ಬೆಂಗಳೂರು: ಲಂಚ ಪಡೆಯುತ್ತಿದ್ದ ಬೆಸ್ಕಾಂ ಚೀಫ್ ಜನರಲ್ ಮ್ಯಾನೇಜರ್ ಲೋಕಾಯುಕ್ತ ಬಲೆಗೆ

| Updated By: Ganapathi Sharma

Updated on: Nov 23, 2023 | 7:56 PM

BESCOM Chief Manager Arrested: ಲಂಚ ಪಡೆಯುತ್ತಿದ್ದಾಗ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ಮತ್ತು ಸಹಾಯಕ ಎಂಜಿನಿಯರ್ (ಎಇ) ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

ಬೆಂಗಳೂರು: ಲಂಚ ಪಡೆಯುತ್ತಿದ್ದ ಬೆಸ್ಕಾಂ ಚೀಫ್ ಜನರಲ್ ಮ್ಯಾನೇಜರ್ ಲೋಕಾಯುಕ್ತ ಬಲೆಗೆ
ಲೋಕಾಯುಕ್ತ
Follow us on

ಬೆಂಗಳೂರು, ನವೆಂಬರ್ 23: ಲಂಚ ಪಡೆಯುತ್ತಿದ್ದಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದ ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ ಲಿಮಿಟೆಡ್‌ (BESCOM) ಮುಖ್ಯ ವ್ಯವಸ್ಥಾಪಕ ಮತ್ತು ಅವರ ಚಾಲಕನನ್ನು ಲೋಕಾಯುಕ್ತ (Lokayukta) ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ. ಬೆಸ್ಕಾಂ ಮುಖ್ಯ ಪ್ರಧಾನ ವ್ಯವಸ್ಥಾಪಕ ನಾಗರಾಜ್ ಎಂಎಲ್ ಅವರು ತಮ್ಮ ಚಾಲಕ ಮುರಳಿಕೃಷ್ಣ ಮೂಲಕ ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.

ಕಮರ್ಷಿಯಲ್ ಎಲೆಕ್ಟ್ರಿಕಲ್‌ ಸಪ್ಲೈನಿಂದ ಇಂಡಸ್ಟ್ರಿಯಲ್ ಎಲೆಕ್ಟ್ರಿಕಲ್‌ ಸಪ್ಲೈಗೆ ಬದಲಾವಣೆ ಮಾಡಿ ವಿದ್ಯುತ್ ಸಂಪರ್ಕ ಕಲ್ಪಿಸಲು ಗುತ್ತಿಗೆದಾರರಿಂದ ನಾಗರಾಜ್ 7.5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ನಾಗರಾಜ್ ಲಂಚದ ಬೇಡಿಕೆಯಿಟ್ಟಿದ್ದ ಪ್ರತಾಪ್ ಎಂಬ ಗುತ್ತಿಗೆದಾರ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಇದನ್ನೂ ಓದಿ: ಬೆಂಗಳೂರು: ವಿದ್ಯುತ್ ತಂತಿ ತಗುಲಿ ತಾಯಿ, ಮಗು ಸಾವು; ಸುಮೋಟೋ ಕೇಸ್ ದಾಖಲಿಸಿಕೊಂಡ ಲೋಕಾಯುಕ್ತ

ಲಂಚ ಪಡೆಯುತ್ತಿದ್ದಾಗ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ಮತ್ತು ಸಹಾಯಕ ಎಂಜಿನಿಯರ್ (ಎಇ) ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ನಿರ್ಮಾಣ ಹಂತದಲ್ಲಿರುವ ಕೈಗಾರಿಕಾ ಯೋಜನೆಗೆ ಅನುಮೋದನೆ ನೀಡಲು ಎಇಇ ನವೀನ್ ತೋಟಗಂಟಿ ಮತ್ತು ಎಇ ​​ಮಲ್ಲಾಪುರ ಜಿಎಚ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಗುರುವಾರ 1.2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರನ್ನು ಬಂಧಿಸಲಾಗಿತ್ತು. ನಾರಾಯಣ ಸ್ವಾಮಿ ಎಂಬ ವ್ಯಕ್ತಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ