AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Bandh: ಭಾರತ್ ಬಂದ್ ದಿನ ನಡೆಯಬೇಕಿದ್ದ ಬೆಂಗಳೂರು ನಗರ ವಿವಿಯ ಎಲ್ಲ ಪರೀಕ್ಷೆ ಮುಂದೂಡಿಕೆ

ಮುಂದಿನ ಆದೇಶದವರೆಗೂ ಪರೀಕ್ಷೆ ಮುಂದೂಡಿ ವಿಶ್ವವಿದ್ಯಾಲಯ ಆದೇಶ ಪ್ರಕಟಿಸಿದೆ.

Bharat Bandh: ಭಾರತ್ ಬಂದ್ ದಿನ ನಡೆಯಬೇಕಿದ್ದ ಬೆಂಗಳೂರು ನಗರ ವಿವಿಯ ಎಲ್ಲ ಪರೀಕ್ಷೆ ಮುಂದೂಡಿಕೆ
ಬೆಂಗಳೂರು ನಗರ ವಿಶ್ವವಿದ್ಯಾಲಯ
TV9 Web
| Updated By: guruganesh bhat|

Updated on:Sep 26, 2021 | 6:33 PM

Share

ಬೆಂಗಳೂರು: ನಾಳೆ ಸೋಮವಾರ (ಸೆಪ್ಟೆಂಬರ್ 27) ಭಾರತ್ ಬಂದ್ ಘೋಷಣೆಯಾಗಿರುವ ಬೆನ್ನಲ್ಲೇ ನಾಳೆ ನಡೆಯಬೇಕಿದ್ದ ಬೆಂಗಳೂರು ನಗರ ವಿಶ್ವವಿದ್ಯಾಲಯದ ಎಲ್ಲ ಪರೀಕ್ಷೆಗಳು ಮುಂದೂಡಲಾಗಿದೆ. ಮುಂದಿನ ಆದೇಶದವರೆಗೂ ಪರೀಕ್ಷೆ ಮುಂದೂಡಿ ವಿಶ್ವವಿದ್ಯಾಲಯ ಆದೇಶ ಪ್ರಕಟಿಸಿದೆ. ಸದ್ಯ ಪದವಿ, ಸ್ನಾತಕೋತ್ತರ, Bed ಪರೀಕ್ಷೆಗಳು ಮುಂದೂಡಲ್ಪಟ್ಟಿದ್ದಾಗಿ ಬೆಂಗಳೂರು ನಗರ ವಿಶ್ವವಿದ್ಯಾಲಯ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ನಾಳೆ (ಸೆಪ್ಟೆಂಬರ್ 27) ಭಾರತ್​ ಬಂದ್​​ ಹಿನ್ನೆಲೆ ಟ್ರಾಫಿಕ್​ ಜಾಮ್ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ನಾಳೆ ಹೆಚ್ಚು ಟ್ರಾಫಿಕ್​ ಜಾಮ್​ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಪ್ರತಿಭಟನಾ ಮೆರವಣಿಗೆ ಮೈಸೂರು ರಸ್ತೆ, ಕೆ.ಆರ್. ಪುರಂ, ಮಾಗಡಿ ರಸ್ತೆ, ಹೊಸೂರು ರಸ್ತೆಯಿಂದ ಬರಲಿದೆ. ಅಲ್ಲದೆ ಬೆಂಗಳೂರಿನಲ್ಲಿ ವಿವಿಧ ಕಾಮಗಾರಿಗಳು ನಡೆಯುತ್ತಿದ್ದು, ಕಾಮಗಾರಿಗಳ ಜತೆಗೆ ಮೆರವಣಿಗೆ ಹಿನ್ನೆಲೆ ಟ್ರಾಫಿಕ್​ ಜಾಮ್ ಆಗುವ ಸಂಭವವಿದೆ. ಬೇರೆ ಭಾಗಗಳಿಂದ ಬೆಂಗಳೂರಿಗೆ ಬರುವವರು ಎಚ್ಚರ ವಹಿಸಬೇಕು ಎಂದು ತಿಳಿಸಲಾಗಿದೆ.

ಬೆಂಗಳೂರು: ಬೆಂಗಳೂರಿನಾದ್ಯಂತ ಪೊಲೀಸರಿಂದ ಹೈಅಲರ್ಟ್‌ ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ನಾಳೆ ಭಾರತ್ ಬಂದ್ ನಡೆಯಲಿದೆ. ನಾಳೆ ಬೆಂಗಳೂರಿನಾದ್ಯಂತ ಪೊಲೀಸರಿಂದ ಹೈಅಲರ್ಟ್‌ ಘೋಷಿಸಲಾಗಿದೆ. ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ 12 ಡಿಸಿಪಿ, ಎಲ್ಲಾ ಎಸಿಪಿಗಳು, 120ಕ್ಕೂ ಹೆಚ್ಚು ಇನ್ಸ್‌ಪೆಕ್ಟರ್‌ಗಳು, 150ಕ್ಕೂ ಹೆಚ್ಚು ಸಬ್‌ ಇನ್ಸ್‌ಪೆಕ್ಟರ್‌ಗಳು ಸೇರಿದಂತೆ, ಭದ್ರತೆಗಾಗಿ ನಾಳೆ 5 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ.

ಮುಂಜಾನೆ 5 ಗಂಟೆಯಿಂದಲೇ ಪೊಲೀಸರ ನಿಯೋಜನೆ ಮಾಡಲಾಗಿದೆ. ಪ್ರತಿ ವಿಭಾಗದಲ್ಲಿ ಡಿಸಿಪಿಗಳ ನೇತೃತ್ವದಲ್ಲಿ ಬಂದೋಬಸ್ತ್‌ ಮಾಡಲಾಗಿದೆ. ನಗರದ ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಫ್ರೀಡಂಪಾರ್ಕ್‌, ಟೌನ್‌ಹಾಲ್‌ನಲ್ಲಿ ಹೆಚ್ಚುವರಿ ಭದ್ರತೆ ಇದೆ. ಹೆಚ್ಚುವರಿಯಾಗಿ ಕೆಎಸ್​ಆರ್​ಪಿ, ಸಿಎಆರ್ ತುಕಡಿ ನಿಯೋಜನೆ ಮಾಡಲಾಗಿದೆ.

ಸಾರ್ವಜನಿಕರ ದೈನಂದಿನ ಕೆಲಸಕ್ಕೆ ಅಡ್ಡಿಪಡಿಸುವಂತಿಲ್ಲ. ನಾಳೆ ಯಾವುದೇ ರಸ್ತೆ ತಡೆಗಳಿಗೆ ಅನುಮತಿ ನೀಡಿಲ್ಲ. ಈವರೆಗೂ ಯಾರೂ ಮೆರವಣಿಗೆಗೆ ಅನುಮತಿ ಕೇಳಿಲ್ಲ. ಪ್ರತಿಭಟನೆ ಹೆಸರಿನಲ್ಲಿ ನಿಯಮ ಉಲ್ಲಂಘಿಸುವಂತಿಲ್ಲ. ದುಷ್ಕೃತ್ಯಗಳಲ್ಲಿ ಭಾಗಿಯಾದ್ರೆ ಪೊಲೀಸರಿಂದ ಕಠಿಣ ಕ್ರಮ ಎಂಬ ಸೂಚನೆ ನೀಡಲಾಗಿದೆ.

ಭಾರತ್ ಬಂದ್​ಗೆ ಕಾಂಗ್ರೆಸ್‌ ಪಕ್ಷದ ಬೆಂಬಲ ಇದೆ ಭಾರತ್ ಬಂದ್‌ಗೆ ಕಾಂಗ್ರೆಸ್‌ ಪಕ್ಷದ ಬೆಂಬಲ ಇದೆ. ನಾಳೆ ಕೇಂದ್ರದ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ನಾಳೆ ರೈತರ ಪ್ರತಿಭಟನೆಗೆ ಕಾಂಗ್ರೆಸ್‌ ಬೆಂಬಲ ಇದೆ. ಕಳೆದ ಒಂದು ವರ್ಷದಿಂದ ರೈತರು ಹೋರಾಟ ಮಾಡ್ತಿದ್ದಾರೆ. ಬದುಕಲು ಬಿಡಿ ಅಂತ ರೈತರು ಹೋರಾಟ ಮಾಡುತ್ತಿದ್ದಾರೆ. ಆದ್ರೆ ಪ್ರಧಾನಿ ಈವರೆಗೆ ರೈತರನ್ನು ಭೇಟಿಯಾಗಿ ಚರ್ಚಿಸಿಲ್ಲ ಎಂದು ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ನಾಳೆ ನಡೆಯುವ ಭಾರತ್ ಬಂದ್​ಗೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಬೆಂಬಲಿಸಲು ಬೆಂಗಳೂರಿನಲ್ಲಿ ಕೋಡಿಹಳ್ಳಿ ಚಂದ್ರಶೇಖರ್‌ ಮನವಿ ಮಾಡಿದ್ದಾರೆ. ಪ್ರಮುಖ ಮಾರ್ಗಗಳಲ್ಲಿ ತೆರೆದ ವಾಹನದಲ್ಲಿ ತೆರಳಿ ಮನವಿ ಮಾಡಿದ್ದಾರೆ.

ಭಾರತ್ ಬಂದ್​ಗೆ ಬೆಂಬಲ ಸೂಚಿಸಿ ಪ್ರತಿಭಟನೆಗೆ ಕಾಂಗ್ರೆಸ್ ಕಿಸಾನ್ ಘಟಕ ಸಾಥ್ ನೀಡಲಿದೆ ಎಂದು ತಿಳಿಸಲಾಗಿದೆ. ಬೆಂಗಳೂರಿನ ನಾಲ್ಕು ಕಡೆಗಳಲ್ಲಿ ಕಿಸಾನ್ ಕಾಂಗ್ರೆಸ್ ಬೆಳಗ್ಗೆ ಪ್ರತಿಭಟನೆ, ರಸ್ತೆ ತಡೆ ನಡೆಸಲಿದೆ. ಚಂದಾಪುರ, ಹೊಸಕೋಟೆ, ಕನಕಪುರ ರಸ್ತೆ, ಯಶವಂತಪುರ ಎಪಿಎಂಸಿ ಎದುರು ರಸ್ತೆ ತಡೆಗೆ ನಿರ್ಧಾರ ಮಾಡಲಾಗಿದೆ.

ಇದನ್ನೂ ಓದಿ: 

ದೇಸಾಯಿವಾಡೆ: ಶಂಕರ್ ನಾಗ್ ಅವರ ಜೋಕುಮಾರ ಸ್ವಾಮಿ ಚಿತ್ರ ಶೂಟಿಂಗ್ ನಡೆದದ್ದು ಇಲ್ಲೇ

Sneha Dubey: ಕಾಶ್ಮೀರದ ಪ್ರಸ್ತಾಪವೆತ್ತಿದ ಪಾಕ್​ ಪ್ರಧಾನಿಗೆ ಕಟು ಉತ್ತರ ಕೊಟ್ಟ ಸ್ನೇಹಾ ದುಬೆ ಯಾರು? ಚಿಕ್ಕವಯಸ್ಸಿನ ಅಧಿಕಾರಿ ಬಗ್ಗೆ ಇಲ್ಲಿದೆ ಮಾಹಿತಿ (Bharat Bandh September 27 Bengaluru City University exams are postponed)

Published On - 6:24 pm, Sun, 26 September 21

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ