ವಕೀಲೆ ಜೀವಾ ಆತ್ಮಹತ್ಯೆ ಕೇಸ್: ಹೈಕೋರ್ಟ್‌ಗೆ ವರದಿ ಸಲ್ಲಿಸಿದ ಎಸ್ಐಟಿ, ಸ್ಫೋಟಕ ಸತ್ಯ ಬಯಲು
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಬಹುಕೋಟಿ ಅವ್ಯವಹಾರದಲ್ಲಿ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಿ ಎಸ್ಐಟಿ ಇಂದು ಹೈಕೋರ್ಟ್‌ಗೆ ವರದಿ ಸಲ್ಲಿಸಿದೆ. ಎಸ್ಐಟಿ ಹೈಕೋರ್ಟ್‌ಗೆ ಸಲ್ಲಿಸಿರುವ 2300 ಪುಟಗಳ ವರದಿಯಲ್ಲಿ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದಲ್ಲಿ ಡಿವೈಎಸ್ಪಿ ಕನಕಲಕ್ಷ್ಮೀ ಅವರ ಕಿರುಕುಳ ಸಾಬೀತಾಗಿದೆ.

ಬೆಂಗಳೂರು, ಏಪ್ರಿಲ್ 13: ಭೋವಿ ನಿಗಮ ಹಗರಣ (Bhovi Corporation Scam) ಸಂಬಂಧ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಿದ್ದ ಎಸ್ಐಟಿ (SIT) ಅಧಿಕಾರಿಗಳು ಇದೀಗ ಒಟ್ಟು 2,300 ಪುಟಗಳ ಅಂತಿಮ ವರದಿಯನ್ನು ಸಿದ್ಧಪಡಿಸಿ ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ. ಐಪಿಎಸ್ ಅಧಿಕಾರಿಗಳಾದ ವಿನಾಯಕ್ ವರ್ಮಾ, ಅಕ್ಷಯ್ ಮಚೀಂದ್ರ, ನಿಶಾ ಜೇಮ್ಸ್ ನೇತೃತ್ವದ ವಿಶೇಷ ತನಿಖಾ ತಂಡದಿಂದ ವರದಿ ಸಲ್ಲಿಕೆ ಮಾಡಲಾಗಿದೆ. ಸಾಕ್ಷಿದಾರರ ಹೇಳಿಕೆ, ವಿಡಿಯೋ ಸಾಕ್ಷ್ಯಗಳ ಸಮೇತ ವರದಿ ನೀಡಿದ್ದು, ಜೀವಾಗೆ ಡಿವೈಎಸ್ಪಿ ಕನಕಲಕ್ಷ್ಮೀ ಕಿರುಕುಳ, ಹಿಂಸೆ ನೀಡಿರೋದು ಸಾಬೀತಾಗಿದೆ.
ಡಿಸೆಂಬರ್ನಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಹೈಕೋರ್ಟ್ ಸೂಚಿಸಿತ್ತು. ಸದ್ಯ ಹೈಕೋರ್ಟ್ ಸೂಚನೆಯಂತೆ ಎಸ್ಐಟಿಯಿಂದ ವರದಿ ಸಲ್ಲಿಕೆಯಾಗಿದ್ದು, ತನಿಖಾ ತಂಡದ ವರದಿಗೆ ಹೈಕೋರ್ಟ್ ಮೆಚ್ಚುಗೆ ವ್ಯಕ್ತಪಡಿಸಿದೆ.
ಎಸ್ಐಟಿ ಸಲ್ಲಿಸಿದ ವರದಿಯಲ್ಲಿ ಏನಿದೆ?
ಜೀವಾ ವಿಚಾರಣೆ ವೇಳೆ ಚಿತ್ರೀಕರಿಸಲಾಗಿದ್ದ ಕೆಲವು ವಿಡಿಯೋ ಡಿಲೀಟ್ ಆಗಿದ್ದವು. ಜೀವಾರನ್ನು ವಿವಸ್ತ್ರಗೊಳಿಸಿರುವುದು, ಇತರೆ ಕೆಲ ವಿಡಿಯೋಗಳು ಇರಲಿಲ್ಲ. ಎಫ್ಎಸ್ಎಲ್ ಮೂಲಕ ಮರು ಸಂಗ್ರಹಿಸಿದಾಗ ಆ ವಿಡಿಯೋಗಳು ಪತ್ತೆಯಾದವು. ಡೆತ್ನೋಟ್ನಲ್ಲಿ ಜೀವಾ ಮಾಡಿದ್ದ ಬಹುತೇಕ ಆರೋಪಗಳು ಸಾಬೀತಾಗಿದೆ.
ಇದನ್ನೂ ಓದಿ: ಭೋವಿ ನಿಗಮ ಬಹುಕೋಟಿ ಹಗರಣ: ಅಕ್ರಮ ಹಣ ವರ್ಗಾವಣೆ ಪತ್ತೆ, ಮಹತ್ವದ ದಾಖಲೆ ಕಲೆಹಾಕಿದ ED
ನ.22ರಂದು ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ವಕೀಲೆ ಜೀವಾ ಆತ್ಮಹತ್ಯೆ ನಡೆದಿತ್ತು. DySP ಕನಕಲಕ್ಷ್ಮೀ ಕಿರುಕುಳದ ಬಗ್ಗೆ 13 ಪುಟಗಳ ಡೆತ್ನೋಟ್ನಲ್ಲಿ ಜೀವಾ ಬರೆದಿದ್ದರು. ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತುದ್ದಂತೆ ಬನಶಂಕರಿ ಠಾಣೆಯಿಂದ ಪ್ರಕರಣ ಎಸ್ಐಟಿಗೆ ವರ್ಗಾವಣೆಯಾಗಿತ್ತು. ಬಳಿಕ ಹೈಕೋರ್ಟ್ ಸಿಬಿಐ ಅಧಿಕಾರಿಗಳನ್ನೂ ಒಳಗೊಂಡಂತೆ SIT ರಚಿಸಿತ್ತು.
ಮಾ.11ರಂದು DySP ಕನಕಲಕ್ಷ್ಮೀ ಬಂಧಿಸಿ ವಿಚಾರಣೆ ಮಾಡಿದ್ದ SIT, ಸದ್ಯ ತನಿಖೆ ಪೂರ್ಣಗೊಳಿಸಿ ಎಸ್ಐಟಿಯಿಂದ ಅಂತಿಮ ವರದಿ ಸಲ್ಲಿಸಲಾಗಿದೆ. ಆದರೆ ವಿಚಾರಣಾಧೀನ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸೋದು ಬಾಕಿ ಇದೆ. ಏಕೆಂದರೆ ಕನಕಲಕ್ಷ್ಮೀ ಸರ್ಕಾರಿ ಅಧಿಕಾರಿ ಆಗಿರುವುದರಿಂದ ಪ್ರಕರಣದ ಚಾರ್ಜ್ಶೀಟ್ ಸಲ್ಲಿಸಲು ಪ್ರಾಸಿಕ್ಯೂಷನ್ ಅನುಮತಿ ಬೇಕು. ಸದ್ಯ ಪ್ರಾಸಿಕ್ಯೂಷನ್ ಅನುಮತಿಗಾಗಿ SIT ಅಧಿಕಾರಿಗಳು ಕಾಯುತ್ತಿದ್ದಾರೆ.
ಇದನ್ನೂ ಓದಿ: ಕೋಟ್ಯಂತರ ರೂ. ಅವ್ಯವಹಾರ ಆರೋಪ; ಭೋವಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ಸಿಐಡಿ ಅಧಿಕಾರಿಗಳ ದಾಳಿ
ಇನ್ನು ಇದೇ ಪ್ರಕರಣದಲ್ಲಿ ಇತ್ತೀಚೆಗೆ ಮಾಜಿ ವ್ಯವಸ್ಥಾಪಕ ನಿರ್ದೇಶಕ ಬಿಕೆ ನಾಗರಾಜಪ್ಪರನ್ನು ಬಂಧಿಸಲಾಗಿತ್ತು. 14 ದಿನಗಳ ಕಾಲ ಇಡಿ ಕಸ್ಟಡಿಗೆ ಪಡೆದುಕೊಂಡಿತ್ತು. ಇಡಿ ತನಿಖೆ ವೇಳೆ ಭೋವಿ ಸಮುದಾಯದ ಏಜೆಂಟರ ಮೂಲಕ ಅಕ್ರಮ ಹಣ ವರ್ಗಾವಣೆ ಮಾಡಿರುವ ಮಹತ್ವದ ದಾಲೆಗಳನ್ನು ಪತ್ತೆ ಹಚ್ಚಿದ್ದರು.
ವರದಿ: ಪ್ರದೀಪ್ ಚಿಕ್ಕಾಟೆ
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 11:42 am, Sun, 13 April 25