ಪಿಎಸ್ಐ ನೇಮಕ ಅಕ್ರಮ: ಕೊನೆಗೂ ಎಡಿಜಿಪಿ ಅಮೃತ್ ಪಾಲ್ ಅರೆಸ್ಟ್, ಬಂಧಿತ ಐಪಿಎಸ್ ಅಧಿಕಾರಿ ಸಿಐಡಿ ಕಸ್ಟಡಿಗೆ

ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಅಮೃತ್ ಪಾಲ್ ಕಚೇರಿಯಲ್ಲೇ ಒಎಂಆರ್ ಶೀಟ್‌ ತಿದ್ದಲಾಗಿದೆ. ಯಾವೊಬ್ಬ ಅಧಿಕಾರಿಯನ್ನೂ ಬಿಡದಂತೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಪಿಎಸ್ಐ ನೇಮಕ ಅಕ್ರಮ: ಕೊನೆಗೂ ಎಡಿಜಿಪಿ ಅಮೃತ್ ಪಾಲ್ ಅರೆಸ್ಟ್, ಬಂಧಿತ ಐಪಿಎಸ್ ಅಧಿಕಾರಿ ಸಿಐಡಿ ಕಸ್ಟಡಿಗೆ
ಅಮೃತ್ ಪಾಲ್
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 04, 2022 | 4:50 PM

ಬೆಂಗಳೂರು: ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ ಎಡಿಜಿಪಿ(ADGP) ಶ್ರೇಣಿಯ ಐಪಿಎಸ್(IPS) ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. 545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ(PSI Recruitment Scam) ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ(CID) ಪೊಲೀಸರು ಎಡಿಜಿಪಿ ಅಮೃತ್ ಪಾಲ್​ರನ್ನು(ADGP Amruth Paul) ಬಂಧಿಸಿದ್ದಾರೆ. ಸಾಕ್ಷ್ಯಾಧಾರ ಸಿಕ್ಕಿದ್ದರಿಂದ ಅಮೃತ್ ಪಾಲ್ ಬಂಧಿಸಲಾಗಿದೆ ಎಂದು ಟಿವಿ9ಗೆ ಗೃಹ ಸಚಿವ ಆರಗ ಜ್ಞಾನೇಂದ್ರ( ತಿಳಿಸಿದ್ದಾರೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಅಮೃತ್ ಪಾಲ್ ಕಚೇರಿಯಲ್ಲೇ ಒಎಂಆರ್ ಶೀಟ್‌ ತಿದ್ದಲಾಗಿದೆ. ಯಾವೊಬ್ಬ ಅಧಿಕಾರಿಯನ್ನೂ ಬಿಡದಂತೆ ಸೂಚಿಸಲಾಗಿದೆ. ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲು ಸೂಚಿಸಿದ್ದೇವೆ. ಸಿಐಡಿ ಪೊಲೀಸರಿಗೆ ಮುಕ್ತ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

ಸಿಐಡಿ ಪೊಲೀಸರು ಎಡಿಜಿಪಿ ಅಮೃತ್ ಪಾಲ್​ರನ್ನು ಬಂಧಿಸಿ ವೈದ್ಯಕೀಯ ತಪಾಸಣೆಗೆ ಕರೆದೊಯ್ದಿದ್ದಾರೆ. ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಯಲಿದೆ. ಅಮೃತ್ ಪಾಲ್ ವೈದ್ಯಕೀಯ ತಪಾಸಣೆ ಬಳಿಕ ಮ್ಯಾಜೀಸ್ಟೇಟ್​ ಕೋರ್ಟ್​ಗೆ​ ಹಾಜರು ಪಡಿಸಲು ಸಿದ್ದತೆ ನಡೆದಿದೆ.

ಅಮೃತ್ ಪಾಲ್‌ ನ್ಯಾಯಾಂಗ ಬಂಧನಕ್ಕೆ: PSI ಅಕ್ರಮ ನೇಮಕಾತಿಯಲ್ಲಿ CID ಪೊಲೀಸರಿಂದ ಬಂಧನಕ್ಕೀಡಾಗಿರುವ ಎಡಿಜಿಪಿ ಅಮೃತ್ ಪಾಲ್‌ ಅವರನ್ನು ಸಿಐಡಿ ಅಧಿಕಾರಿಗಳ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಕಳೆದ ಅಕ್ಟೋಬರ್ 3 ರಂದು ಪಿಎಸ್ಐ ನೇಮಕಾತಿ ಪರೀಕ್ಷೆ ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ 93 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಈಗಾಗಲೇ ನೇಮಕಾತಿ ವಿಭಾಗದ ಡಿವೈಎಸ್ ಪಿ ಶಾಂತಕುಮಾರ್, ಎಫ್ ಡಿ ಎ ಹರ್ಷಾ, ಸಿಬ್ಬಂದಿಗಳಾದ ಶ್ರೀಧರ್, ಶ್ರೀನಿವಾಸ್ ಬಂಧಿತರಾಗಿದ್ದರು. ಪ್ರಕರಣ ಸಂಬಂಧ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಎಡಿಜಿಪಿ ಅಮೃತ್ ಪಾಲ್ ಅವರನ್ನು ನಾಲ್ಕನೇ ಬಾರಿಗೆ ಇಂದು ಸಿಐಡಿ ವಿಚಾರಣೆಗೆ ಕರೆದಿತ್ತು. ಡಿವೈಎಸ್ ಪಿ ಶಾಂತಕುಮಾರ್ ಬಂಧನಕ್ಕೂ ಮೊದಲೆ ಬಂಧಿತ ಎಡಿಜಿಪಿ ಅಮೃತ್ ಪೌಲ್ ಎತ್ತಂಗಡಿ ಮಾಡಲಾಗಿತ್ತು. ಪ್ರಕರಣ ಹೊರಬಂದು ಪಿಎಸ್ಐ ಅಕ್ರಮ ಕೇಸ್ ದಾಖಲಾಗ್ತಿದ್ದಂತೆ ISD ಆಂತರಿಕ ಭದ್ರತಾ ವಿಭಾಗಕ್ಕೆ ಅವರನ್ನು ಎತ್ತಂಗಡಿ ಮಾಡಲಾಗಿತ್ತು. ಅಮೃತ್‌ಪಾಲ್ ರಿಂದ ಸಿಐಡಿ ಹಿರಿಯ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಂಡಿದ್ದರು.

Published On - 3:08 pm, Mon, 4 July 22

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್