ಭೋವಿ ನಿಗಮ ಅಕ್ರಮ ಕೇಸ್​; ಆರೋಪಿಗಳಿಂದ ಹಣ ಪಡೆದಿದ್ದ ಆರೋಪದಡಿ ತನಿಖಾಧಿಕಾರಿ ಅಮಾನತು

ಭೋವಿ ನಿಗಮದಲ್ಲಿ ಕೋಟ್ಯಂತರ ರೂ. ಅಕ್ರಮ ಆರೋಪ ಕೇಸ್​ಗೆ ಸಂಬಂಧಿಸಿ ಆರೋಪಿಗಳಿಂದ ಹಣ ಪಡೆದಿದ್ದ ಆರೋಪದಡಿ ತನಿಖಾಧಿಕಾರಿ ಎ.ಡಿ.ನಾಗರಾಜ್ ಅವರನ್ನು ಅಮಾನತು ಮಾಡಿ ಸಿಐಡಿ ಡಿಜಿ ಸಲೀಂ ಅವರು ಆದೇಶ ಹೊರಡಿಸಿದ್ದಾರೆ. ಸಿಐಡಿ ತನಿಖೆ ಮುಂದುವರೆಸಿದೆ.

ಭೋವಿ ನಿಗಮ ಅಕ್ರಮ ಕೇಸ್​; ಆರೋಪಿಗಳಿಂದ ಹಣ ಪಡೆದಿದ್ದ ಆರೋಪದಡಿ ತನಿಖಾಧಿಕಾರಿ ಅಮಾನತು
ತನಿಖಾಧಿಕಾರಿ ಎ.ಡಿ.ನಾಗರಾಜ್
Follow us
Shivaprasad
| Updated By: ಆಯೇಷಾ ಬಾನು

Updated on: Sep 26, 2024 | 12:46 PM

ಬೆಂಗಳೂರು, ಸೆ.26: ಭೋವಿ ನಿಗಮದಲ್ಲಿ (Bhovi Development Corporation) ಕೋಟ್ಯಂತರ ರೂ. ಅಕ್ರಮ ಆರೋಪ ಕೇಸ್​ಗೆ ಸಂಬಂಧಿಸಿ ತನಿಖಾಧಿಕಾರಿ ಎ.ಡಿ.ನಾಗರಾಜ್ ಅವರನ್ನು ಅಮಾನತು ಮಾಡಿ ಸಿಐಡಿ ಡಿಜಿ ಸಲೀಂ ಅವರು ಆದೇಶ ಹೊರಡಿಸಿದ್ದಾರೆ. ಆರೋಪಿಗಳಿಂದ ಹಣ ಪಡೆದಿದ್ದ ಆರೋಪದಡಿ ಅಮಾನತು (Suspend) ಮಾಡಲಾಗಿದೆ.

ಭೋವಿ ನಿಗಮದಲ್ಲಿ ಕೋಟ್ಯಂತರ ಹಣ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಸರ್ಕಾರ ಸಿಐಡಿ ತನಿಖೆಗೆ ಆದೇಶ ಮಾಡಿತ್ತು. ಈ ವೇಳೆ ಎ.ಡಿ. ನಾಗರಾಜಪ್ಪ ಹಾಗೂ ಲೀಲಾವತಿ ಸೇರಿ ಹಲವರನ್ನು ಬಂಧಿಸಲಾಗಿತ್ತು. ಆರೋಪಿಗಳನ್ನ ಬಂಧಿಸಿ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ತನಿಖೆ ವೇಳೆ ತನಿಖಾಧಿಕಾರಿ ನಾಗರಾಜಪ್ಪ ಅವರು ಆರೋಪಿಗಳಿಂದ ಹಣ ಪಡೆದಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಭ್ರಷ್ಟಾಚಾರ ಹಿನ್ನೆಲೆ ತನಿಖಾಧಿಕಾರಿಯಾಗಿದ್ದ ಎ.ಡಿ.ನಾಗರಾಜ್ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: ನೂರಾರು ಕತ್ತೆ ಸೇಲ್‌ ಮಾಡಿ ಮೋಸ: ಪ್ರಕರಣ ಸಿಐಡಿ ಕೈಗೆ, ಆರೋಪಿಗಳ​ ಪತ್ತೆಗೆ ವಿಶೇಷ ತಂಡ ರಚನೆ

2021-22ನೇ ಸಾಲಿನಲ್ಲಿ ಉದ್ಯಮಿಗಳಿಗೆ ಸಾಲ ನೀಡುವಾಗ ಅಕ್ರಮ ನಡೆದಿದ್ದು, ಲಕ್ಷಾಂತರ ರೂ. ಸಾಲಕೊಡಿಸುವುದಾಗಿ ಸಾರ್ವಜನಿಕ ದಾಖಲೆ ದುರ್ಬಳಕೆ ಜೊತೆಗೆ 10 ಕೋಟಿಗೂ ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ ಆರೋಪ ಕೇಳಿಬಂದಿದೆ. ಪ್ರಕರಣ ಮುಚ್ಚಿಹಾಕಲು ನಿಗಮದ ಅಧೀಕ್ಷಕ ಸುಬ್ಬಪ್ಪ, ‘ಭೋವಿ ಅಭಿವೃದ್ಧಿ ನಿಗಮದ ಲೆಕ್ಕಪತ್ರ ಕಡತ, ನಗದು ಪುಸ್ತಕಗಳು, ಯೋಜನಾ ಕಡತ, ಬ್ಯಾಂಕ್ ಚೆಕ್ ಸೇರಿ 200ಕ್ಕೂ ಹೆಚ್ಚು ಕಡತಗಳನ್ನು ಕಳವು ಮಾಡಿದ್ದ ಕುರಿತು ಬೆಂಗಳೂರು, ಬೆಂಗಳೂರು ಗ್ರಾ., ಕಲಬುರಗಿ ಜಿಲ್ಲೆಯಲ್ಲಿ ದೂರು ದಾಖಲು ಮಾಡಲಾಗಿತ್ತು. ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದ್ದು, ಸಿಐಡಿ ಅಧಿಕಾರಿಗಳು ಭೋವಿ ನಿಗಮದ ಅಧೀಕ್ಷಕ ಸುಬ್ಬಪ್ಪನನ್ನ ಬಂಧಿಸಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ