Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಯಲ್ಲಿ ಕ್ರೈಸ್ತ ಧರ್ಮ ಹೇರಿಕೆ ಆರೋಪ: ಹಿಂದೂ ಜನಜಾಗೃತಿ ಸಮಿತಿ ಆಕ್ರೋಶ

ಶಾಲೆಯಲ್ಲಿ ಬೈಲ್ ಓದುವುದು ಕಡ್ಡಾಯ ಎಂದು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಆಡಳಿತ ಮಂಡಳಿಯ ನಡೆಗೆ ಹಿಂದೂ ಜನಜಾಗೃತಿ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಶಾಲೆಯಲ್ಲಿ ಕ್ರೈಸ್ತ ಧರ್ಮ ಹೇರಿಕೆ ಆರೋಪ: ಹಿಂದೂ ಜನಜಾಗೃತಿ ಸಮಿತಿ ಆಕ್ರೋಶ
ಪವಿತ್ರ ಬೈಬಲ್ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Apr 24, 2022 | 12:15 PM

ಬೆಂಗಳೂರು: ಶಾಲೆಯಲ್ಲಿ ದಿನನಿತ್ಯ ಬೈಬಲ್ ಓದುವುದು ಕಡ್ಡಾಯಗೊಳಿಸುವ ಮೂಲಕ ವಿದ್ಯಾರ್ಥಿಗಳ ಮೇಲೆ ಕ್ರೈಸ್ತ ಧರ್ಮವನ್ನು ಹೇರಲಾಗುತ್ತಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬೆಂಗಳೂರಿನ ರಿಚರ್ಡ್​ ಟೌನ್​ನಲ್ಲಿರುವ ಕ್ಲಾರೆನ್ಸ್​ ಪ್ರೌಢಶಾಲೆಯಲ್ಲಿ ನಡೆದಿದೆ. ಬೈಬಲ್ ವಿರೋಧಿಸಿದರೆ ಶಾಲೆಗೆ ದಾಖಲಾತಿ ಸಿಗುವುದಿಲ್ಲ. ಶಾಲೆಯಲ್ಲಿ ಬೈಲ್ ಓದುವುದು ಕಡ್ಡಾಯ ಎಂದು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಆಡಳಿತ ಮಂಡಳಿಯ ನಡೆಗೆ ಹಿಂದೂ ಜನಜಾಗೃತಿ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಆಡಳಿತ ಮಂಡಳಿಯು ಹೇರುತ್ತಿರುವ ಈ ನಿಯಮವು ಮಕ್ಕಳ ಹಕ್ಕುಗಳ ಸಂರಕ್ಷಣೆ ಅಧಿನಿಯಮ 2005 ಹಾಗೂ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘನೆ ಮಾಡಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ಹೇಳಿದೆ. ಮಕ್ಕಳು ಉತ್ತಮ ನಾಗರಿಕನಾಗಲು ಬೈಬಲ್ ಕಲಿಕೆ ಮುಖ್ಯ. ಬೈಬಲ್ ಕಲಿಕೆ ವಿರೋಧಿಸುವವರಿಗೆ ಶಾಲೆಯಲ್ಲಿ ಅಡ್ಮಿಷನ್ ಸಿಗುವುದಿಲ್ಲ. ದಿನನಿತ್ಯ ಬೈಬಲ್ ಓದುವುದು ಶಾಲೆಯಲ್ಲಿ ಕಡ್ಡಾಯ ಎಂದು ಆಡಳಿತ ಮಂಡಳಿ ತಿಳಿಸಿದೆ.

ಕ್ಲಾರೆನ್ಸ್​ ಸ್ಕೂಲ್ ಬೈಬಲ್ ಓದುವುದನ್ನು ಕಡ್ಡಾಯಗೊಳಿಸಿರುವ ಕುರಿತು ರಿಪಬ್ಲಿಕ್ ವರ್ಲ್ಡ್​ ಜಾಲತಾಣಕ್ಕೆ ಪ್ರತಿಕ್ರಿಯಿಸಿರುವ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ್ ಗೌಡ, ‘ಯಾವುದೇ ಧರ್ಮಕ್ಕೆ ಸೇರಿದವರಾಗಿದ್ದರೂ ಕ್ಲಾರೆನ್ಸ್ ಶಾಲೆಯಲ್ಲಿ ಓದುವ ವಿದ್ಯಾರ್ಥಿಗಳು ಬೈಬಲ್ ಇರಿಸಿಕೊಳ್ಳಬೇಕು. ಓದಬೇಕು ಎಂಬ ನಿಯಮವಿದೆ. ಶಾಲೆಯ ದಾಖಲಾತಿ ಅರ್ಜಿಯಲ್ಲಿಯೂ ಈ ಅಂಶವನ್ನು ನಮೂದಿಸಲಾಗಿದೆ. ಶಾಲೆಯಲ್ಲಿ ಕ್ರಿಶ್ಚಿಯನ್ ಧರ್ಮಕ್ಕೆ ಸೇರದ ಹಲವು ವಿದ್ಯಾರ್ಥಿಗಳಿದ್ದಾರೆ. ಅವರಿಗೆ ಒತ್ತಾಯಪೂರ್ವಕವಾಗಿ ಬೈಬಲ್ ಕಲಿಸಲಾಗುತ್ತಿದೆ’ ಎಂದು ದೂರಿದ್ದಾರೆ.

ಶಾಲೆಯ ಈ ನಡೆಯು ಸಂವಿಧಾನದ 25 ಮತ್ತು 30ನೇ ವಿಧಿಗಳ ಉಲ್ಲಂಘನೆಯಾಗುತ್ತದೆ. ಯಾವುದೇ ಶಿಕ್ಷಣ ಸಂಸ್ಥೆಯು ಧಾರ್ಮಿಕ ನಂಬಿಕೆಗಳನ್ನು ಹೇರುವಂತಿಲ್ಲ ಎಂಬ ನಿಯಮವಿದೆ ಎಂದು ಮೋಹನ್ ಗೌಡ ತಿಳಿಸಿದ್ದಾರೆ.

ಇದನ್ನೂ ಓದಿ: Gadag Jail: ಗದಗ ಕಾರಾಗೃಹದಲ್ಲಿ ಕೈದಿಗಳಿಗೆ ಕ್ರೈಸ್ತರ ಬೈಬಲ್​ ಹಂಚುವ ಮೂಲಕ ಮತಾಂತರ ನಡೆಸಿದ ಆರೋಪ

ಇದನ್ನೂ ಓದಿ: ಸಂವಿಧಾನದಲ್ಲಿ ಇರುವ ವಿಚಾರಗಳೇ ಬೈಬಲ್, ಕುರಾನ್, ಭಗವದ್ಗೀತೆಯಲ್ಲಿ ಇದೆ: ಡಿಕೆ ಶಿವಕುಮಾರ್

ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ