AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಅಹಿಂದ ಸಮಾವೇಶಕ್ಕೆ ಕೌಂಟರ್ ಕೊಡಲು ಬಿಜೆಪಿಯಿಂದ ಭೀಮ ಸಮಾವೇಶ

ಮಧ್ಯ ಕರ್ನಾಟಕದಲ್ಲೇ ಫೆಬ್ರವರಿಯಲ್ಲಿ ರಾಜ್ಯ ಮಟ್ಟದ ಭೀಮ ಸಮಾವೇಶ ಆಯೋಜನೆ ಮಾಡಲು ಬಿಜೆಪಿ ಚಿಂತಿಸುತ್ತಿದೆ. ಲೋಕಸಭಾ ಚುನಾವಣೆಗೆ ದಲಿತ ಮತಗಳನ್ನು ಸೆಳೆಯಲು ತಂತ್ರ ಹೆಣೆಯುತ್ತಿದೆ. ಕಾಂಗ್ರೆಸ್ ಸಮಾವೇಶಕ್ಕೆ ಪ್ರತಿಯಾಗಿ ಬಿಜೆಪಿ ಕೂಡ ಸಮಾವೇಶ ನಡೆಸಲು ಮುಂದಾಗಿದೆ.

ಕಾಂಗ್ರೆಸ್ ಅಹಿಂದ ಸಮಾವೇಶಕ್ಕೆ ಕೌಂಟರ್ ಕೊಡಲು ಬಿಜೆಪಿಯಿಂದ ಭೀಮ ಸಮಾವೇಶ
ಬಿಜೆಪಿ
ಕಿರಣ್​ ಹನಿಯಡ್ಕ
| Updated By: ಆಯೇಷಾ ಬಾನು|

Updated on: Jan 06, 2024 | 9:52 AM

Share

ಬೆಂಗಳೂರು, ಜ.06: ಕಾಂಗ್ರೆಸ್(Congress) ಪಕ್ಷದ ಅಹಿಂದ ಸಮಾವೇಶಕ್ಕೆ ಕೌಂಟರ್ ಕೊಡಲು ರಾಜ್ಯ ಬಿಜೆಪಿ (BJP Karnataka) ಮುಂದಾಗಿದೆ. ದಲಿತ (dalit) ಸಮುದಾಯವನ್ನು ಸೆಳೆಯಲು ಬಿಜೆಪಿ ಪ್ಲಾನ್ ಮಾಡಿಕೊಂಡಿದ್ದು ಜಿಲ್ಲಾ ಮಟ್ಟದಲ್ಲಿ ಭೀಮ ಸಮಾವೇಶ (Bheema Samavesha) ನಡೆಸಲು ಬಿಜೆಪಿ ನಿರ್ಧಾರ ಮಾಡಿದೆ. ರಾಜ್ಯದಲ್ಲಿ ಈ ತಿಂಗಳಲ್ಲೇ ಜಿಲ್ಲಾ ಮಟ್ಟದಲ್ಲಿ ಭೀಮ ಸಮಾವೇಶ ನಡೆಸಲು ತಯಾರಿ ಶುರು ಮಾಡಿದೆ.

ಮಧ್ಯ ಕರ್ನಾಟಕದಲ್ಲೇ ಫೆಬ್ರವರಿಯಲ್ಲಿ ರಾಜ್ಯ ಮಟ್ಟದ ಭೀಮ ಸಮಾವೇಶ ಆಯೋಜನೆ ಮಾಡಲು ಬಿಜೆಪಿ ಚಿಂತಿಸುತ್ತಿದೆ. ಲೋಕಸಭಾ ಚುನಾವಣೆಗೆ ದಲಿತ ಮತಗಳನ್ನು ಸೆಳೆಯಲು ತಂತ್ರ ಹೆಣೆಯುತ್ತಿದೆ. ಕಾಂಗ್ರೆಸ್ ಸಮಾವೇಶಕ್ಕೆ ಪ್ರತಿಯಾಗಿ ಬಿಜೆಪಿ ಕೂಡ ಸಮಾವೇಶ ನಡೆಸಲು ಮುಂದಾಗಿದೆ.

ಇನ್ನು ಮತ್ತೊಂದೆಡೆ ಶುಕ್ರವಾರ ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯದಲ್ಲಿ ‘ಬಲವರ್ಧನೆಗಾಗಿ ಭೀಮ ಸಮಾವೇಶ’ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಎಸ್​ ಯಡಿಯೂರಪ್ಪ ರಾಜ್ಯ ಪ್ರವಾಣ ಮಾಡುವುದಾಗಿ ತಿಳಿಸಿದ್ದಾರೆ. ಪಕ್ಷ ಬಲಪಡಿಸಲು ಶೀಘ್ರವೇ ದಿನಕ್ಕೆ ಎರಡು ಜಿಲ್ಲೆಗಳಂತೆ ರಾಜ್ಯ ಪ್ರವಾಸ ಮಾಡುತ್ತೇನೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ ಎಲ್ಲ ಸ್ಥಾನಗಳನ್ನು ಗೆದ್ದು, ಮೋದಿಯವರ ಕೈ ಬಲಪಡಿಸಲಿದೆ ಎಂದು ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚುನಾವಣೆ ದೃಷ್ಟಿಯಿಂದ ರಾಜ್ಯ ಪ್ರವಾಸದ ವೇಳೆ ಪ್ರಮುಖರ ಜೊತೆಗೆ ಮಾತನಾಡುವೆ. ವಿಜಯೇಂದ್ರ ಅಧ್ಯಕ್ಷರಾದ ಬಳಿಕ ಬಿಜೆಪಿ ಹೆಚ್ಚು ಉತ್ಸಾಹದಿಂದ ಕೆಲಸ ಮಾಡುತ್ತಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಲ ತುಂಬಬೇಕು ಎಂದು ಬಿಎಸ್‌ವೈ ಮನವಿ ಮಾಡಿದರು.

ಇದನ್ನೂ ಓದಿ: ಶ್ರೀಕಾಂತ್​ಗೆ ಜಾಮೀನು: ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದ ಪ್ರತಿಭಟನೆ ಕೈಬಿಟ್ಟ ಬಿಜೆಪಿ

ಕಾಂಗ್ರೆಸ್ ಪಕ್ಷದಿಂದ ಒಡೆದು ಆಳುವ ನೀತಿ ಮಾಡುತ್ತಿದೆ

ಬ್ರಿಟಿಷರು, ಕಾಂಗ್ರೆಸ್ ಪಕ್ಷಕ್ಕೆ ಒಡಕನ್ನು ಮೂಡಿಸಿ ಆಡಳಿತ ನಡೆಸುವ ನೀತಿಯನ್ನು ಕೊಟ್ಟು ಹೋಗಿದ್ದಾರೆ. ಹೀಗಾಗಿಯೇ ಕಾಂಗ್ರೆಸ್ಸಿಗರು ಅದರ ದುರುಪಯೋಗವನ್ನು ಮಾಡಿಕೊಂಡು ಆಡಳಿತ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.

ನೆಹರೂ 17 ವರ್ಷ, ಇಂದಿರಾ ಗಾಂಧಿ, ರಾಜೀವ್ ಗಾಂಧಿಯವರು ಸೇರಿ ಕಾಂಗ್ರೆಸ್ ಪಕ್ಷವು 55- 60 ವರ್ಷ ದೇಶವನ್ನಾಳಿದೆ. ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ನೆಹರೂ ಕುಟುಂಬದ ಹಾಗೂ ಕಾಂಗ್ರೆಸ್‍ನ ರಬ್ಬರ್ ಸ್ಟಾಂಪ್ ಆಗಿದ್ದರು ಎಂದು ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ