BESCOM: ಜೂನ್ ತಿಂಗಳಲ್ಲಿ ಹೆಚ್ಚು ವಿದ್ಯುತ್ ಬಿಲ್ ಬಂದಿದೆಯೇ? ಬೆಸ್ಕಾಂ ಸ್ಪಷ್ಟೀಕರಣ ಇಲ್ಲಿದೆ

ಬಿಲ್​ ಬಗ್ಗೆ ಗೊಂದಲಗಳಿದ್ದರೆ ಆತಂಕಕ್ಕೀಡಾಗದೆ ಉಪವಿಭಾಗವನ್ನು ಸಂಪರ್ಕಿಸಬಹುದು. ಬೆಸ್ಕಾಂ ಹೆಲ್ಪ್​ಲೈನ್ 1912 ಸಂಖ್ಯೆಗೆ ಕರೆ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದು ಸಂಸ್ಥೆ ತಿಳಿಸಿದೆ.

BESCOM: ಜೂನ್ ತಿಂಗಳಲ್ಲಿ ಹೆಚ್ಚು ವಿದ್ಯುತ್ ಬಿಲ್ ಬಂದಿದೆಯೇ? ಬೆಸ್ಕಾಂ ಸ್ಪಷ್ಟೀಕರಣ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Jun 19, 2023 | 9:57 PM

ಬೆಂಗಳೂರು: ಜೂನ್​ ತಿಂಗಳಲ್ಲಿ ಹೆಚ್ಚು ವಿದ್ಯುತ್ ಬಿಲ್ (Electricity Bill) ಬಂದ ಬಗ್ಗೆ ಗ್ರಾಹಕರು ತಲೆಕೆಡಿಸಿಕೊಂಡಿದ್ದು, ಈ ವಿಚಾರವಾಗಿ ಬೆಸ್ಕಾಂ (BESCOM) ಸ್ಪಷ್ಟೀಕರಣ ನೀಡಿದೆ. ಜೂನ್ ತಿಂಗಳಲ್ಲಿ ಗ್ರಾಹಕರಿಗೆ ನೀಡಿರುವ ಬಿಲ್ ಮಾಹಿತಿ ತಂತ್ರಾಂಶದಲ್ಲಿ ಸೇರ್ಪಡೆಗೊಳಿಸುವ ಕಾರ್ಯ ಪ್ರಗತಿಯಲ್ಲಿರುವ ಕಾರಣ ಆನ್​ಲೈನ್​ನಲ್ಲಿ ಋಣಾತ್ಮಕ ಬಿಲ್​ ಬಂದಿದೆ. ಇನ್ನೆರಡು ದಿನಗಳ ಒಳಗೆ ಇದನ್ನು ಸರಿಪಡಿಸಲಾಗುವುದು ಎಂದು ಬೆಸ್ಕಾಂ ಸೋಮವಾರ ಹೇಳಿದೆ.

ಗ್ರಾಹಕರಿಗೆ ನೀಡಿರುವ ಮುದ್ರಿತ ಬಿಲ್​ನಲ್ಲಿ ಮೊತ್ತ ನಮೂದಾಗಿರುತ್ತದೆ. ಆ ಮೊತ್ತವನ್ನು ಆನ್​ಲೈನ್​ನಲ್ಲಿ ನಮೂದಿಸಿ ಪಾವತಿಸಲು ಕೋರಲಾಗಿದೆ. ಬಿಲ್​ ಬಗ್ಗೆ ಗೊಂದಲಗಳಿದ್ದರೆ ಆತಂಕಕ್ಕೀಡಾಗದೆ ಉಪವಿಭಾಗವನ್ನು ಸಂಪರ್ಕಿಸಬಹುದು. ಬೆಸ್ಕಾಂ ಹೆಲ್ಪ್​ಲೈನ್ 1912 ಸಂಖ್ಯೆಗೆ ಕರೆ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದು ಸಂಸ್ಥೆ ತಿಳಿಸಿದೆ.

ಬೆಸ್ಕಾಂ ಗ್ರಾಹಕರ ಬಳಕೆಗೆ ಅನುಗುಣವಾಗಿ ಮಾತ್ರ ಬಿಲ್ ನೀಡಲಾಗಿದೆ. ಯಾವುದೇ ಹೆಚ್ಚುವರಿ ಶುಲ್ಕ ಸೇರಿಸಿ ಬೆಸ್ಕಾಂ ಬಿಲ್​ ನೀಡಿರುವುದಿಲ್ಲ. ಜುಲೈ ತಿಂಗಳಲ್ಲಿ ಯಾವುದೇ ಬಿಲ್ಲಿಂಗ್ ಸಮಸ್ಯೆ ಇರುವುದಿಲ್ಲ ಎಂದು ಬೆಸ್ಕಾಂ ಮಾಧ್ಯಮ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Gruha Jyothi Scheme: ಗೃಹಜ್ಯೋತಿ ಯೋಜನೆ ನೋಂದಣಿ, ಮೊದಲ ದಿನ 55 ಸಾವಿರ ಅರ್ಜಿ

ಗೃಹಜ್ಯೋತಿಗೆ ಲಕ್ಷಕ್ಕೂ ಹೆಚ್ಚು ಮಂದಿ ಅರ್ಜಿ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಸೋಮವಾರ 1,61,958 ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್​ ಕೇಂದ್ರಗಳಲ್ಲಿ ಬೆಳಗ್ಗೆಯಿಂದ ಸಂಜೆ 5.30 ರವರೆಗೆ ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ. ಮೊದಲ ದಿನ ಸುಮಾರು 55 ಸಾವಿರ ಗ್ರಾಹಕರು ನೋಂದಣಿ ಮಾಡಿಕೊಂಡಿದ್ದರು. ಎರಡನೇ ದಿನ ನೋಂದಣಿ ಪ್ರಕ್ರಿಯೆ ವೇಗ ಪಡೆದುಕೊಂಡಿದ್ದು, ಲಕ್ಷಕ್ಕೂ ಹೆಚ್ಚು ಮಂದಿ ಯೋಜನೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ