ಬೆಸ್ಕಾಂ ಬೇಜವಾಬ್ದಾರಿಗೆ ತಾಯಿ, ಹಸುಗೂಸು ಬಲಿ: ಎಇ-ಎಇಇ ಅಮಾನತು

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಹೋಪ್ ಫಾರ್ಮ್ ಬಳಿ ವಿದ್ಯುತ್ ತಂತಿ ತುಳಿದು ಮಹಿಳೆ ಮತ್ತು ಒಂದು ಮಗು ಸಾವನ್ನಪ್ಪಿದ್ದು, ಇದಕ್ಕೆ ಸಂಬಂಧಿಸಿದಂತೆ ಬೆಸ್ಕಾಂನ ಎಇ ಹಾಗೂ ಎಇಇಯನ್ನು ಅಮಾನತು ಮಾಡಲಾಗಿದೆ. ಅಲ್ಲದೇ ಈ ಪ್ರಕರಣವನ್ನು ತನಿಖೆಗೆ ಆದೇಶಿಸಿದ್ದು, ಮೃತ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ನೀಡುವುದಾಗಿ ಇಂಧನ ಸಚಿವ ಕೆಜೆ ಜಾರ್ಜ್ ಟ್ವೀಟ್ ಮಾಡಿದ್ದಾರೆ.

ಬೆಸ್ಕಾಂ ಬೇಜವಾಬ್ದಾರಿಗೆ ತಾಯಿ, ಹಸುಗೂಸು ಬಲಿ: ಎಇ-ಎಇಇ ಅಮಾನತು
Follow us
| Edited By: ರಮೇಶ್ ಬಿ. ಜವಳಗೇರಾ

Updated on: Nov 19, 2023 | 4:34 PM

ಬೆಂಗಳೂರು, (ನವೆಂಬರ್ 19): ಬೆಂಗಳೂರಿನ (Bengaluru) ವೈಟ್‌ಫೀಲ್ಡ್‌ನಲ್ಲಿರುವ ಹೋಪ್ ಫಾರ್ಮ್ ಬಳಿ ವಿದ್ಯುತ್ ತಂತಿ ತುಳಿದು ಮಹಿಳೆ ಮತ್ತು ಒಂದು ಮಗು ಸಾವನ್ನಪ್ಪಿದ್ದು, ಇದಕ್ಕೆ ಸಂಬಂಧಿಸಿದಂತೆ ಬೆಸ್ಕಾಂನ ಎಇ ಹಾಗೂ ಎಇಇಯನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಇಂಧನ ಸಚಿವ ಕೆಜೆ ಜಾರ್ಜ್​ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದು, ಘಟನೆಗೆ ಕಾರಣರಾದ ಎಇ, ಎಇಇರನ್ನು ಅಮಾನತುಗೊಳಿಸಿದ್ದೇವೆ. ಪ್ರಕರಣದ ಬಗ್ಗೆ ತನಿಖೆಗೆ ಆದೇಶ ನೀಡಿದ್ದೇವೆ. ನಿರ್ಲಕ್ಷ್ಯವಹಿಸಿದ್ರೆ ಉಳಿದವರ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಇನ್ನು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದಿದ್ದಾರೆ.

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಹೋಪ್ ಫಾರ್ಮ್ ಬಳಿ ವಿದ್ಯುತ್ ಶಾಕ್‌ಗೆ ಒಬ್ಬ ಮಹಿಳೆ ಮತ್ತು ಒಂದು ಮಗು ಸಾವನ್ನಪ್ಪಿರುವ ದುರ್ದೈವದ ಘಟನೆ ನಡೆದಿದೆ. ಈ ದುರದೃಷ್ಟಕರ ಸಾವುಗಳಿಗೆ ಕಾರಣವಾದ ಘಟನೆಯ ಕುರಿತು ನಾವು ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದೇವೆ. ಇದರ ವರದಿಯನ್ನು ಎದುರು ನೋಡುತ್ತಿದ್ದೇವೆ. ಈ ಅಪಘಾತಕ್ಕೆ ಕಾರಣರಾದ AE ಮತ್ತು AEE ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಮತ್ತು ಇದಕ್ಕೆ ಕಾರಣಾದವರು ಮತ್ತಾರೇ ಇದ್ದರೂ ನಿರ್ದಾಕ್ಷಿಣ್ಯಯವಾಗಿ ಕ್ರಮ ಜರುಗಿಸಲಾಗುವುದು. ಈ ದುರ್ಘಟನೆಯಲ್ಲಿ ಸಂಬಂಧಿಕರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ ಪರಿಹಾರ ನೀಡಲಿದೆ ಎಂದು ಸಚಿವ ಕೆಜೆ ಜಾರ್ಜ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಬಾಣಂತಿ, ಹಸುಗೂಸು ದಾರುಣ ಸಾವು

ಇಂದು ಬೆಳಗ್ಗೆ ಬೆಂಗಳೂರಿನ ವೈಟ್​ಫೀಲ್ಡ್​​​ನ ಕಾಡುಗೋಡಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಬಾಣಂತಿ ಹಾಗೂ 9 ತಿಂಗಳ ಹಸುಗೂಸು ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ತಾಯಿ ಸೌಂದರ್ಯ(23), 9 ತಿಂಗಳ ಮಗು ಲೀಲಾ ಮೃತಪಟ್ಟ ತಾಯಿ-ಮಗು. ಘಟನೆ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮೂವರು ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ
ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್
ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್
ಯಡಿಯೂರಪ್ಪರನ್ನು ಟೀಕಿಸುವ ನೈತಿಕತೆ ಬಸನಗೌಡ ಪಾಟೀಲ್ ಗಿಲ್ಲ: ರೇಣುಕಾಚಾರ್ಯ
ಯಡಿಯೂರಪ್ಪರನ್ನು ಟೀಕಿಸುವ ನೈತಿಕತೆ ಬಸನಗೌಡ ಪಾಟೀಲ್ ಗಿಲ್ಲ: ರೇಣುಕಾಚಾರ್ಯ
ಸಚಿವ ಭೈರತಿ ಸುರೇಶ್ ಮತ್ತು ಬಸನಗೌಡ ಯತ್ನಾಳ್ ನಡುವಿನ ಚರ್ಚೆ ಗಮನ ಸೆಳೆಯಿತು
ಸಚಿವ ಭೈರತಿ ಸುರೇಶ್ ಮತ್ತು ಬಸನಗೌಡ ಯತ್ನಾಳ್ ನಡುವಿನ ಚರ್ಚೆ ಗಮನ ಸೆಳೆಯಿತು
ಅಶೋಕ ಮತ್ತು ವಿಶ್ವನಾಥ್ ನಡುವೆ ಭಿನ್ನಾಭಿಪ್ರಾಯವಿಲ್ಲ: ಎಸ್ ಟಿ ಸೋಮಶೇಖರ್
ಅಶೋಕ ಮತ್ತು ವಿಶ್ವನಾಥ್ ನಡುವೆ ಭಿನ್ನಾಭಿಪ್ರಾಯವಿಲ್ಲ: ಎಸ್ ಟಿ ಸೋಮಶೇಖರ್
ನಿತಿನ್ ಗಡ್ಕರಿ ಜೊತೆ ಪೋಟೋದಿಂದ ತನ್ವೀರ್ ಪೀರಾ ಪಾಪಮುಕ್ತನಾಗಲಾರ: ಯತ್ನಾಳ್
ನಿತಿನ್ ಗಡ್ಕರಿ ಜೊತೆ ಪೋಟೋದಿಂದ ತನ್ವೀರ್ ಪೀರಾ ಪಾಪಮುಕ್ತನಾಗಲಾರ: ಯತ್ನಾಳ್
ಸಿಎಂಗೆ ತಾಕತ್ತಿದ್ದರೆ ತನ್ವೀರ್ ಪೀರಾ ವಿರುದ್ಧ ತನಿಖೆ ನಡೆಸಲಿ: ಯತ್ನಾಳ್
ಸಿಎಂಗೆ ತಾಕತ್ತಿದ್ದರೆ ತನ್ವೀರ್ ಪೀರಾ ವಿರುದ್ಧ ತನಿಖೆ ನಡೆಸಲಿ: ಯತ್ನಾಳ್