ಮೂರು ವರ್ಷಗಳಲ್ಲಿ 8,000 ಕ್ಕೂ ಹೆಚ್ಚು ವಿದ್ಯುತ್ ಕಳ್ಳತನ ಪ್ರಕರಣಗಳನ್ನು ದಾಖಲಿಸಿದ ಬೆಸ್ಕಾಂ

ಮನೆಯ ದೀಪಾಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ ಪ್ರಕರಣ ಸಂಬಂಧ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರಿಗೆ 68 ಸಾವಿರ ರೂ. ದಂಡ ವಿಧಿಸಲಾಗಿತ್ತು. ಇದರ ಬೆನ್ನಲ್ಲೇ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) 2021-22 ಮತ್ತು 2023-24 ರ ನಡುವೆ 8,000 ಕ್ಕೂ ಹೆಚ್ಚು ವಿದ್ಯುತ್ ಕಳ್ಳತನ ಪ್ರಕರಣಗಳನ್ನು ದಾಖಲಿಸಿರುವುದು ತಿಳಿದುಬಂದಿದೆ.

ಮೂರು ವರ್ಷಗಳಲ್ಲಿ 8,000 ಕ್ಕೂ ಹೆಚ್ಚು ವಿದ್ಯುತ್ ಕಳ್ಳತನ ಪ್ರಕರಣಗಳನ್ನು ದಾಖಲಿಸಿದ ಬೆಸ್ಕಾಂ
ಮೂರು ವರ್ಷಗಳಲ್ಲಿ 8,000 ಕ್ಕೂ ಹೆಚ್ಚು ವಿದ್ಯುತ್ ಕಳ್ಳತನ ಪ್ರಕರಣಗಳನ್ನು ದಾಖಲಿಸಿದ ಬೆಸ್ಕಾಂ (ಸಾಂದರ್ಭಿಕ ಚಿತ್ರ)
Follow us
| Edited By: Rakesh Nayak Manchi

Updated on: Nov 19, 2023 | 3:07 PM

ಬೆಂಗಳೂರು, ನ.19: ಕಳೆದ ಮೂರು ವರ್ಷಗಳಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) 8,000 ಕ್ಕೂ ಹೆಚ್ಚು ವಿದ್ಯುತ್ ಕಳ್ಳತನ ಪ್ರಕರಣಗಳನ್ನು ದಾಖಲಿಸಿ 33 ಕೋಟಿ ರೂ.ಗೂ ಹೆಚ್ಚು ದಂಡವನ್ನು ವಸೂಲಿ ಮಾಡಿದೆ. ಮನೆಯ ದೀಪಾಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ ಪ್ರಕರಣ ಸಂಬಂಧ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರಿಗೆ 68 ಸಾವಿರ ರೂ. ದಂಡ ವಿಧಿಸಿದ ನಂತರ ಈ ವಿಚಾರ ಬಹಿರಂಗವಾಗಿದೆ.

ಬೆಸ್ಕಾಂನ ಹಿರಿಯ ಅಧಿಕಾರಿಯ ಪ್ರಕಾರ, ವಿದ್ಯುತ್ ಕಳ್ಳತನದ ಅಡಿಯಲ್ಲಿ ಬಿಲ್ ಬಾಕಿ ಪ್ರಕರಣಗಳು (ಬಿಬಿಸಿ) ಮತ್ತು ಕಾಂಪೌಂಡಿಂಗ್ (ಕೋರ್ಟ್​ನಲ್ಲಿ ವಿಚಾರಣೆಯಲ್ಲಿರುವ ಪ್ರಕರಣಗಳು) ಪ್ರಕರಣಗಳು (ಸಿಸಿ) ಎಂಬ ಎರಡು ರೀತಿಯ ಪ್ರಕರಣಗಳನ್ನು ದಾಖಲಿಸಲಾಗಿದೆ. ಬಿಬಿಸಿಗಳ ಮೂಲಕ ಸಂಗ್ರಹಿಸಲಾದ ದಂಡವು ಬೆಸ್ಕಾಂಗೆ ಹೋದರೆ, ಉಳಿದ ಪಕ್ರರಣಗಳ ದಂಡದ ಮೊತ್ತ ಸರ್ಕಾರಕ್ಕೆ ಹೋಗುತ್ತದೆ.

ಇತ್ತೀಚೆಗಷ್ಟೇ, ಮನೆ ದೀಪಾಲಂಕಾರಕ್ಕಾಗಿ ಅಕ್ರಮವಾಗಿ ದಾರಿದೀಪ ಕಂಬದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಅವರ ವಿರುದ್ಧ ವಿದ್ಯುತ್ ಕಳ್ಳತನ ಪ್ರಕರಣ ದಾಖಲಾಗಿತ್ತು. ಇವರ ವಿರುದ್ಧ ಎಫ್​ಐಆರ್ ದಾಖಲಿಸಿ 68 ಸಾವಿರ ರೂ.ಗೂ ಅಧಿಕ ದಂಡ ವಿಧಿಸಲಾಗಿತ್ತು.

ಇದನ್ನೂ ಓದಿ: ಅಕ್ರಮ ವಿದ್ಯುತ್ ಸಂಪರ್ಕ: ಬೆಸ್ಕಾಂಗೆ ದಂಡ ಪಾವತಿಸಿದ ಹೆಚ್​​ಡಿ ಕುಮಾರಸ್ವಾಮಿ, ಎಷ್ಟು ಗೊತ್ತಾ?

ಆದರೆ, 71 ಯುನಿಟ್​ಗೆ ಮೂರು ಪಟ್ಟು ದಂಡ ವಿಧಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಕುಮಾರಸ್ವಾಮಿ ಆರೋಪಿಸಿದ್ದರು. ಇವರ ವಿರುದ್ಧ ಕಾಂಪೌಂಡ್ ಪ್ರಕರಣ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ ಎಂದು ಸುದ್ದಿ ಸಂಸ್ಥೆ ದಿ ಹಿಂದೂ ವರದಿ ಮಾಡಿದೆ.

FY (ಹಣಕಾಸು ವರ್ಷ) 2021-22 ರಲ್ಲಿ, ಬೆಸ್ಕಾಂ 3,369 BBC ಮತ್ತು 797 CC ಪ್ರಕರಣಗಳನ್ನು ದಾಖಲಿಸಿ 13.92 ಕೋಟಿ ರೂ. ದಂಡವನ್ನು ಸಂಗ್ರಹಿಸಿದೆ. FY 2022-23 ರಲ್ಲಿ 2,268 BBC ಮತ್ತು 560 CC ಪ್ರಕರಣಗಳನ್ನು ದಾಖಲಿಸಿ 12 ಕೋಟಿ ರೂ. ದಂಡವನ್ನು ಸಂಗ್ರಹಿಸಲಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಅಕ್ಟೋಬರ್ 31 ರ ವರೆಗೆ, 955 ಬಿಬಿಸಿ ಪ್ರಕರಣಗಳು ಮತ್ತು 235 ಸಿಸಿ ಅಡಿ ಪ್ರಕರಣಗಳನ್ನು ದಾಖಲಿಸಿ 6.55 ಕೋಟಿ ರೂ. ದಂಡವನ್ನು ಸಂಗ್ರಹಿಸಲಾಗಿದೆ ಎಂದು ಬೆಸ್ಕಾಂ ಒದಗಿಸಿದ ಅಂಕಿಅಂಶಗಳು ತಿಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ