AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Electricity Rate Hike: ವಿದ್ಯುತ್ ದರ ಏರಿಕೆಗೆ ಎಸ್ಕಾಂ ಪ್ರಸ್ತಾವನೆ: ಬೆಸ್ಕಾಂ ಹಾಗೂ ಇಂಧನ ಇಲಾಖೆ ನಡೆಗೆ FKCCI ವಿರೋಧ

ವಿದ್ಯುತ್​ ದರ ಏರಿಕೆಗೆ ಎಸ್ಕಾಂ ಪ್ರಸ್ತಾವನೆ ಸಲ್ಲಿಕೆ ವಿಚಾರವಾಗಿ FKCCI ಅಧ್ಯಕ್ಷ ‌ಗೋಪಾಲ್ ರೆಡ್ಡಿ ಮಾತನಾಡಿ, ವಿದ್ಯುತ್ ದರ ಏರಿಕೆಯ ಎಸ್ಕಾಂ ಪ್ರಸ್ತಾವನೆಗೆ FKCCI ವಿರೋಧವಿದೆ ಎಂದು ಹೇಳಿದರು.

Electricity Rate Hike: ವಿದ್ಯುತ್ ದರ ಏರಿಕೆಗೆ ಎಸ್ಕಾಂ ಪ್ರಸ್ತಾವನೆ: ಬೆಸ್ಕಾಂ ಹಾಗೂ ಇಂಧನ ಇಲಾಖೆ ನಡೆಗೆ FKCCI ವಿರೋಧ
ಎಸ್ಕಾಂ ನಡೆ ವಿರೋಧಿಸಿ FKCCI ನಿಂದ ಪತ್ರಿಕಾಗೋಷ್ಠಿ
TV9 Web
| Edited By: |

Updated on: Jan 14, 2023 | 3:52 PM

Share

ಬೆಂಗಳೂರು: ಇತ್ತೀಚೆಗೆ ಇಂಧನ ಸಚಿವರು ಹೊಸ ವರ್ಷಕ್ಕೆ ವಿದ್ಯುತ್​ ದರ (Electricity Rate Hike) ಇಳಿಕೆಯ ಬಗ್ಗೆ ಸುಳಿವು ನೀಡಿದ್ದರು. ಆದರೆ ಇದಕ್ಕೆ ವಿರುದ್ಧವೆನ್ನುವಂತೆ ವಿದ್ಯುತ್​ ಸರಬರಾಜು ಕಂಪನಿ (ಎಸ್ಕಾಂ) ದರ ಏರಿಕೆ ಕುರಿತಾಗಿ ಸರ್ಕಾರಕ್ಕೆ ಅನುಮತಿ ಕೋರಿತ್ತು. ಸದ್ಯ ಈ ವಿಚಾರವಾಗಿ ಬೆಂಗಳೂರಿನಲ್ಲಿ ಕರ್ನಾಟಕ ವಾಣಿಜ್ಯ ಹಾಗೂ ಕೈಗಾರಿಕಾ ಮಹಾಸಂಸ್ಥೆ (FKCCI) ಅಧ್ಯಕ್ಷ ‌ಗೋಪಾಲ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ವಿದ್ಯುತ್ ದರ ಏರಿಕೆಯ ಎಸ್ಕಾಂ ಪ್ರಸ್ತಾವನೆಗೆ FKCCI ವಿರೋಧ ಇದೆ. ವಿದ್ಯುತ್ ದರ ಏರಿಕೆ ಮಾಡದಂತೆ ಸರ್ಕಾರಕ್ಕೆ ಆಗ್ರಹಿಸುತ್ತೇವೆ. ಇದು ವರ್ಷದಲ್ಲಿ ಮೂರು ಬಾರಿ ವಿದ್ಯುತ್ ದರ ಏರಿಕೆ ಆಗುತ್ತಿದೆ. ವಿದ್ಯುತ್ ದರ ಏರಿಕೆಯಿಂದ ಕೈಗಾರಿಕೆಗಳಿಗೆ ಆರ್ಥಿಕ ಹೊರೆ ಆಗುತ್ತದೆ. ಪದೇ ಪದೆ ದರ ಏರಿಕೆ ಮಾಡಿದ್ರೆ ಕೈಗಾರಿಕೆಗಳು ಮುಚ್ಚಬೇಕಾಗುತ್ತೆ ಎಂದು ಹೇಳಿದರು.

ಕಾಂಗ್ರೆಸ್ ನಾಯಕರು ಜನರನ್ನು ಯಾಮಾರಿಸುವ ಕೆಲಸ: ಸಿಎಂ ಬೊಮ್ಮಾಯಿ

ಇನ್ನು ಉಚಿತವಾಗಿ ವಿದ್ಯುತ್​ ನೀಡುವುದಾಗಿ ಕಾಂಗ್ರೆಸ್ ಭರವಸೆ ವಿಚಾರವಾಗಿ ದಾವಣಗೆರೆಯಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ನಾಯಕರು ಜನರನ್ನು ಯಾಮಾರಿಸುವ ಕೆಲಸ ಮಾಡ್ತಿದ್ದಾರೆ. ಉಚಿತ ವಿದ್ಯುತ್​​ ಅಸಾಧ್ಯ ಎಂಬುದು ಗೊತ್ತಿದೆ. ಆದರೂ ಹೇಳುತ್ತಿದ್ದಾರೆ. ಕಾಂಗ್ರೆಸ್​​ನವರು ಕೇಜ್ರಿವಾಲ್ ದಾರಿಯಲ್ಲಿ ಹೋಗುತ್ತಿದ್ದಾರೆ ಹೋಗಲಿ. SC, ST ಸಮುದಾಯಕ್ಕೆ ಉಚಿತ ವಿದ್ಯುತ್ ಯೋಜನೆ ಜಾರಿ ಮಾಡಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಉಚಿತ ವಿದ್ಯುತ್​ ಕಾಂಗ್ರೆಸ್​ನ ಸುಳ್ಳು ಭರವಸೆ: ಇಂಧನ ಇಲಾಖೆಯನ್ನು ಖಾಸಗೀಕರಣ ಮಾಡುವ ಹುನ್ನಾರವೆಂದ ಸಚಿವ ಸುನೀಲ್ ಕುಮಾರ್

ಇದ್ಯಾವ ಸೀಮೆ ನ್ಯಾಯ?

ವಿದ್ಯುತ್ ಚ್ಛಕ್ತಿ ನಿಗಮದ ಸಿಬ್ಬಂದಿ ವರ್ಗಕ್ಕೆ ಕೊಡಬೇಕಾಗಿರುವ ನಿವೃತ್ತಿ ವೇತನದ ಬಾಬ್ತನ್ನು ವಿದ್ಯುತ್ ಚ್ಛಕ್ತಿ ಗ್ರಾಹಕರ ಬಳಕೆಯ ಮೇಲೆ ಹಾಕಲು ಸರ್ಕಾರ ಆದೇಶಿಸಿದೆ. ಜೊತೆಗೆ ತಣ್ಣೀರು ಬಾವಿ ಬಾಬ್ತಿಗೆ ಸಂಬಂಧಪಟ್ಟಂತೆ 1,657 ಕೋಟಿ ಬಾಬ್ತಾನ್ನು ಗ್ರಾಹಕರಿಗೆ ಟಾರೀಫ್ ಮೂಲಕ ಸಂಗ್ರಹಿಸಲು ಸಹ ಆದೇಶಿಸಿದೆ. ಈ ಹೊರೆಯನ್ನು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಮುಂದೆ ವಿದ್ಯುತ್ ಸರಬರಾಜು ಕಂಪನಿಗಳ ಮುಂದೆ ಇಟ್ಟಿರುತ್ತೆ. ಇದು ಒಂದು ರೀತಿಯಲ್ಲಿ ಇಂಧನ ಇಲಾಖೆಯ ಹಗಲು ದರೋಡೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇದನ್ನೂ ಓದಿ: ಕಾಂಗ್ರೆಸ್​ ಅಧಿಕಾರಕ್ಕೆ ಬಂದ್ರೆ ಉಚಿತ ವಿದ್ಯುತ್​, ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆ: ಡಿಕೆ ಶಿವಕುಮಾರ್ ಘೋಷಣೆ

ಕಾಂಗ್ರೆಸ್​ ಉಚಿತ ವಿದ್ಯುತ್​​ಗೆ ಸಚಿವ ಸುನೀಲ್ ಕುಮಾರ್ ಟಾಂಗ್ 

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಎಲ್ಲಾ ಎಸ್ಕಾಂಗಳು ದಿವಾಳಿಯಾಗಿದ್ದವು. ಬೊಮ್ಮಾಯಿ ಸಿಎಂ ಆದ ನಂತರ 9 ಸಾವಿರ ಕೋಟಿ ರೂ. ನೀಡಿದ್ದೇವೆ. ಎಸ್ಕಾಂ ದಿವಾಳಿ ಮಾಡಿದ ಸಿದ್ದರಾಮಯ್ಯ ಸುಳ್ಳು ಭರವಸೆ ನೀಡ್ತಿದ್ದಾರೆ. ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್​ ನೀಡುವುದಾಗಿ ಹೇಳುತ್ತಿದ್ದಾರೆ. ಇದರಲ್ಲಿ ಇಂಧನ ಇಲಾಖೆಯನ್ನು ಖಾಸಗೀಕರಣ ಮಾಡುವ ಹುನ್ನಾರ ಅಡಗಿದೆ. ಈಗಾಗಲೇ ಸಬ್ಸಿಡಿ ರೂಪದಲ್ಲಿ ಸರ್ಕಾರ 16,000 ಕೋಟಿ ರೂ. ನೀಡ್ತಿದೆ. ನಮ್ಮ ಸರ್ಕಾರ ಈ ಆರ್ಥಿಕ ನಷ್ಟವನ್ನು ಸರಿದೂಗಿಸುವ ಕೆಲಸ ಮಾಡಿದೆ ಎಂದು ಉಡುಪಿಯಲ್ಲಿ ಇಂಧನ ಇಲಾಖೆ ಸಚಿವ ಸುನೀಲ್ ಕುಮಾರ್ ಟಾಂಗ್ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ