AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್​​ನಲ್ಲಿ ವಿದ್ಯುತ್ ಬಿಲ್ ಪಾವತಿ ವಿಳಂಬವಾದರೆ ಪೆನಾಲ್ಟಿ ಚಿಂತೆ ಬೇಡ: ಗ್ರಾಹಕರಿಗೆ ಬೆಸ್ಕಾಂ ಶುಭ ಸುದ್ದಿ

ಮಾರ್ಚ್​ ತಿಂಗಳಲ್ಲಿ ಪಾವತಿ ಮಾಡಬೇಕಿರುವ ವಿದ್ಯುತ್ ಬಿಲ್ ವಿಳಂಬವಾಯಿತೆಂದು ಚಿಂತೆಯಲ್ಲಿರುವ ಗ್ರಾಹಕರಿಗೆ ಬೆಸ್ಕಾಂ ಶುಭ ಸುದ್ದಿ ನೀಡಿದೆ. ಈ ತಿಂಗಳ ಬಿಲ್ ಪಾವತಿ ಎಷ್ಟೇ ತಡವಾದರೂ ವಿಳಂಬ ಪಾವತಿ ಶುಲ್ಕ ಪಾವತಿಸಬೇಕಿಲ್ಲ ಎಂದು ಬೆಸ್ಕಾಂ ತಿಳಿಸಿದೆ. ಇದಕ್ಕೆ ಕಾರಣವನ್ನೂ ಬೆಸ್ಕಾಂ ನೀಡಿದೆ. ಯಾವೆಲ್ಲ ಜಿಲ್ಲೆಗಳ ಜನರು ಇದರ ಪ್ರಯೋಜನ ಪಡೆಯಬಹುದು ಎಂಬ ಮಾಹಿತಿ ಇಲ್ಲಿದೆ.

ಮಾರ್ಚ್​​ನಲ್ಲಿ ವಿದ್ಯುತ್ ಬಿಲ್ ಪಾವತಿ ವಿಳಂಬವಾದರೆ ಪೆನಾಲ್ಟಿ ಚಿಂತೆ ಬೇಡ: ಗ್ರಾಹಕರಿಗೆ ಬೆಸ್ಕಾಂ ಶುಭ ಸುದ್ದಿ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Mar 25, 2024 | 10:35 AM

Share

ಬೆಂಗಳೂರು, ಮಾರ್ಚ್​ 25: ವಿದ್ಯುತ್ ಬಿಲ್ (Electricity Bill) ಪಾವತಿಯ ಆನ್​ಲೈನ್ ವ್ಯವಸ್ಥೆಯ ಅಪ್​ಗ್ರೇಡ್ ವೇಳೆ ಕಂಡುಬಂದ ತಾಂತ್ರಿಕ ಸಮಸ್ಯೆಯ ಕಾರಣ ಮಾರ್ಚ್ ತಿಂಗಳಲ್ಲಿ ಬಿಲ್ ಪಾವತಿ ವಿಳಂಬವಾದರೆ ಅದಕ್ಕೆ ವಿಳಂಬ ಶುಲ್ಕ ಪಾವತಿ ಮಾಡಬೇಕಿಲ್ಲ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ತಿಳಿಸಿದೆ. ಡಿಜಿಟಲ್ ಸೇವೆಗಳಲ್ಲಿನ ಅಡೆತಡೆಗಳ ನಿವಾರಣೆಗಾಗಿ ಆನ್‌ಲೈನ್ ಪಾವತಿ ವ್ಯವಸ್ಥೆಗೆ ತಾಂತ್ರಿಕ ನವೀಕರಣಗಳನ್ನು ಮಾಡಿದ ನಂತರ ಬೆಸ್ಕಾಂ ಈ ಕುರಿತು ಪ್ರಕಟಣೆ ಹೊರಡಿಸಿದೆ. ಈ ಸೌಲಭ್ಯ ಬೆಂಗಳೂರು ಮಾತ್ರವಲ್ಲದೆ, ಬೆಸ್ಕಾಂ ವ್ಯಾಪ್ತಿಯಡಿ ಬರುವ ಇತರ ಜಿಲ್ಲೆಗಳಲ್ಲೂ ಲಭ್ಯ ಇರಲಿದೆ.

ಮಾರ್ಚ್ 10 ಮತ್ತು 19 ರ ನಡುವೆ ಆನ್‌ಲೈನ್ ಪಾವತಿ ವ್ಯವಸ್ಥೆಯನ್ನು ತಾಂತ್ರಿಕವಾಗಿ ಅಪ್‌ಗ್ರೇಡ್ ಮಾಡಲಾಗಿತ್ತು. ಆ ಸಂದರ್ಭದಲ್ಲಿ ತಾಂತ್ರಿಕ ದೋಷಗಳಿಂದಾಗಿ ಅನೇಕ ಗ್ರಾಹಕರಿಗೆ ಪಾವತಿ ಸಾಧ್ಯವಾಗಿರಲಿಲ್ಲ. ಇದನ್ನು ಪರಿಗಣಿಸಿ ಮಾರ್ಚ್ ತಿಂಗಳ ತಡವಾದ ವಿದ್ಯುತ್ ಬಿಲ್ ಪಾವತಿ ಮೇಲೆ ಯಾವುದೇ ವಿಳಂಬ ಶುಲ್ಕವನ್ನು ವಿಧಿಸಲಾಗುವುದಿಲ್ಲ ಎಂದು ಬೆಸ್ಕಾಂ ಹೇಳಿದೆ.

ಮಾರ್ಚ್ 20 ರಂದು ಆನ್‌ಲೈನ್ ಪಾವತಿ ಸೇವೆಗಳು ಪುನರಾರಂಭಗೊಂಡಿದ್ದರೂ ಸಹ ಎಂಟು ದಿನಗಳ ಅಡಚಣೆಯಿಂದಾಗಿ ಬಿಲ್ ಪಾವತಿಗೆ ಭಾರೀ ರಷ್ ಕಂಡುಬಂದಿದೆ. ಆದ್ದರಿಂದ, ಕೆಲವು ಗ್ರಾಹಕರು ತೊಂದರೆಗಳನ್ನು ಎದುರಿಸಿದ್ದಾರೆ. ಗ್ರಾಹಕರು ತಮ್ಮ ಬಿಲ್‌ಗಳನ್ನು ಮಾರ್ಚ್ 30 ರವರೆಗೆ ಪಾವತಿಸಬಹುದು ಮತ್ತು ಯಾವುದೇ ದಂಡ ಅಥವಾ ತಡವಾದ ಪಾವತಿಗಾಗಿ ಶುಲ್ಕವನ್ನು ವಿಧಿಸಲಾಗುವುದಿಲ್ಲ ಎಂದು ಬೆಸ್ಕಾಂ ಹೇಳಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಇದನ್ನೂ ಓದಿ: ಕುಡಿಯಲು ಯೋಗ್ಯ ನೀರಿನ ದುರ್ಬಳಕೆ, 1 ಲಕ್ಷ ರೂಪಾಯಿಗೂ ಹೆಚ್ಚು ದಂಡ ಸಂಗ್ರಹಿಸಿದ ಜಲ ಮಂಡಳಿ

ಬೆಸ್ಕಾಂ ಅಡಿಯಲ್ಲಿ ಬರುವ ರಾಮನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳ ಗ್ರಾಹಕರು ವಿದ್ಯುತ್ ಬಿಲ್ ಪಾವತಿ ವಿಳಂಬವಾದರೆ ವಿಳಂಬ ಪಾವತಿ ಶುಲ್ಕ ಪಾವತಿಸಬೇಕಾಗಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:33 am, Mon, 25 March 24

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ