ಗ್ರಾಹಕರೇ ಗಮನಿಸಿ: ಈ 20 ಪಟ್ಟಣಗಳಲ್ಲಿ ಸೆ. 17ರವರೆಗೆ ಬೆಸ್ಕಾಂ ಆನ್‌ಲೈನ್ ಸೇವೆಗಳಲ್ಲಿ ವ್ಯತ್ಯಯ

ಸಾಫ್ಟ್‌ವೇರ್ ಅಪ್​ಗ್ರೇಡ್ ಮಾಡುವ ಕಾರಣ ಬೆಸ್ಕಾಂ ವ್ಯಾಪ್ತಿಯ 20 ಪಟ್ಟಣಗಳಲ್ಲಿ ಸೆಪ್ಟೆಂಬರ್ ಸೆಪ್ಟೆಂಬರ್ 17ರ ಮಧ್ಯರಾತ್ರಿವರೆಗೆ ಆನ್‌ಲೈನ್ ಸೇವೆಗಳು ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿವೆ. ಹೊಸ ವಿದ್ಯುತ್ ಸಂಪರ್ಕ, ಹೆಸರು ವರ್ಗಾವಣೆ, ಲೋಡ್ ಹೆಚ್ಚಳ ಹಾಗೂ ಆನ್‌ಲೈನ್ ಬಿಲ್ ಪಾವತಿ ಸೇರಿದಂತೆ ಹಲವು ಸೇವೆಗಳು ಈ ಅವಧಿಯಲ್ಲಿ ಲಭ್ಯವಿರುವುದಿಲ್ಲ. ಸೇವೆ ಸ್ಥಗಿತವಾಗಿರುವ ಪಟ್ಟಣಗಳ ವಿವರ ಇಲ್ಲಿದೆ.

ಗ್ರಾಹಕರೇ ಗಮನಿಸಿ: ಈ 20 ಪಟ್ಟಣಗಳಲ್ಲಿ ಸೆ. 17ರವರೆಗೆ ಬೆಸ್ಕಾಂ ಆನ್‌ಲೈನ್ ಸೇವೆಗಳಲ್ಲಿ ವ್ಯತ್ಯಯ
ಸಾಂದರ್ಭಿಕ ಚಿತ್ರ
Image Credit source: tv9

Updated on: Sep 16, 2026 | 10:36 AM

ಮುಖ್ಯಾಂಶಗಳು

  • 20 ಪಟ್ಟಣಗಳಲ್ಲಿ ಬೆಸ್ಕಾಂ ಆನ್‌ಲೈನ್ ಸೇವೆ ಸ್ಥಗಿತ
  • ಸೆಪ್ಟೆಂಬರ್ 17ರವರೆಗೆ ಸೇವೆಗಳಲ್ಲಿ ತಾತ್ಕಾಲಿಕ ವ್ಯತ್ಯಯ
  • ತುರ್ತು ಸಮಸ್ಯೆಗಳಿಗೆ 1912 ಸಹಾಯವಾಣಿಗೆ ಕರೆ ಮಾಡಲು ಸಲಹೆ

ಬೆಂಗಳೂರು, ಸೆಪ್ಟೆಂಬರ್ 16: ಸಾಫ್ಟ್‌ವೇರ್ ಅಪ್​ಗ್ರೇಡ್ ಹಿನ್ನೆಲೆಯಲ್ಲಿ ಬೆಸ್ಕಾಂ ವ್ಯಾಪ್ತಿಯ 20 ಪಟ್ಟಣಗಳಲ್ಲಿ ಆನ್‌ಲೈನ್ ಸೇವೆಗಳು ತಾತ್ಕಾಲಿಕವಾಗಿ ಲಭ್ಯವಿರುವುದಿಲ್ಲ. ಸೆಪ್ಟೆಂಬರ್ 15ರ ಮಧ್ಯರಾತ್ರಿಯಿಂದ ಸೆಪ್ಟೆಂಬರ್ 17ರ ಮಧ್ಯರಾತ್ರಿವರೆಗೆ ಈ ಸೇವೆಗಳಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಎಕ್ಸ್ ಸಂದೇಶದ ಮೂಲಕ ತಿಳಿಸಿದೆ. ಇಂಟಿಗ್ರೇಟೆಡ್ ಪವರ್ ಡೆವಲಪ್‌ಮೆಂಟ್ ಸ್ಕೀಮ್ (IPDS) ಐಟಿ ಹಂತ-2 ಯೋಜನೆಯಡಿ 20 ಗುರುತಿಸಲಾದ ಪಟ್ಟಣಗಳಲ್ಲಿ ಅಡ್ವಾನ್ಸ್ಡ್ ಸಾಫ್ಟ್‌ವೇರ್ ಅಪ್ಲಿಕೇಶನ್ ಅಳವಡಿಸಲಾಗುತ್ತಿದೆ. ಇದಕ್ಕಾಗಿ ಪ್ರಸ್ತುತ ಬಳಕೆಯಲ್ಲಿರುವ TRM (Total Revenue Management) ಸಾಫ್ಟ್‌ವೇರ್ ಬದಲಾಯಿಸಲಾಗುತ್ತಿದ್ದು, ಗ್ರಾಹಕರ ದತ್ತಾಂಶವನ್ನು ಹೊಸ ಸಾಫ್ಟ್‌ವೇರ್‌ಗೆ ವರ್ಗಾಯಿಸುವ ಪ್ರಕ್ರಿಯೆ ನಡೆಯಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಈ ಅವಧಿಯಲ್ಲಿ ಹೊಸ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಕೆ, ಹೆಸರು ಬದಲಾವಣೆ, ಲೋಡ್ ಹೆಚ್ಚಳಕ್ಕೆ ಮನವಿ ಹಾಗೂ ಆನ್‌ಲೈನ್ ವಿದ್ಯುತ್ ಬಿಲ್ ಪಾವತಿ ಸೇರಿದಂತೆ ಪ್ರಮುಖ ಆನ್‌ಲೈನ್ ಸೇವೆಗಳು ಲಭ್ಯವಿರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

ಬೆಸ್ಕಾಂ ಎಕ್ಸ್ ಸಂದೇಶ


ಯಾವೆಲ್ಲ ಪಟ್ಟಣಗಳಲ್ಲಿ ಬೆsಸ್ಕಾಂ ಆನ್​ಲೈನ್ ಸೇವೆ ಇರುವುದಿಲ್ಲ?

ಬಾಗೇಪಲ್ಲಿ, ದೇವನಹಳ್ಳಿ, ಗುಡಿಬಂಡೆ, ಮಾಗಡಿ, ಮಾಲೂರು, ನೆಲಮಂಗಲ, ಶ್ರೀನಿವಾಸಪುರ, ವಿಜಯಪುರ, ಚನ್ನಗಿರಿ, ಚಿಕ್ಕನಾಯಕನಹಳ್ಳಿ, ಗುಬ್ಬಿ, ಹೊಳಲ್ಕೆರೆ, ಹೊನ್ನಾಳಿ, ಹೊಸದುರ್ಗ, ಜಗಳೂರು, ಕೊರಟಗೆರೆ, ಮಧುಗಿರಿ, ಮೊಳಕಾಲ್ಮೂರು, ಪಾವಗಡ ಹಾಗೂ ತುರುವೇಕೆರೆ ಪಟ್ಟಣಗಳಲ್ಲಿ ಸೇವೆಗಳು ಸ್ಥಗಿತಗೊಳ್ಳಲಿವೆ.

ಆದರೆ ವಿದ್ಯುತ್ ಸಂಬಂಧಿತ ತುರ್ತು ಸಮಸ್ಯೆಗಳಿಗೆ ಬೆಸ್ಕಾಂನ 24×7 ಸಹಾಯವಾಣಿ 1912ಕ್ಕೆ ಕರೆ ಮಾಡಬಹುದು ಎಂದು ಸಂದೇಶದಲ್ಲಿ ತಿಳಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us