BESCOM Power Cut: ಬೆಸ್ಕಾಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿಂದು ವಿದ್ಯುತ್ ಕಡಿತ

Bangalore Power Cut: ಇಂದು (ಫೆಬ್ರವರಿ 5) ಬೆಂಗಳೂರಿನ ಹೊಸಕೋಟೆ ತಾಲೂಕಿನಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ನಿರ್ವಹಣೆ ಮತ್ತು ವಿದ್ಯುತ್ ಪೂರೈಕೆಯ ಸುಧಾರಣೆ ಕಾಮಗಾರಿಯ ಕಾರಣ ಎಫ್ -1 ಕಲ್ಕುಂಟೆ ಅಗ್ರಹಾರ ಮತ್ತು ಎಫ್ -2 ಶಿವನಪುರ ಫೀಡರ್‌ಗಳ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

BESCOM Power Cut: ಬೆಸ್ಕಾಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿಂದು ವಿದ್ಯುತ್ ಕಡಿತ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Feb 05, 2025 | 9:29 AM

ಬೆಂಗಳೂರು, ಫೆಬ್ರವರಿ: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಹೊಸಕೋಟೆ ತಾಲೂಕಿನ ಕೆಲವು ಪ್ರದೇಶಗಳಲ್ಲಿ ಇಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ನಿಗದಿತ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ. ದೇವನಗೊಂದಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ನಡೆಯುವ ಕಾರಣ ಈ ವಿದ್ಯುತ್ ಕಡಿತ ಮಾಡಲಾಗುತ್ತದೆ.

ಎಫ್​-1 ಕಲ್ಕುಂಟೆ ಅಗ್ರಹಾರ ಮತ್ತು ಎಫ್​-2 ಶಿವನಪುರ ಫೀಡರ್‌ಗಳಿಂದ ವಿದ್ಯುತ್ ಪೂರೈಕೆಯಾಗುವ ಪ್ರದೇಶಗಳಿಗೆ ತಾತ್ಕಾಲಿಕವಾಗಿ ವಿದ್ಯುತ್ ಕಡಿತಗೊಳಿಸಲಾಗುವುದು ಎಂದು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪುಟ್ಟಸ್ವಾಮಿ ದೃಢಪಡಿಸಿದ್ದಾರೆ. ವಿದ್ಯುತ್ ಪೂರೈಕೆಯಲ್ಲಿ ಸ್ಥಿರತೆ ಕಾಪಾಡುವ ನಿಟ್ಟಿನಲ್ಲಿ ಮತ್ತು ದಕ್ಷತೆಯನ್ನು ಸುಧಾರಿಸಲು ಕೇಬಲ್ ಲೈನ್‌ಗಳನ್ನು ಬದಲಾಯಿಸುವ ಕಾಮಗಾರಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಎಲ್ಲೆಲ್ಲಿ ಪವರ್ ಕಟ್?

ದೊಡ್ಡದುನ್ನಸಂದ್ರ ಕ್ರಾಸ್, ಅನುಗೊಂಡನಹಳ್ಳಿ, ಮುತ್ತೂರು, ಯಡಗೊಂಡನಹಳ್ಳಿ, ಮೇಡಿಮಲ್ಲಸಂದ್ರ, ಮಠಮಲ್ಲಸಂದ್ರ, ಕೆ.ಅರೇಹಳ್ಳಿ, ಕೆ.ಅಗ್ರಹಾರ, ಬ್ಯಾಲಹಳ್ಳಿ, ಮುತ್ತುಗದಹಳ್ಳಿ, ತತ್ತನೂರು, ಗುಂಡೂರು, ಬಾಗೂರು, ಮಾರನಗೆರೆ, ಸಿದ್ದನಪುರ, ಶಿವನಾಪುರ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯ ಆಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಗ್ರಾಹಕರು ರಿಯಲ್ ಟೈಮ್ ಅಪ್​ಡೇಟ್ ಪಡೆಯಲು ಅಥವಾ ಸಹಾಯಕ್ಕಾಗಿ, ಬೆಸ್ಕಾಂನ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಅಥವಾ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಬಹುದು ಎಂದು ಸಂಸ್ಥೆ ತಿಳಿಸಿದೆ.

ವಾಟ್ಸ್​ಆ್ಯಪ್​ನಲ್ಲೇ ವಿದ್ಯುತ್ ಸಂಬಂಧಿತ ದೂರು ಸಲ್ಲಿಸಿ

ವಿದ್ಯುತ್ ಸಂಪರ್ಕ ಸಂಬಂಧಿತ ದೂರುಗಳನ್ನು ವಾಟ್ಸ್​ಆ್ಯಪ್ ಮೂಲಕವೇ ನೀಡಬಹುದಾದ ಆಯ್ಕೆಯನ್ನೂ ಗ್ರಾಹಕರಿಗೆ ಬೆಸ್ಕಾಂ ಒದಗಿಸುತ್ತಿದೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿರುವ ಬೆಸ್ಕಾಂ, ಸಹಾಯವಾಣಿ ಸಂಖ್ಯೆಗಳ ವಿವರವನ್ನೂ ನೀಡಿದೆ.

ಬೆಸ್ಕಾಂ ಟ್ವೀಟ್

ವಿದ್ಯುತ್ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ಪ್ರಸ್ತುತ ಬೆಸ್ಕಾಂ ವಾಟ್ಸ್ಆ್ಯಪ್ ಸಹಾಯವಾಣಿ ಆರಂಭಿಸಲಾಗಿದೆ. ಬೆಸ್ಕಾಂ ವ್ಯಾಪ್ತಿಯ ಪ್ರತಿ ಜಿಲ್ಲೆಗೂ ವಿಶೇಷ ವಾಟ್ಸ್​ಆ್ಯಪ್ ಸಹಾಯವಾಣಿ ಸಂಖ್ಯೆ ಇದೆ ಎಂದಿರುವ ಬೆಸ್ಕಾಂ, ಅವುಗಳ ವಿವರವನ್ನೂ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್:ಮೈಲಾರಲಿಂಗೇಶ್ವರ ಕಾರ್ಣಿಕ
ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್:ಮೈಲಾರಲಿಂಗೇಶ್ವರ ಕಾರ್ಣಿಕ
ವಿಮಾನ ನಿಲ್ದಾಣದಲ್ಲಿ ಮೋದಿಯನ್ನು ತಬ್ಬಿ ಬೀಳ್ಕೊಟ್ಟ ಫ್ರಾನ್ಸ್​ ಅಧ್ಯಕ್ಷ
ವಿಮಾನ ನಿಲ್ದಾಣದಲ್ಲಿ ಮೋದಿಯನ್ನು ತಬ್ಬಿ ಬೀಳ್ಕೊಟ್ಟ ಫ್ರಾನ್ಸ್​ ಅಧ್ಯಕ್ಷ
ಬಾಗಪ್ಪ ಹರಿಜನ್ ಅಂತ್ಯಕ್ರಿಯೆಯಲ್ಲಿ ನೂರಾರು ಜನ ಭಾಗಿ
ಬಾಗಪ್ಪ ಹರಿಜನ್ ಅಂತ್ಯಕ್ರಿಯೆಯಲ್ಲಿ ನೂರಾರು ಜನ ಭಾಗಿ
ಬಾಗಪ್ಪನನ್ನು ಪ್ರೀತಿಸಿ ವರಿಸಿದ ಮಹಿಳೆ ಸರ್ಕಾರೀ ವಕೀಲೆಯಾಗಿದ್ದರು: ಮಹಾಂತೇಶ
ಬಾಗಪ್ಪನನ್ನು ಪ್ರೀತಿಸಿ ವರಿಸಿದ ಮಹಿಳೆ ಸರ್ಕಾರೀ ವಕೀಲೆಯಾಗಿದ್ದರು: ಮಹಾಂತೇಶ
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ತನಿಖೆ ಪದದ ವ್ಯಾಖ್ಯಾನ ಬದಲಾದಂತಿದೆ!
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ತನಿಖೆ ಪದದ ವ್ಯಾಖ್ಯಾನ ಬದಲಾದಂತಿದೆ!
ಉಡುಪಿಗೆ ಬಂದು ದೈವಕ್ಕೆ ಕೈ ಮುಗಿದ ತಮಿಳು ನಟ ವಿಶಾಲ್
ಉಡುಪಿಗೆ ಬಂದು ದೈವಕ್ಕೆ ಕೈ ಮುಗಿದ ತಮಿಳು ನಟ ವಿಶಾಲ್
ಮಾರ್ಸಿಲ್ಲೆಯಲ್ಲಿ ಭಾರತೀಯ ಕಾನ್ಸುಲೇಟ್ ಉದ್ಘಾಟನೆ; ಮೋದಿ, ಮೋದಿ ಘೋಷಣೆ
ಮಾರ್ಸಿಲ್ಲೆಯಲ್ಲಿ ಭಾರತೀಯ ಕಾನ್ಸುಲೇಟ್ ಉದ್ಘಾಟನೆ; ಮೋದಿ, ಮೋದಿ ಘೋಷಣೆ
ಜನರಿಂದ ಬಡ್ಡಿ ಪೀಕಿ ಪೀಕಿಯೇ ಯಲ್ಲಪ್ಪ ಮಿಸ್ಕಿನ್,  ಬಡ್ಡಿ ಯಲ್ಲಪ್ಪನಾದ!
ಜನರಿಂದ ಬಡ್ಡಿ ಪೀಕಿ ಪೀಕಿಯೇ ಯಲ್ಲಪ್ಪ ಮಿಸ್ಕಿನ್,  ಬಡ್ಡಿ ಯಲ್ಲಪ್ಪನಾದ!
ಪತ್ನಿಗೆ ಸಿಲ್ಕ್​ ಸೀರೆ ಖರೀದಿಸಿದ ಡಿಕೆ ಶಿವಕುಮಾರ್: ಬೆಲೆ ಎಷ್ಟು ಗೊತ್ತಾ?
ಪತ್ನಿಗೆ ಸಿಲ್ಕ್​ ಸೀರೆ ಖರೀದಿಸಿದ ಡಿಕೆ ಶಿವಕುಮಾರ್: ಬೆಲೆ ಎಷ್ಟು ಗೊತ್ತಾ?
ಫ್ರಾನ್ಸ್​ ಮಹಾಯುದ್ಧದಲ್ಲಿ ಹುತಾತ್ಮರಾದ ಸೈನಿಕರಿಗೆ ಪ್ರಧಾನಿ ಮೋದಿ ನಮನ
ಫ್ರಾನ್ಸ್​ ಮಹಾಯುದ್ಧದಲ್ಲಿ ಹುತಾತ್ಮರಾದ ಸೈನಿಕರಿಗೆ ಪ್ರಧಾನಿ ಮೋದಿ ನಮನ