ಗೃಹ ಜ್ಯೋತಿಗೆ ಅರ್ಜಿ ಸಲ್ಲಿಕೆ; ಇಂದು ಕೂಡ ಕಾರ್ಯನಿರ್ವಹಿಸಲಿವೆ ಬೆಸ್ಕಾಂ, ನಾಡಕಚೇರಿಗಳು

|

Updated on: Jun 18, 2023 | 10:14 AM

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಹಿನ್ನಲೆ ಇಂದು(ಜೂ.18)ಕೂಡ ಬೆಸ್ಕಾಂ ಕಚೇರಿ ಹಾಗೂ ನಾಡ ಕಚೇರಿಗಳಲ್ಲಿ ಕಾರ್ಯನಿರ್ವಹಿಸಲು ಸೂಚನೆ ನೀಡಲಾಗಿದೆ.

ಗೃಹ ಜ್ಯೋತಿಗೆ ಅರ್ಜಿ ಸಲ್ಲಿಕೆ; ಇಂದು ಕೂಡ ಕಾರ್ಯನಿರ್ವಹಿಸಲಿವೆ ಬೆಸ್ಕಾಂ, ನಾಡಕಚೇರಿಗಳು
ಗೃಹ ಜ್ಯೋತಿ
Follow us on

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ(Gruha Jyothi)ಯೋಜನೆಗೆ ಅರ್ಜಿ ಸಲ್ಲಿಕೆ ಹಿನ್ನಲೆ ಇಂದು(ಜೂ.18)ಕೂಡ ಬೆಸ್ಕಾಂ ಕಚೇರಿ ಹಾಗೂ ನಾಡ ಕಚೇರಿಗಳಲ್ಲಿ ಕಾರ್ಯನಿರ್ವಹಿಸಲು ಸೂಚನೆ ನೀಡಲಾಗಿದೆ. ಹೌದು ಸಾರ್ವಜನಿಕರಿಗೆ ಸಹಾಯ ಮಾಡುವ ದೃಷ್ಟಿಯಿಂದ ಭಾನುವಾರದಂದು ಕೂಡ ಕರ್ತವ್ಯ ದಿನವೆಂದು ಪರಿಗಣಿಸಿ, ಇಂದು ಬೆಳಿಗ್ಗೆ 11 ಗಂಟೆಯಿಂದ ಅರ್ಜಿ ಸಲ್ಲಿಸಲು ಸೂಚನೆ ನೀಡಲಾಗಿದೆ.

11 ಗಂಟೆಗೆ ಗೃಹಜ್ಯೋತಿ ಯೋಜನೆಗೆ ಸರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

ಇನ್ನು ಗೃಹ ಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆಗೆ ನಗರದ ಎಂ.ಜಿ ರಸ್ತೆಯ ಬೆಸ್ಕಾಂ ಪ್ರಾದೇಶಿಕ ಕಚೇರಿಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಉಚಿತ 200 ಯೂನಿಟ್ ಎನ್ನುವ ಬೋರ್ಡ್ ಹಾಕಿರುವ ಸಿಬ್ಬಂದಿ, ಎರಡು ಕಂಪ್ಯೂಟರ್ ಇಟ್ಟು, ಎರಡು ಕೌಂಟರ್ ತೆರೆಯಲು ರೆಡಿ ಮಾಡಿಕೊಳ್ಳಲಾಗಿದೆ. ಜೊತೆಗೆ ಏನೇನು ದಾಖಲೆಗಳು ಬೇಕು, ಹೇಗೆ, ಎಲ್ಲಿ ಅಪ್ಲೋಡ್ ಮಾಡಬಹುದು ಎನ್ನುವುದರ ಬಗ್ಗೆ ಸಂಪೂರ್ಣ ವಿವರಗಳು ಆ ಬೋರ್ಡ್​ನಲ್ಲಿದೆ.

ಇದನ್ನೂ ಓದಿ:Gruha Jyoti Scheme: ಉಚಿತ ವಿದ್ಯುತ್‌ ಪಡೆಯಲು ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವುದೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

‘ಗೃಹಜ್ಯೋತಿ’ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ?

ಇಂದಿನಿಂದ ‘ಗೃಹಜ್ಯೋತಿ’ ಅರ್ಜಿ ಸಲ್ಲಿಕೆ ಆರಂಭ ಆಗಲಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಇನ್ನು ಸೇವಾ ಸಿಂಧು ವೆಬ್‌ಸೈಟ್‌ ಬಳಸಿ ಮೊಬೈಲ್, ಕಂಪ್ಯೂಟರ್, ಲ್ಯಾಪ್​ಟಾಪ್​ನಲ್ಲೂ ಅರ್ಜಿ ಸಲ್ಲಿಸಬಹುದು. ಅಷ್ಟೇ ಅಲ್ಲ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ನಾಡ ಕಚೇರಿ, ಗ್ರಾ.ಪಂಚಾಯ್ತಿ ಕಚೇರಿ, ವಿದ್ಯುತ್​ ಕಚೇರಿಯಲ್ಲೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಇನ್ನು ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಆರ್​ಆರ್ ನಂಬರ್, ಮೊಬೈಲ್ ಸಂಖ್ಯೆ ಅವಶ್ಯಕತೆ ಇದೆ. ಇನ್ನು ಇನ್ನು ಬಾಡಿಗೆದಾರರಾಗಿದ್ದರೆ, ಮನೆ ಬಾಡಿಗೆ ಕರಾರು ಪತ್ರ ನೀಡಿ ಅರ್ಜಿ ಸಲ್ಲಿಸಬಹುದು. ಸಮಸ್ಯೆ ಇದ್ದರೆ ಹೆಚ್ಚಿನ ಮಾಹಿತಿಗಾಗಿ 1912 ಸಹಾಯವಾಣಿ ಸಂಖ್ಯೆಗೆ ಕಾಲ್‌ ಮಾಡಿ ಮಾಹಿತಿ ಪಡೆಯಬಹುದು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:01 am, Sun, 18 June 23