AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯ ವಿದ್ಯುತ್ ಅವಘಡಗಳಲ್ಲಿ ಆರೇ ತಿಂಗಳಲ್ಲಿ 118 ಸಾವು

ಬೆಂಗಳೂರು ಸೇರಿದಂತೆ ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಗಳಲ್ಲಿ ಕೇವಲ ಆರು ತಿಂಗಳಲ್ಲಿ 118 ಜನರು ವಿದ್ಯುತ್ ಅವಘಡಗಳಿಂದ ಮೃತಪಟ್ಟಿರುವುದು ತಿಳಿದುಬಂದಿದೆ. ಇದು ಹಿಂದಿನ ದಶಕದ ಸರಾಸರಿಗಿಂತ ಎರಡು ಪಟ್ಟು ಹೆಚ್ಚಾಗಿದೆ. ಬೆಸ್ಕಾಂ ಸುಂಕ ಪರಿಷ್ಕರಣೆ ಪ್ರಸ್ತಾವನೆ ವೇಳೆ ಸಲ್ಲಿಸಿದ್ದ ವರದಿಯಿಂದ ಈ ಮಾಹಿತಿ ಬಹಿರಂಗವಾಗಿದೆ.

ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯ ವಿದ್ಯುತ್ ಅವಘಡಗಳಲ್ಲಿ ಆರೇ ತಿಂಗಳಲ್ಲಿ 118 ಸಾವು
ಸಾಂದರ್ಭಿಕ ಚಿತ್ರ
Ganapathi Sharma
|

Updated on:Apr 07, 2025 | 9:38 AM

Share

ಬೆಂಗಳೂರು, ಏಪ್ರಿಲ್ 7: ಬೆಸ್ಕಾಂ ವ್ಯಾಪ್ತಿಯಲ್ಲಿ ಸಂಭವಿಸಿದ ವಿವಿಧ ವಿದ್ಯುತ್ ಅವಘಡಗಳಲ್ಲಿ ಕಳೆದ ವರ್ಷ ಕೇವಲ ಆರು ತಿಂಗಳಲ್ಲಿ 118 ಮಂದಿ ಮೃತಪಟ್ಟಿದ್ದಾರೆ. ಇದು ಹಿಂದಿನ ದಶಕವೊಂದರಲ್ಲಿ ದಾಖಲಾದ ಸರಾಸರಿ ವಾರ್ಷಿಕ ಸಾವುಗಳಿಗಿಂತ ಎರಡು ಪಟ್ಟು ಹೆಚ್ಚು ಎಂದು ವರದಿಯಾಗಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಸುಂಕ ಪರಿಷ್ಕರಣೆ ಪ್ರಸ್ತಾವನೆಯ ಭಾಗವಾಗಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ (KERC) ಸಲ್ಲಿಸಿದ ವರದಿಯಿಂದ ಈ ಅಂಕಿಅಂಶ ತಿಳಿದುಬಂದಿದೆ. ಬೆಸ್ಕಾಂ ವ್ಯಾಪ್ತಿಯ ಎಂಟು ಜಿಲ್ಲೆಗಳಲ್ಲಿ ಈ ಸಾವುಗಳು ವರದಿಯಾಗಿವೆ.

ಆದಾಗ್ಯೂ, ಈ ಅವಘಡಗಳಿಗೆ ಸಾರ್ವಜನಿಕರ ನಿರ್ಲಕ್ಷ್ಯವೇ ಕಾರಣ ಎಂದು ಬೆಸ್ಕಾಂ ಅಧಿಕಾರಿಗಳು ದೂಷಿಸಿದ್ದಾರೆ.

ಬೆಸ್ಕಾಂ ವಿದ್ಯುತ್ ಅವಘಡ: ಯಾವ ಜಿಲ್ಲೆಯಲ್ಲಿ ಎಷ್ಟು ಸಾವು?

2015-2016 ರಿಂದ 2023-2024 ರ ಅವಧಿಯಲ್ಲಿ ಬೆಂಗಳೂರು ನಗರ ಮತ್ತು ಗ್ರಾಮಾಂತರ, ದಾವಣಗೆರೆ, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ಕೋಲಾರ ಜಿಲ್ಲೆಗಳನ್ನು ಒಳಗೊಂಡಿರುವ ಬೆಸ್ಕಾಂ ವ್ಯಾಪ್ತಿಯಲ್ಲಿ ವಾರ್ಷಿಕವಾಗಿ ಸರಾಸರಿ 109.5 ಜನರು ವಿದ್ಯುತ್ ಅಪಘಾತಗಳಲ್ಲಿ ಸಾವನ್ನಪ್ಪಿದ್ದರು. 2024 ರಲ್ಲಿ ಕೇವಲ ಆರು ತಿಂಗಳಲ್ಲಿ (ಏಪ್ರಿಲ್ ನಿಂದ ಅಕ್ಟೋಬರ್) ಆ ಸಂಖ್ಯೆ ದಾಟಿ ಸಾವುಗಳು ಸಂಭವಿಸಿವೆ. ಅದೇ ಅವಧಿಯಲ್ಲಿ, ವಿದ್ಯುತ್ ಅಪಘಾತಗಳಿಂದಾಗಿ 61 ಪ್ರಾಣಿಗಳು ಮೃತಪಟ್ಟಿವೆ ಎಂದು ಬೆಸ್ಕಾಂ ಅಂಕಿಅಂಶ ಉಲ್ಲೇಖಿಸಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.

ಇದನ್ನೂ ಓದಿ
Image
ಸೆಕೆಂಡ್ ಪಿಯುಸಿ ಫಲಿತಾಂಶ ಇಂದು, ನೀವು ತಿಳಿಯಲೇಬೇಕಾದ ವಿಚಾರಗಳು ಇಲ್ಲಿವೆ
Image
ನಗ್ನ ವಿಡಿಯೋ ಕರೆ ಮಾಡುವಂತೆ ಒತ್ತಾಯ, ಅನ್ಯ ಕೋಮಿನ ಯುವಕನಿಗೆ ಬಿತ್ತು ಗೂಸಾ
Image
ಬೆಂಗಳೂರಿನಲ್ಲಿ ಚಿಕೂನ್ ಗುನ್ಯಾ, ಡೆಂಗ್ಯೂ ಹೆಚ್ಚಳ: ವಾರದಲ್ಲಿ 100 ಕೇಸ್
Image
ವಿಧಾನಸೌಧದ ಶಾಶ್ವತ ವರ್ಣರಂಜಿತ ದೀಪಾಲಂಕಾರ ನೋಡಿ

ಬೆಂಗಳೂರು ನಿವಾಸಿಗಳಿಂದ ಆತಂಕ

2024-25ರ ಅಂತಿಮ ಅಂಕಿಅಂಶಗಳು ಇನ್ನಷ್ಟೇ ಬಿಡುಗಡೆಯಾಗಬೇಕಿದೆ. ವಿದ್ಯುತ್ ಅವಘಡಗಳಿಂದ ಸಾವಿನ ಸಂಖ್ಯೆ ಹೆಚ್ಚುತ್ತಿರುವುದಕ್ಕೆ ಬೆಂಗಳೂರು ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

‘ಪಾದಚಾರಿ ಮಾರ್ಗಗಳಲ್ಲಿ ತಂತಿಗಳು ತುಂಡಾಗಿ ನೇತಾಡುವುದು ಅಥವಾ ಬಿದ್ದಿರುವುದು ಸಾಮಾನ್ಯ. ಇಂಥ ಕಡೆಗಳಲ್ಲಿ ನಡೆಯಲು ಭಯವಾಗುತ್ತದೆ. ಒಂದು ತಪ್ಪು ಹೆಜ್ಜೆ ಇಟ್ಟರೆ ಮಾರಕವಾಗಬಹುದು’ ಎಂದು ಸುದ್ದಗುಂಟೆಪಾಳ್ಯದ ನಿವಾಸಿಯೊಬ್ಬರು ಹೇಳಿರುವುದನ್ನು ವರದಿ ಉಲ್ಲೇಖಿಸಿದೆ.

2023 ರಲ್ಲಿ ಎಸ್‌ಜಿ ಪಾಳ್ಯ ಮುಖ್ಯ ರಸ್ತೆಯಲ್ಲಿರುವ ವಿದ್ಯುತ್ ಕಂಬವೊಂದರಲ್ಲಿ ನೇತಾಡುತ್ತಿದ್ದ ಆಪ್ಟಿಕಲ್ ಫೈಬರ್ ಕೇಬಲ್ ಚಲಿಸುವ ನೀರಿನ ಟ್ಯಾಂಕರ್‌ಗೆ ತಗುಲಿ ಕುಸಿದು ಬಿದ್ದಿತ್ತು. ಶಾಲೆಗೆ ವಿದ್ಯಾರ್ಥಿಯೊಬ್ಬ ಕೇಬಲ್ ತಗುಲಿ ತೀವ್ರ ಸುಟ್ಟ ಗಾಯಗಳಿಗೆ ಒಳಗಾಗಿದ್ದ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಚಿಕೂನ್ ಗುನ್ಯಾ, ಡೆಂಗ್ಯೂ: ಒಂದೇ ವಾರದಲ್ಲಿ 100ಕ್ಕೂ ಹೆಚ್ಚು ಪ್ರಕರಣ

ಏಪ್ರಿಲ್ ಮತ್ತು ಸೆಪ್ಟೆಂಬರ್ 2024 ರ ನಡುವೆ 39,024 ಅಪಾಯಕಾರಿ ಸ್ಥಳಗಳನ್ನು ಗುರುತಿಸಿ ಸಮಸ್ಯೆಗಳನ್ನು ಸರಿಪಡಿಸಲಾಗಿದೆ ಎಂದು ಬೆಸ್ಕಾಂ ಹೇಳಿಕೊಂಡಿದೆ ಆದರೆ, 17,463 ಕಡೆಗಳಲ್ಲಿ ಇನ್ಮೂ ಸಮಸ್ಯೆಗಳು ಹಾಗೇಯೇ ಇವೆ. ವಿದ್ಯುತ್ ಮೂಲಸೌಕರ್ಯ ಸುಧಾರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:38 am, Mon, 7 April 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!