluru) ಪೀಣ್ಯ ಎಲಿವೇಟೆಡ್ ಫ್ಲೈಓವರ್​ 4 ದಿನ ಬಂದ್​​ ಆಗಲಿದೆ. ಮೇ 5ರ ಬೆಳಗ್ಗೆ 5ರಿಂದ ಮೇ 8ರ ಬೆಳಗ್ಗೆ 11ರವರೆಗೆ ಪ್ಲೈಓವರ್​​ ಕ್ಲೋಸ್​​ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಹೀಗಾಗಿ ಫ್ಲೈಓವರ್​ನ 2 ಬದಿಯಲ್ಲಿ ವಾಹನ ಸಂಚಾರಗಳಿಗೆ ನಿರ್ಬಂಧ ವಿಧಿಸಲಾಗಿದ್ದು ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಕೆ ಮಾಡುವಂತೆ ಬೆಂಗಳೂರು ಟ್ರಾಫಿಕ್​​ ಪೊಲೀಸರು ತಿಳಿಸಿದ್ದಾರೆ. ಸುರಕ್ಷತೆ ಮತ್ತು ಸುಗಮ ಸಂಚಾರದ ಹಿತದೃಷ್ಟಿಯಿಂದ ಸೂಚನೆಯನ್ನು ವಾಹನ ಸವಾರರು ಕಟ್ಟುನಿಟ್ಟಾಗಿ ಪಾಲಿಸುವಂತೆ ವಿನಂತಿಯನ್ನೂ ಮಾಡಿದ್ದಾರೆ.

ಪರ್ಯಾಯ ಮಾರ್ಗಗಳು

ನೆಲಮಂಗಲದಿಂದ ಬೆಂಗಳೂರು ಕಡೆಗೆ

ಕೆನ್ನಮೆಟಲ್ ಫ್ಯಾಕ್ಟರಿಹತ್ತಿರ ಫೈಓವರ್‌ನ ಫೈಓವರ್‌ ಕೆಳಭಾಗದ ಎನ್.ಹೆಚ್-4 ಮತ್ತು ಸರ್ವಿಸ್ ರಸ್ತೆ ಮೂಲಕ 8ನೇ ಮೈಲಿ ದಾಸರಹಳ್ಳಿ ಪೀಣ್ಯ ಪೊಲೀಸ್‌ ಠಾಣೆ ಜಂಕ್ಷನ್-ಎಸ್.ಆರ್.ಎಸ್ ಜಂಕ್ಷನ್ – ಗೊರಗುಂಟೆಪಾಳ್ಯ- ಜಾಲಹಳ್ಳಿ ಕ್ರಾಸ್ ಮಾರ್ಗ

ಸಿ.ಎಂ.ಟಿ.ಐ- ನೆಲಮಂಗಲ ಕಡೆಗೆ

ಫೈಓವರ್‌ ಕೆಳಭಾಗದ ಎನ್.ಹೆಚ್.-4 ಮತ್ತು ಸರ್ವಿಸ್ ರಸ್ತೆ ಮೂಲಕ ಎಸ್.ಆರ್.ಎಸ್ ಜಂಕ್ಷನ್- ಪೊಲೀಸ್ ಠಾಣೆ ಜಂಕ್ಷನ್ -ಜಾಲಹಳ್ಳಿ ಕ್ರಾಸ್ ದಾಸರಹಳ್ಳಿ -8ನೇ ಮೈಲಿ-ರ್ಲೆಜಿ ಟೋಲ್

ಈ ಮೊದಲು ಫ್ಲೈಓವರ್ ಕೇಬಲ್ ಅಳವಡಿಕೆ ದುರಸ್ತಿ ಕಾಮಗಾರಿ ಹಾಗೂ ಅಂತಿಮ ಲೋಡ್ ಟೆಸ್ಟಿಂಗ್ ಹಿನ್ನೆಲೆ ಪೀಣ್ಯ ಎಲಿವೇಟೆಡ್ ಫ್ಲೈಓವರ್​ ಏಪ್ರಿಲ್​ 13ರಿಂದ 5 ದಿನ ಬಂದ್​ ಆಗಲಿದೆ ಎಂದು ತಿಳಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಪ್ರಕ್ರಿಯೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದೂಡಿದ ಪರಿಣಾಮ ಪ್ಲೈಓವರ್​​ ಮೇಲೆ ವಾಹನಗಳ ಸಂಚಾರಕ್ಕೆ ಎಂದಿನಂತೆ ಅನವುಮಾಡಿಕೊಡಲಾಗಿತ್ತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಇಂದೂ ಇರಲಿದೆ ವರುಣಾರ್ಭಟ! ಕರಾವಳಿಯಲ್ಲಿ ಹೀಟ್​ ವೇವ್ ಜೊತೆ ಮಳೆಯ ಸಾಧ್ಯತೆ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 8:09 am, Sat, 2 May 26

Follow Us
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ