Bescom Online Bill Payment: ಅ.5 ಮತ್ತು 6 ರಂದು ಬೆಸ್ಕಾಂ ಆನ್ ಲೈನ್ ಸೇವೆ ಇರಲ್ಲ

ಬೆಸ್ಕಾಂನ ಉಪವಿಭಾಗದ ವ್ಯಾಪ್ತಿಯಲ್ಲಿ ಎರಡು ದಿನ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕಾಗಿ ಆನ್ಲೈನ್ ಅರ್ಜಿ ಸಲ್ಲಿಕೆ, ಹೆಸರು ಮತ್ತು ವಿಳಾಸ ಬದಲಾವಣೆ ಸೇರಿದಂತೆ ಯಾವುದೇ ಆನ್ಲೈನ್ ಸೇವೆ ಲಭ್ಯವಿರುವುದಿಲ್ಲ. ಅಕ್ಟೋಬರ್ 4ರ ರಾತ್ರಿ 9 ಗಂಟೆಯಿಂದ ಅಕ್ಟೋಬರ್ 7ರ ಬೆಳಿಗ್ಗೆ 06 ಗಂಟೆವರೆಗೆ ಆನ್ಲೈನ್ ಸೇವೆ ಲಭ್ಯವಿರುವುದಿಲ್ಲ.

Bescom Online Bill Payment: ಅ.5 ಮತ್ತು 6 ರಂದು ಬೆಸ್ಕಾಂ ಆನ್ ಲೈನ್ ಸೇವೆ ಇರಲ್ಲ
ಬೆಸ್ಕಾಂ
Follow us
ಆಯೇಷಾ ಬಾನು
|

Updated on: Oct 03, 2024 | 11:42 AM

ಬೆಂಗಳೂರು, ಅ.03: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ತನ್ನ ಆನ್‌ಲೈನ್ ಸೇವೆಗಳನ್ನು ಅಕ್ಟೋಬರ್ 4 ರಿಂದ ಮೂರು ದಿನಗಳವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ಬೆಸ್ಕಾಂನ ಐಟಿ ವಿಭಾಗದಲ್ಲಿ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ನಿಮಿತ್ತ ಅಕ್ಟೋಬರ್ 4ರ ರಾತ್ರಿ 9 ಗಂಟೆಯಿಂದ ಅಕ್ಟೋಬರ್ 7ರ ಬೆಳಿಗ್ಗೆ 06 ಗಂಟೆವರೆಗೆ ಆರ್.ಎ.ಪಿ.ಡಿ.ಆರ್.ಪಿ ನಗರ ಪ್ರದೇಶದ ಗ್ರಾಹಕರಿಗೆ ಆನ್ಲೈನ್ ಸೇವೆಗಳು ಲಭ್ಯವಿರುವುದಿಲ್ಲ.

ಬೆಸ್ಕಾಂನ ಉಪವಿಭಾಗದ ವ್ಯಾಪ್ತಿಯಲ್ಲಿ ಎರಡು ದಿನ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕಾಗಿ ಆನ್ಲೈನ್ ಅರ್ಜಿ ಸಲ್ಲಿಕೆ, ಹೆಸರು ಮತ್ತು ವಿಳಾಸ ಬದಲಾವಣೆ ಸೇರಿದಂತೆ ಯಾವುದೇ ಆನ್ಲೈನ್ ಸೇವೆ ಲಭ್ಯವಿರುವುದಿಲ್ಲ. ಹಾಗೆಯೇ ಬೆಸ್ಕಾಂ ಕ್ಯಾಶ್ ಕೌಂಟರ್ ಗಳಲ್ಲಿ ಬಿಲ್ ಪಾವತಿಸಲು ಸಾಧ್ಯವಿರುವುದಿಲ್ಲ. ಅಕ್ಟೋಬರ್ 5ರ ಬೆಳಗ್ಗೆ 11ರ ನಂತರ ವಿದ್ಯುತ್ ಬಿಲ್ ಪಾವತಿ ಕಾರ್ಯ ಪುನರಾರಂಭಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಐಟಿ ಮೂಲಸೌಕರ್ಯ ವರ್ಧನೆ ಮತ್ತು ಕಾರ್ಯಾಚರಣೆ ಪ್ರದೇಶಗಳಲ್ಲಿ ಸೇವೆಯ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಬೆಸ್ಕಾಂ ಈ ಕಾರ್ಯ ಕೈಗೊಂಡಿದೆ. 2024ರ ಮಾರ್ಚ್ 20 ರಂದು ಬಿಐಪಿ ಮತ್ತು ಡಬ್ಲ್ಯುಎಸ್‌ಎಸ್‌ಗೆ ನವೀಕರಣಗಳೊಂದಿಗೆ ಒರಾಕಲ್ ಸಿಸಿಬಿಯನ್ನು ಆವೃತ್ತಿ 2.3 ರಿಂದ 2.8 ಕ್ಕೆ ಯಶಸ್ವಿಯಾಗಿ ಅಪ್‌ಗ್ರೇಡ್ ಮಾಡುವುದರೊಂದಿಗೆ ಹಂತ-1 ಅನ್ನು ಹಂತ ಹಂತವಾಗಿ ನವೀಕರಿಸಲಾಗಿದೆ.

ಇದನ್ನೂ ಓದಿ: ಬೆಸ್ಕಾಂ ಬಿಲ್ ಜತೆ ಬಂದ ಅಡಿಷನಲ್ ಚಾರ್ಜ್ ಕಂಡು ಮನೆ ಮಾಲೀಕರು ಶಾಕ್!

ಮುಂಬರುವ ಹಂತ-2ರಲ್ಲಿ, ಇಎಎಂ, ಜಿಐಎಸ್, ಐಡಿಎಎಂ, ಇಎಎಸ್ ಮಾಸ್ಟರ್ ಡೇಟಾ ನಿರ್ವಹಣೆ ಮತ್ತು ಮೊಬೈಲ್ ಅಪ್ಲಿಕೇಶನ್‌ಗೆ ಸಂಬಂಧಿಸಿದ ಅಪ್‌ಗ್ರೇಡ್ ಮಾಡಿದ ಅಪ್ಲಿಕೇಶನ್‌ಗಳು ರೋಲ್‌ಔಟ್ ಆಗಲಿದ್ದು, ಅಕ್ಟೋಬರ್ 7ರಿಂದ ಕಾರ್ಯಾಚರಣೆಗೆ ಮುಕ್ತವಾಗಲಿವೆ ಎಂದು ಬೆಸ್ಕಾಂ ಹೇಳಿದೆ.

ಬೆಂಗಳೂರು, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕ್ಯಾತಸಂದ್ರ, ಸಿರಾ, ಚನ್ನಪಟ್ಟಣ, ಆನೇಕಲ್, ಮುಳಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆಜಿಎಫ್, ಚಳ್ಳಕೆರೆ, ಕುಣಿಗಲ್, ಹರಪ್ಪನಹಳ್ಳಿ, ಹಿರಿಯೂರು, ತಿಪಟೂರು, ಗೌರಿಬಿದನೂರಿನಲ್ಲಿ ಆನ್​ಲೈನ್ ಸೇರವೆ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿಬೆಸ್ಕಾಂನ 24×7 ಸಹಾಯವಾಣಿ 1912ಕ್ಕೆ ಕರೆಮಾಡಿ ಅಥವಾ ಬೆಸ್ಕಾಂ ವೆಬ್ಸೈಟ್ಗೆ ಭೇಟಿ ನೀಡಬಹುದಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ