ಬೆಂಗಳೂರು: ಇತ್ತೀಚೆಗೆ ಇಂಧನ ಸಚಿವರು ಹೊಸ ವರ್ಷಕ್ಕೆ ವಿದ್ಯುತ್ ದರ (Electricity Rate Hike) ಇಳಿಕೆಯ ಬಗ್ಗೆ ಸುಳಿವು ನೀಡಿದ್ದರು. ಆದರೆ ಇದಕ್ಕೆ ವಿರುದ್ಧವೆನ್ನುವಂತೆ ವಿದ್ಯುತ್ ಸರಬರಾಜು ಕಂಪನಿ (ಎಸ್ಕಾಂ) ದರ ಏರಿಕೆ ಕುರಿತಾಗಿ ಸರ್ಕಾರಕ್ಕೆ ಅನುಮತಿ ಕೋರಿತ್ತು. ಸದ್ಯ ಈ ವಿಚಾರವಾಗಿ ಬೆಂಗಳೂರಿನಲ್ಲಿ ಕರ್ನಾಟಕ ವಾಣಿಜ್ಯ ಹಾಗೂ ಕೈಗಾರಿಕಾ ಮಹಾಸಂಸ್ಥೆ (FKCCI) ಅಧ್ಯಕ್ಷ ಗೋಪಾಲ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ವಿದ್ಯುತ್ ದರ ಏರಿಕೆಯ ಎಸ್ಕಾಂ ಪ್ರಸ್ತಾವನೆಗೆ FKCCI ವಿರೋಧ ಇದೆ. ವಿದ್ಯುತ್ ದರ ಏರಿಕೆ ಮಾಡದಂತೆ ಸರ್ಕಾರಕ್ಕೆ ಆಗ್ರಹಿಸುತ್ತೇವೆ. ಇದು ವರ್ಷದಲ್ಲಿ ಮೂರು ಬಾರಿ ವಿದ್ಯುತ್ ದರ ಏರಿಕೆ ಆಗುತ್ತಿದೆ. ವಿದ್ಯುತ್ ದರ ಏರಿಕೆಯಿಂದ ಕೈಗಾರಿಕೆಗಳಿಗೆ ಆರ್ಥಿಕ ಹೊರೆ ಆಗುತ್ತದೆ. ಪದೇ ಪದೆ ದರ ಏರಿಕೆ ಮಾಡಿದ್ರೆ ಕೈಗಾರಿಕೆಗಳು ಮುಚ್ಚಬೇಕಾಗುತ್ತೆ ಎಂದು ಹೇಳಿದರು.
ಇನ್ನು ಉಚಿತವಾಗಿ ವಿದ್ಯುತ್ ನೀಡುವುದಾಗಿ ಕಾಂಗ್ರೆಸ್ ಭರವಸೆ ವಿಚಾರವಾಗಿ ದಾವಣಗೆರೆಯಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ನಾಯಕರು ಜನರನ್ನು ಯಾಮಾರಿಸುವ ಕೆಲಸ ಮಾಡ್ತಿದ್ದಾರೆ. ಉಚಿತ ವಿದ್ಯುತ್ ಅಸಾಧ್ಯ ಎಂಬುದು ಗೊತ್ತಿದೆ. ಆದರೂ ಹೇಳುತ್ತಿದ್ದಾರೆ. ಕಾಂಗ್ರೆಸ್ನವರು ಕೇಜ್ರಿವಾಲ್ ದಾರಿಯಲ್ಲಿ ಹೋಗುತ್ತಿದ್ದಾರೆ ಹೋಗಲಿ. SC, ST ಸಮುದಾಯಕ್ಕೆ ಉಚಿತ ವಿದ್ಯುತ್ ಯೋಜನೆ ಜಾರಿ ಮಾಡಿದ್ದೇವೆ ಎಂದು ತಿಳಿಸಿದರು.
ಇದನ್ನೂ ಓದಿ: ಉಚಿತ ವಿದ್ಯುತ್ ಕಾಂಗ್ರೆಸ್ನ ಸುಳ್ಳು ಭರವಸೆ: ಇಂಧನ ಇಲಾಖೆಯನ್ನು ಖಾಸಗೀಕರಣ ಮಾಡುವ ಹುನ್ನಾರವೆಂದ ಸಚಿವ ಸುನೀಲ್ ಕುಮಾರ್
ವಿದ್ಯುತ್ ಚ್ಛಕ್ತಿ ನಿಗಮದ ಸಿಬ್ಬಂದಿ ವರ್ಗಕ್ಕೆ ಕೊಡಬೇಕಾಗಿರುವ ನಿವೃತ್ತಿ ವೇತನದ ಬಾಬ್ತನ್ನು ವಿದ್ಯುತ್ ಚ್ಛಕ್ತಿ ಗ್ರಾಹಕರ ಬಳಕೆಯ ಮೇಲೆ ಹಾಕಲು ಸರ್ಕಾರ ಆದೇಶಿಸಿದೆ. ಜೊತೆಗೆ ತಣ್ಣೀರು ಬಾವಿ ಬಾಬ್ತಿಗೆ ಸಂಬಂಧಪಟ್ಟಂತೆ 1,657 ಕೋಟಿ ಬಾಬ್ತಾನ್ನು ಗ್ರಾಹಕರಿಗೆ ಟಾರೀಫ್ ಮೂಲಕ ಸಂಗ್ರಹಿಸಲು ಸಹ ಆದೇಶಿಸಿದೆ. ಈ ಹೊರೆಯನ್ನು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಮುಂದೆ ವಿದ್ಯುತ್ ಸರಬರಾಜು ಕಂಪನಿಗಳ ಮುಂದೆ ಇಟ್ಟಿರುತ್ತೆ. ಇದು ಒಂದು ರೀತಿಯಲ್ಲಿ ಇಂಧನ ಇಲಾಖೆಯ ಹಗಲು ದರೋಡೆ ಎಂಬ ಮಾತುಗಳು ಕೇಳಿಬರುತ್ತಿವೆ.
ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಉಚಿತ ವಿದ್ಯುತ್, ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆ: ಡಿಕೆ ಶಿವಕುಮಾರ್ ಘೋಷಣೆ
ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಎಲ್ಲಾ ಎಸ್ಕಾಂಗಳು ದಿವಾಳಿಯಾಗಿದ್ದವು. ಬೊಮ್ಮಾಯಿ ಸಿಎಂ ಆದ ನಂತರ 9 ಸಾವಿರ ಕೋಟಿ ರೂ. ನೀಡಿದ್ದೇವೆ. ಎಸ್ಕಾಂ ದಿವಾಳಿ ಮಾಡಿದ ಸಿದ್ದರಾಮಯ್ಯ ಸುಳ್ಳು ಭರವಸೆ ನೀಡ್ತಿದ್ದಾರೆ. ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್ ನೀಡುವುದಾಗಿ ಹೇಳುತ್ತಿದ್ದಾರೆ. ಇದರಲ್ಲಿ ಇಂಧನ ಇಲಾಖೆಯನ್ನು ಖಾಸಗೀಕರಣ ಮಾಡುವ ಹುನ್ನಾರ ಅಡಗಿದೆ. ಈಗಾಗಲೇ ಸಬ್ಸಿಡಿ ರೂಪದಲ್ಲಿ ಸರ್ಕಾರ 16,000 ಕೋಟಿ ರೂ. ನೀಡ್ತಿದೆ. ನಮ್ಮ ಸರ್ಕಾರ ಈ ಆರ್ಥಿಕ ನಷ್ಟವನ್ನು ಸರಿದೂಗಿಸುವ ಕೆಲಸ ಮಾಡಿದೆ ಎಂದು ಉಡುಪಿಯಲ್ಲಿ ಇಂಧನ ಇಲಾಖೆ ಸಚಿವ ಸುನೀಲ್ ಕುಮಾರ್ ಟಾಂಗ್ ನೀಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.