Electricity ಗ್ರಾಹಕರಿಗೆ ಗುಡ್ ನ್ಯೂಸ್, ಬೆಸ್ಕಾಂ‌- ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ

| Updated By: ರಮೇಶ್ ಬಿ. ಜವಳಗೇರಾ

Updated on: Dec 29, 2022 | 9:32 PM

Electricity Adjustment Cost: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಹಾಗೂ ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ ತನ್ನ ಗ್ರಾಹಕರಿಗೆ ಹೊಸ ವರ್ಷದ ಗಿಫ್ಟ್ ನೀಡಿದೆ.

Electricity ಗ್ರಾಹಕರಿಗೆ ಗುಡ್ ನ್ಯೂಸ್, ಬೆಸ್ಕಾಂ‌- ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ
Electricity
Image Credit source: BESCOM And MESCOM reduces cost of power adjustment
Follow us on

ಬೆಂಗಳೂರು: ಹೊಸ ವರ್ಷದ ಹೊಸ್ತಿಲಲ್ಲಿರುವ ಗ್ರಾಹಕರಿಗೆ ಇಂಧನ ಇಲಾಖೆ ಗುಡ್​ ನ್ಯೂಸ್ ನೀಡಿದೆ. ಬೆಸ್ಕಾಂ‌(Bangalore Electricity Supply Company Ltd )ಹಾಗೂ ಮೆಸ್ಕಾಂ (Mangalore Electricity Supply Company) ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಇಂಧನ ಸಚಿವ ಸುನಿಲ್ ಕುಮಾರ್ ಮಾಹಿತಿ ನೀಡಿದ್ದಾರೆ.

ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 39 ಪೈಸೆ ಕಡಿತ ಮಾಡಲಾಗಿದ್ದು, ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ. ಈ ಕುರಿತು ಬೆಸ್ಕಾಂ ಇಂದು(ಡಿಸೆಂಬರ್ 29) ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ. ಅಲ್ಲದೇ ಇಂಧನ ಸಚಿವ ಸುನಿಲ್ ಕುಮಾರ್ ಟ್ವೀಟ್​ ಮೂಲಕ ತಿಳಿಸಿದ್ದಾರೆ.